ಬೆಂಗಳೂರಿಗಾಗಿ ₹1.15 ಲಕ್ಷ ಕೋಟಿಗೆ ಬೇಡಿಕೆ ಇಟ್ಟ ಸಿದ್ದರಾಮಯ್ಯ: ಕೇಂದ್ರ ಸಚಿವೆ ಹೇಳಿದ್ದೇನು?

ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಇಂದು ದಿನವಿಡೀ ಸಿದ್ದರಾಮಯ್ಯ ಅವರು ಸುದೀರ್ಘ ಚರ್ಚೆ ನಡೆಸಿದ್ದು, ಕರ್ನಾಟಕಕ್ಕೆ ಸಂಬಂಧಿಸಿದ ಮಹತ್ವದ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ, ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್‌ಗಳ ಬಗ್ಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್‌ಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದು, ಅವುಗಳನ್ನು ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದೇನೆ ಎಂದಿದ್ದಾರೆ.

ಬಳಿಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದೆ. ಬೆಂಗಳೂರು ಜಾಗತಿಕ ನಗರವಾಗಿದ್ದು, ನಗರದ ಬಂಡವಾಳ ಕಾರ್ಯಗಳಿಗೆ ₹1.15 ಲಕ್ಷ ಕೋಟಿ ರೂಪಾಯಿ ಬೇಕಾಗಿದೆ. ಇದಕ್ಕಾಗಿ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ. ಮಲೆನಾಡು ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಪ್ರವಾಹದಿಂದಾಗುವ ಅನಾಹುತಗಳನ್ನು ನಿಭಾಯಿಸಲು ವಿಶೇಷ ಅನುದಾನ, ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ. ರಾಜ್ಯಕ್ಕೆ ಅಗತ್ಯವಿರುವ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಲಾಗಿದೆಯೇ ಹೊರತು ಆರೋಪ ಮಾಡಿಲ್ಲ. ರಾಜ್ಯಕ್ಕೆ ಅನ್ಯಾಯವಾಗಿದ್ದರೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆಯನ್ನು ಕೇಂದ್ರ ವಿತ್ತ ಸಚಿವರು ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

siddaramaiah-asks-1-15-lakh-crores-for-bengaluru-nirmala-sitharaman-response

ವಾರದ ಹಿಂದೆ 16ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಭೇಟಿ ಮಾಡಿದ್ದು, ಎರಡನೇ ಹೆಚ್ಚುವರಿ ಮನವಿಯನ್ನು ನೀಡಿದ್ದೇನೆ. 14ನೇ ಹಣಕಾಸು ಆಯೋಗದಲ್ಲಿ ಶೇ 4.7ರಷ್ಟು ತೆರಿಗೆ ಹಂಚಿಕೆಯಾಗಿತ್ತು. 15ನೇ ಹಣಕಾಸು ಆಯೋಗದಲ್ಲಿ ಶೇ 3.6ರಷ್ಟು ಆಗಿದೆ. ಶೇಕಡಾ 1.1ರಷ್ಟು ಕಡಿಮೆಯಾಗಿದ್ದು, ಇದು ಒಟ್ಟಾರೆ ಅನುದಾನ ಹಂಚಿಕೆಯಲ್ಲಿ ಶೇ 23ಕ್ಕಿಂತಲೂ ಕಡಿಮೆಯಾಗಿದೆ. 5 ವರ್ಷಗಳಲ್ಲಿ ಒಟ್ಟು ₹80,000 ಕೋಟಿ ರೂಪಾಯಿ ರಾಜ್ಯಕ್ಕೆ ನಷ್ಟವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯಕ್ಕೆ 80,000 ಕೋಟಿ ಅನ್ಯಾಯ

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ₹63 ಸಾವಿರ ಕೋಟಿ ಅನ್ಯಾಯವಾಗಿದ್ದು, ರಾಜ್ಯಕ್ಕೆ ವಿಶೇಷ ಅನುದಾನ ₹5,495 ಕೋಟಿ ಮೀಸಲಿಡಲಾಗಿತ್ತು. ಪೆರಿಫೆರಲ್ ರಿಂಗ್ ರೋಡ್‌ಗೆ ₹3,000 ಕೋಟಿ, ಬೆಂಗಳೂರಿನ ಕೆರೆಗಳ ಅಭಿವೃದ್ಧಿಗಾಗಿ ₹3,000 ಕೋಟಿ ಸೇರಿದಂತೆ ಒಟ್ಟು ₹11,495 ಕೋಟಿ ಅನುದಾನ ಘೋಷಣೆ ಮಾಡಲಾಗಿತ್ತು. ಒಟ್ಟಾರೆಯಾಗಿ ₹80,000 ಕೋಟಿ ನಮಗೆ ಕಡಿಮೆಯಾಗಿದೆ. ಇದು ಬಹಳ ದೊಡ್ಡ ಮೊತ್ತವಾಗಿದೆ. ದೇಶದ ಜನಸಂಖ್ಯೆಯಲ್ಲಿ ಕರ್ನಾಟಕದ ಜನಸಂಖ್ಯೆ ಶೇ 5ರಷ್ಟಿದೆ. ಕರ್ನಾಟಕ ಶೇ 8.7ರಷ್ಟು ಜಿಡಿಪಿಗೆ ಕೊಡುಗೆ ನೀಡುತ್ತಿದೆ. 2011-12ರಲ್ಲಿ 7.6% ಇದ್ದದ್ದು, ಈಗ 8.7% ಕೊಡುಗೆ ನೀಡುತ್ತಿದೆ. ದೇಶಕ್ಕೆ ಜಿಎಸ್‌ಟಿ ಕೊಡುಗೆ ನೀಡುವುದರಲ್ಲಿ ರಾಜ್ಯವು ಎರಡನೇ ಸ್ಥಾನದಲ್ಲಿದೆ. ಜಿಡಿಪಿಯಲ್ಲಿ ನಮ್ಮ ರಾಜ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ಹಾಗಾಗಿ ಯಾವ ರಾಜ್ಯವು ಹೆಚ್ಚು ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡುತ್ತಿದೆ ಎನ್ನುವುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕೋರಿದ್ದೇವೆ ಎಂದಿದ್ದಾರೆ.

ತಲಾವಾರು ಆದಾಯ ಪರಿಗಣಿಸುವ ಮಾನದಂಡವನ್ನು ಶೇ 45ರಿಂದ ಶೇ 20ಕ್ಕೆ ಇಳಿಸಬೇಕೆಂದು ಕೋರಲಾಗಿದೆ. ಕೇರಳ, ಆಂಧ್ರ, ತಮಿಳುನಾಡು ರಾಜ್ಯಗಳಿಗೆ ನೀಡಿದಂತೆ ಆದಾಯ ಕೊರತೆ ಅನುದಾನವನ್ನು ಕರ್ನಾಟಕಕ್ಕೂ ನೀಡಬೇಕು. ಇಲ್ಲವೇ ಯಾವುದೇ ರಾಜ್ಯಗಳಿಗೆ ನೀಡಬಾರದು. ರಾಜಸ್ವ ಹೆಚ್ಚಳದಲ್ಲಿ ಖರ್ಚಿಗಿಂತ ಆದಾಯ ಹೆಚ್ಚಿದ್ದು, ವಿತ್ತೀಯ ಕೊರತೆಯಲ್ಲಿ ಆದಾಯಕ್ಕಿಂತ ಖರ್ಚು ಹೆಚ್ಚಿರುತ್ತದೆ. ಹೀಗಾಗಿ ರಾಜಸ್ವ ಹೆಚ್ಚಳದಲ್ಲಿದ್ದ ಕರ್ನಾಟಕ ಕಳೆದ ವರ್ಷದಿಂದ ವಿತ್ತೀಯ ಕೊರತೆ ಎದುರಿಸುತ್ತಿದ್ದು, ಮುಂದಿನ ವರ್ಷಕ್ಕೆ ಈ ಪರಿಸ್ಥಿತಿ ಸುಧಾರಿಸಲಿದೆ. ನಿರಂತರವಾಗಿ ವಿತ್ತೀಯ ಕೊರತೆಯಲ್ಲಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನ ನೀಡಲಾಗುತ್ತದೆ. ಹಣಕಾಸಿನ ಕಾರ್ಯಕ್ಷಮತೆ ತೋರದಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನವನ್ನು ನೀಡುತ್ತಿರುವ ಕೇಂದ್ರದ ಕ್ರಮ ಸರಿಯಾದದ್ದಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+