ಬೆಂಗಳೂರು ಎಟಿಎಂ ವ್ಯಾನ್ ದರೋಡೆ ಪ್ರಕರಣ ತನಿಖೆ ಪೂರ್ಣ: 9 ಆರೋಪಿಗಳ ವಿರುದ್ಧ 1,328 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ
Bengaluru ATM van robbery Case: 7.11 ಕೋಟಿ ರೂಪಾಯಿ ಮೌಲ್ಯದ ಎಟಿಎಂ ವ್ಯಾನ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸ್ರು ತನಿಖೆ ಪೂರ್ಣಗೊಳಿಸಿದ್ದಾರೆ. ಬಂಧಿತರಾದ ಒಂಬತ್ತು ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
"ಹೈಪ್ರೊಫೈಲ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ತನಿಖೆಯನ್ನು ಪೂರ್ಣಗೊಳಿಸಿದ್ದು, ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ 9 ಮಂದಿ ಆರೋಪಿಗಳ ವಿರುದ್ಧ 1,328 ಪುಟಗಳ ವಿಶಾಲವಾದ ಚಾರ್ಜ್ಶೀಟ್ ಅನ್ನು 56ನೇ ಎಸಿಎಮ್ಎಂ (CCH) ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ," ಎಂದು ದಕ್ಷಿಣ ವಿಭಾಗದ ಪೊಲೀಸ್ ಉಪ ಆಯುಕ್ತ ಲೋಕೇಶ್ ಬಿ ಜಗಲಾಸರ್ ತಿಳಿಸಿದ್ದಾರೆ.

ಕಳೆದ ವರ್ಷ 2025 ನವೆಂಬರ್ನಲ್ಲಿ, ಆರ್ಬಿಐ ಅಧಿಕಾರಿಗಳಂತೆ ನಟಿಸಿದ್ದ ಗ್ಯಾಂಗ್ವು CMO ಇನ್ಫೋ ಸಿಸ್ಟಂಸ್ ಸಂಸ್ಥೆಯ ನಗದು ಸಾಗಣೆ ವ್ಯಾನ್ ಅನ್ನು ಅಡ್ಡಗಟ್ಟಿ, ಎಟಿಎಂಗಳಲ್ಲಿ ಠೇವಣಿ ಇಡಲು ಸಾಗಿಸಲಾಗುತ್ತಿದ್ದ ದೊಡ್ಡ ಮೊತ್ತದ ಹಣವನ್ನು ದೋಚಿ ಪರಾರಿಯಾಗಿತ್ತು. ಈ ಹೈಪ್ರೊಫೈಲ್ ಪ್ರಕರಣದ ತನಿಖೆಯನ್ನು ಗಂಭೀರವಾಗಿ ಕೈಗೆತ್ತಿಕೊಳ್ಳಲಾಗಿದ್ದು, ಕೇವಲ 54 ಗಂಟೆಗಳೊಳಗೆ ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.
ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿ: ಪೊಲೀಸರು ಮೊದಲಿಗೆ ಗೋವಿಂದಪುರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್, ನಗದು ಲಾಜಿಸ್ಟಿಕ್ಸ್ ಸಂಸ್ಥೆ ಇನ್ಫೋ ಸಿಸ್ಟಮ್ಸ್ನ ಮಾಜಿ ಉದ್ಯೋಗಿ ಜೆ.ಜಾವಿಯರ್, ಲಾಜಿಸ್ಟಿಕ್ ಸಂಸ್ಥೆಯ ಫ್ಲೀಟ್ ಮ್ಯಾನೇಜರ್ ಗೋಪಾಲ್ ಪ್ರಸಾದ್ ಅಲಿಯಾಸ್ ಗೋಪಿ ಹಾಗೂ ಅವರ ಸಹಚರರಾದ ರವಿ, ನವೀನ್ ಮತ್ತು ನೆಲ್ಸನ್ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರಿ.
ವಿವಿಧ ಕಲಂಗಳಡಿ ಪ್ರಕರಣ ದಾಖಲು: "ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) 2023ರ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ದರೋಡೆ, ಸಾಕ್ಷ್ಯ ನಾಶಪಡಿಸುವುದು, ಕ್ರಿಮಿನಲ್ ಸಂಚು, ಕ್ರಿಮಿನಲ್ ಬೆದರಿಕೆ ಸೇರಿದಂತೆ ಇತರೆ ಸಂಬಂಧಿತ ಕಲಂಗಳು ಸೇರಿವೆ," ಎಂದು ಡಿಸಿಪಿ ತಿಳಿಸಿದ್ದಾರೆ.
ತನಿಖಾ ತಂಡವು ಆರೋಪಗಳನ್ನು ದೃಢಪಡಿಸಲು 129 ಸಾಕ್ಷ್ಯಾಧಾರಗಳನ್ನು ಒಳಗೊಂಡ ಬಲವಾದ ಪ್ರಕರಣ ದಾಖಲೆಯನ್ನು ಸಿದ್ಧಪಡಿಸಿದೆ. ಇದರಲ್ಲಿ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಗಳು, ಪ್ರಮುಖ ತಾಂತ್ರಿಕ ಸಾಕ್ಷ್ಯಗಳು ಹಾಗೂ ಆರೋಪಿಗಳನ್ನು ಗುರುತಿಸಲು ಸಹಾಯಕವಾದ ಬೆರಳಚ್ಚು ಗುರುತುಗಳಂತಹ ಫಾರೆನ್ಸಿಕ್ ಸಾಕ್ಷ್ಯಗಳು ಸೇರಿವೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications