ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಧಾನಸೌಧದ ಎರಡನೇ ಮಹಡಿಯಲ್ಲಿ ಬೆಂಕಿ:ಆತಂಕ

|
Google Oneindia Kannada News

Recommended Video

Short Circuit at Vidhana Soudha

ಬೆಂಗಳೂರು, ನವೆಂಬರ್ 7: ಬೆಂಗಳೂರಿನ ವಿಧಾನಸೌಧದಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು.

ವಿಧಾನಸೌಧದ ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಅಗ್ನಿಶಾಮಕ ದಳ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಧಾನಸೌಧದಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ ಕಾಣಿಸಿಕೊಂಡು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿತು. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿಯನ್ನು ನಂದಿಸಿದರು.

Short Circuit In Vidhana Soudha

ವಿಧಾನಸೌದ ಎರಡನೇ ಮಹಡಿಯಲ್ಲಿರುವ ಆರ್ಥಿಕ ಇಲಾಖೆ ವಿಶೇಷ ಕಾರ್ಯದರ್ಶಿ ಪದ್ಮಾವತಿ ಅವರ ಕಚೇರಿಯ ಎರಡು ಎ.ಸಿಗಳ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ ಕಾಣಿಸಿಕೊಂಡಿತು.

ಇದರಿಂದ ಕೆಲಕಾಲ ವಿಧಾನಸೌಧ ಸಿಬ್ಬಂದಿ ಆತಂಕ ಮನೆ ಮಾಡಿತ್ತು. ಬೆಂಕಿ ಕಿಡಿಗಳು ಕಾಣಿಸುತ್ತಿದ್ದಂತ್ತೆ ಸಿಬ್ಬಂದಿ ವಿದ್ಯುತ್ ಸ್ಥಗಿತಗೊಳಿಸಿದ್ದಾರೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿಯನ್ನು ನಂದಿಸಿದ್ದಾರೆ. ಯಾವುದೇ ಅಪಾಯ ಸಂಭವಿಸಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

ವಿಧಾನಸೌಧದ 203 ರೂಂ ನಂಬರ್ ಆರ್ಥಿಕ ಇಲಾಖೆ ಉಪ ಕಾರ್ಯದರ್ಶಿ ಪದ್ಮಾವತಿ ಅವರ ಕಚೇರಿಯಲ್ಲಿ ಈ ಅನಾಹುತ ಸಂಭವಿಸಿದೆ.

English summary
Short Circuit At Vidhana Soudha Building On Wednesday Evening.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X