ಕಾರ್ಮಿಕರು vs ಆಡಳಿತ ಮಂಡಳಿ: ಮಾಜಿ ಸಿಎಂ ಸರಣಿ ಟ್ವೀಟ್
ಬೆಂಗಳೂರು, ಡಿಸೆಂಬರ್ 20: ಖಾಸಗಿ ಕಂಪೆನಿಗಳ ಆಡಳಿತ ಮಂಡಳಿಗಳು ಮತ್ತು ಕಾರ್ಮಿಕರ ನಡುವೆ ಉಂಟಾಗಿರುವ ಬಿಕ್ಕಟ್ಟನ್ನು ಸರ್ಕಾರದ ಮಧ್ಯಸ್ಥಿಕೆ ಮೂಲಕ ಸೌಹಾರ್ದಯುತವಾಗಿ ಇತ್ಯರ್ಥಪಡಿಸಬೇಕು ಹಾಗೂ ಈಗಾಗಲೇ ಜಾರಿಗೆ ತಂದಿರುವ ಎಲ್ಲ ಜನವಿರೋಧಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆಗ್ರಹಿಸಿದರು.
ಈ ಕುರಿತು ಟ್ವೀಟ್ ಮೂಲಕ ಒತ್ತಾಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೊರೊನಾ ಲಾಕ್‌ಡೌನ್ ಅವಧಿಯಲ್ಲಿ ಕಾರ್ಮಿಕರಿಗೆ ಶೇ.80 ರಷ್ಟು ಸಂಬಳ ಸಿಕ್ಕಿಲ್ಲ ಎಂದು ಕೈಗಾರಿಕೆಗಳ ಮ್ಯಾನೇಜ್‍ಮೆಂಟ್ ಅಸೋಸಿಯೇಷನ್ ಹೇಳಿದೆ. ಶೇ.70ರಷ್ಟು ಹಂಗಾಮಿ ಕಾರ್ಮಿಕರನ್ನು, ತರಬೇತಿಯಲ್ಲಿದ್ದ ಕಾರ್ಮಿಕರನ್ನು ಈ ಅವಧಿಯಲ್ಲಿ ಕೆಲಸದಿಂದ ತೆಗೆದುಹಾಕಲಾಗಿದೆ. ಇದರಿಂದ ಲಕ್ಷಾಂತರ ಕಾರ್ಮಿಕರ ಬದುಕು ಬೀದಿಪಾಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುಸೂತ್ರವಾಗಿ ನಡೆಯುತ್ತಿದ್ದ ಬಿಡದಿಯ ಟೊಯೊಟೊ ಕಂಪನಿಯ ಘಟಕವನ್ನು ಲಾಕೌಟ್ ಮಾಡಲಾಗಿದೆ. ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿ ಇರುವ ವಿಸ್ಟ್ರಾನ್ ಎಂಬ ಕಂಪನಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸೂಕ್ತ ವೇತನ ನೀಡುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ ಎಂದು ಪ್ರಸ್ತಾಪಿಸಿದ್ದಾರೆ.
ಖಾಸಗಿ ಕಂಪೆನಿಗಳ ಆಡಳಿತ ಮಂಡಳಿಗಳು ಮತ್ತು ಕಾರ್ಮಿಕರ ನಡುವೆ ಉಂಟಾಗಿರುವ ಬಿಕ್ಕಟ್ಟನ್ನು ಸರ್ಕಾರದ ಮಧ್ಯಸ್ಥಿಕೆ ಮೂಲಕ ಸೌಹಾರ್ದಯುತವಾಗಿ ಇತ್ಯರ್ಥಪಡಿಸಬೇಕು ಹಾಗೂ ಈಗಾಗಲೇ ಜಾರಿಗೆ ತಂದಿರುವ ಎಲ್ಲ ಜನವಿರೋಧಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು @CMofKarnataka ಅವರನ್ನು ಆಗ್ರಹಿಸುತ್ತೇನೆ. 1/5 pic.twitter.com/g6ptpwvRW0
— Siddaramaiah (@siddaramaiah) December 20, 2020
ರಾಮನಗರ ಜಿಲ್ಲೆಯಲ್ಲಿರುವ ಅರವಿಂದ್ ಫ್ಯಾಷನ್ಸ್ ಎಂಬ ಸಿದ್ಧ ಉಡುಪು ಕಾರ್ಖಾನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಕುಸಿದಿದೆ ಎನ್ನುವ ನೆಪ ಹೇಳಿ ಏಕಾಏಕಿ ಬಂದ್ ಮಾಡಿದೆ. ಕಾರ್ಮಿಕರಿಗೆ ಕಾರ್ಮಿಕ ನಿಯಮಗಳ ಪ್ರಕಾರ ಕೊಡಬೇಕಾದ ಹಣವನ್ನೂ ನೀಡದೇ ಬಂದ್ ಮಾಡಿರುವುದರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ ಎಂದರು.
ಕೊರೊನಾ ಲಾಕ್‌ಡೌನ್ ಅವಧಿಯಲ್ಲಿ ಕಾರ್ಮಿಕರಿಗೆ ಶೇ.80 ರಷ್ಟು ಸಂಬಳ ಸಿಕ್ಕಿಲ್ಲ ಎಂದು ಕೈಗಾರಿಕೆಗಳ ಮ್ಯಾನೇಜ್‍ಮೆಂಟ್ ಅಸೋಸಿಯೇಷನ್ ಹೇಳಿದೆ . ಶೇ.70ರಷ್ಟು ಹಂಗಾಮಿ ಕಾರ್ಮಿಕರನ್ನು, ತರಬೇತಿಯಲ್ಲಿದ್ದ ಕಾರ್ಮಿಕರನ್ನು ಈ ಅವಧಿಯಲ್ಲಿ ಕೆಲಸದಿಂದ ತೆಗೆದುಹಾಕಲಾಗಿದೆ. ಇದರಿಂದ ಲಕ್ಷಾಂತರ ಕಾರ್ಮಿಕರ ಬದುಕು ಬೀದಿಪಾಲಾಗಿದೆ. 2/5
— Siddaramaiah (@siddaramaiah) December 20, 2020
ತಿಂಗಳುಗಟ್ಟಲೆ ಕಾರ್ಮಿಕರು ಶಾಂತ ರೀತಿಯಿಂದ ಪ್ರತಿಭಟಿಸುತ್ತಿದ್ದರೂ ಕ್ಯಾರೇ ಅನ್ನದ ಸರ್ಕಾರ, ಮಂತ್ರಿಗಳು ಕಾರ್ಮಿಕರ ಹೋರಾಟ ತೀವ್ರ ಸ್ವರೂಪಕ್ಕೆ ತಿರುಗಿದ ತಕ್ಷಣ ರೈತರನ್ನು, ಕಾರ್ಮಿಕರನ್ನು ಕಳ್ಳರು, ರಾಷ್ಟ್ರದ್ರೋಹಿಗಳು ಎಂದು ಬಿಂಬಿಸಿ ಪೊಲೀಸರ ಮೂಲಕ ಇಲ್ಲ ಸಲ್ಲದ ಪ್ರಕರಣಗಳನ್ನು ದಾಖಲಿಸಿ ಗೂಂಡಾಗಿರಿ ನಡೆಸುತ್ತಿವೆ ಎಂದು ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.












Click it and Unblock the Notifications