ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ವಿಶೇಷ ಪ್ರದರ್ಶನ, ಮಾರಾಟ ಮೇಳ
ಬೆಂಗಳೂರು ಏಪ್ರಿಲ್ 07: ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳ ದ ಸೋಕ್ ಮಾರ್ಕೇಟನ್ನು ಆಯೋಜಿಸಲಾಗಿದೆ. ಈ ಮೇಳವನ್ನು ಮಿಸ್ ಗ್ಲೋಬ್ ಇಂಡಿಯಾ ಸೌಂದರ್ಯ ಗೌಡ ಮತ್ತು ನಟಿ ಮತ್ತು ರೂಪದರ್ಶಿ ಮಧುಶ್ರೀ ಉದ್ಘಾಟಿಸಲಿದ್ದಾರೆ.
ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಬೆಳಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದ್ದು, ಪ್ರವೇಶ ಉಚಿತವಾಗಿದೆ.
80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್ ಲೂಮ್ ಸ್ಯಾರಿಯನ್ನು ಸೆಲೆಕ್ಟ್ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ.

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.

ಮೇಳದಲ್ಲಿ ತಸ್ಸರ್ ರೇಷ್ಮೆ ಸೀರೆಗಳು, ಕ್ರೇಪ್ ಮತ್ತು ಜಾರ್ಜೆಟ್ ಸಿಲ್ಕ್ ಸೀರೆಗಳು, ಅರಿಣಿ ರೇಷ್ಮೆ ಸೀರೆಗಳು, ಧರ್ಮಾವರಂ ಸೀರೆಗಳು, ಕಾಂಚಿಪುರಂ ಸಿಲ್ಕ್ ಮತ್ತು ಮದುವೆ ಸೀರೆಗಳು, ರಾ ಸಿಲ್ಕ್ ಮತ್ತು ಕೋಸಾ ಸೀರೆಗಳು, ಕಲ್ಕೊತ್ತಾ ಗಣಪತಿ ಸೀರೆಗಳು, ಢಾಕ ಸೀರೆಗಳು, ಡಿಸೈನರ್ ಎಂಬ್ರಾಯಿಡರಿ ಸೀರೆ ಮತ್ತು ಡ್ರೆಸ್, ಬಲ್‍ಚೂರಿ ರೇಷ್ಮೆ, ಮಟ್ಕಾ ಸೀರೆಗಳು, ಪ್ರೀಂಟೆಡ್ ಸೀರೆಗಳು, ಪಶ್ಮೀನಾ ಸೀರೆಗಳು, ಡಿಸೈನರ್ ಡ್ರೆಸ್ ಮೇಟಿರಿಯಲ್ಸ್ ಗಳು ಮತ್ತು ಸೀರೆಗಳು, ಬಾಗಲ್‍ಪುರ್ ರೇಷ್ಮೆ ಸೀರೆ ಮತ್ತು ಡ್ರೆಸ್, ಉಪ್ಪಡಾ ಮತ್ತು ಗೊಡ್ವಾಲ್ ಸೀರೆಗಳು, ಮಹೇಶ್ವರಿ ಮತ್ತು ಕೋಟಾ ಸಿಲ್ಕ್, ಟೆಂಪಲ್ ಬಾರ್ಡರ್ ಉಳ್ಳ ಮುಲ್‍ಬಾರಿ ಸಿಲ್ಕ್, ಕಲ್ಕೋತ್ತಾ ರೇಷ್ಮೆ ಸೀರೆಗಳು, ಬನಾರಸ್ ಮತ್ತು ಜಮ್‍ದಾನಿ ರೇಷ್ಮೆ, ಶಿಫಾನ್ ಸೀರೆಗಳು, ಬುಟ್ಟಿ ಸೀರೆಗಳು, ಚಂದೇರಿ ಸಿಲ್ಕ್ ಮತ್ತು ಕೈ ಅಚ್ಚಿನ ಸೀರೆಗಳು ಪ್ರದರ್ಶನಗೊಳ್ಳಲಿದೆ.
ದ ಸೋಕ್ ಮಾರ್ಕೇಟ್ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ
ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ (ಶಿವಾನಂದ ವೃತ್ತದ ಬಳಿ)
ದಿನಾಂಕ: ಏಪ್ರಿಲ್ 8 ರಿಂದ ಏಪ್ರಿಲ್ 17 ರ ರವರೆಗೆ
ಸಮಯ: ಬೆಳಗ್ಗೆ 11 ಗಂಟೆಯಿಂದ ಸಂಜೆ 7 ರ ವರೆಗೆ












Click it and Unblock the Notifications