'ಚಪ್ಪಾಳೆ ತಟ್ಟಿ, ಜಾಗಟೆ ಬಾರಿಸಿದರೂ ಕೊರೊನಾವೈರಸ್ ಕಡಿಮೆಯಾಗಲಿಲ್ಲ'

ಬೆಂಗಳೂರು, ಜುಲೈ.23: ನೊವೆಲ್ ಕೊರೊನಾವೈರಸ್ ಸೋಂಕು ಹರಡುವಿಕೆ ನಿಯಂತ್ರಣ ಮತ್ತು ನಿರ್ವಹಣೆಯಲ್ಲಿ ರಾಜ್ಯ ಸರ್ಕಾರವಷ್ಟೇ ಅಲ್ಲ ಕೇಂದ್ರ ಸರ್ಕಾರವೂ ವಿಫಲವಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

Recommended Video

      ನಾವಿದ್ದೇವೆ ಯೋಚನೆ ಮಾಡಬೇಡಿ ಎಂದ ಶಿವಣ್ಣ

      ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಲೆಕ್ಕ ಕೊಡಿ ಅಭಿಯಾನ ಆರಂಭಿಸಿದ್ದು, ಗುರುವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.

      ಮಹಾಭಾರತದಲ್ಲಿ ಕುರುಕ್ಷೇತ್ರ ಯುದ್ಧ ಜಯಿಸುವುದಕ್ಕೆ 18 ದಿನಗಳೇ ಬೇಕಾಯಿತು. ಇದೀಗ ಭಾರತೀಯರು 21 ದಿನ ಲಾಕ್ ಡೌನ್ ಅವಧಿಯಲ್ಲಿ ಕೊರೊನಾವೈರಸ್ ಯುದ್ಧವನ್ನು ಜಯಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಉದ್ದುದ್ದಾ ಭಾಷಣ ಮಾಡಿದರು. ಆದರೆ ಇಂದು ದೇಶದ ಪರಿಸ್ಥಿತಿ ಏನಾಗಿದೆ ಎಂದು ಸಿದ್ದರಾಮಯ್ಯ ಪ್ರಧಾನಿ ವಿರುದ್ಧ ಕಿಡಿ ಕಾರಿದ್ದಾರೆ.

       Siddaramaiah Attacked On PM Narendra Modi For india Lockdown

      ಮಾರ್ಚ್.24ರಂದು ಭಾರತ ಲಾಕ್ ಡೌನ್ ಘೋಷಣೆ:

      ಕಳೆದ ಮಾರ್ಚ್.24ರಂದು ಕೊರೊನಾವೈರಸ್ ವಿರುದ್ಧ ಹೋರಾಡುವುದಕ್ಕೆ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಯಿತು. 21 ದಿನಗಳ ಭಾರತ ಲಾಕ್ ಡೌನ್ ನಿಂದಾಗಿ ಸೋಂಕು ಹರಡುವಿಕೆಗೆ ಕಡಿವಾಣ ಹಾಕಬಹುದು. ಕೊರೊನಾವೈರಸ್ ವಿರುದ್ಧ ಹೋರಾಡಬಹುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಸಾರಿ ಸಾರಿ ಹೇಳಿದರು. ಪ್ರಧಾನಿ ಮಾತು ಕೇಳಿಕೊಂಡು ಜನರು ಚಪ್ಪಾಳೆ ತಟ್ಟಿದರು, ಜಾಗಟೆ ಬಾರಿಸಿದರು.

      ಇಂದು ದೇಶದಲ್ಲಿ ಪರಿಸ್ಥಿತಿ ಯಾವ ಹಂತಕ್ಕೆ ಬಂದು ನಿಂತಿದೆ ಎಂಬುದು ಎಲ್ಲರಿಗೂ ಗೊತ್ತಾಗಿದೆ. 12 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಕೊವಿಡ್-19 ಸೋಂಕು ಅಂಟಿಕೊಂಡಿದ್ದು, 28732ಕ್ಕಿಂತ ಅಧಿಕ ಮಂದಿ ಸಾವಿನ ಮನೆ ಸೇರಿದ್ದಾರೆ. ಇನ್ನು, ಕೇಂದ್ರ ಸಚಿವರು ನವದೆಹಲಿ ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಸಚಿವರೆಲ್ಲ ಬೆಂಗಳೂರಿನ ಮನೆಗಳಲ್ಲಿ ಕುಳಿತುಕೊಂಡಿದ್ದಾರೆ ವಿನಃ ಪರಿಣಾಮಕಾರಿಯಾಗಿ ಕೆಲಸವನ್ನು ಮಾಡಿಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+