ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿಗೆ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡ ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಜುಲೈ 08: ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಅಸ್ಥಿರತೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಮತ್ತು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಬಿಜೆಪಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಬಿಜೆಪಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆಯಿಲ್ಲ, ಸ್ಪಷ್ಟ ಬಹುಮತವಿಲ್ಲದಿದ್ದರೂ ಅಸಾಂವಿಧಾನಿಕವಾಗಿ ಸರ್ಕಾರ ರಚನೆಗೆ ಮುಂದಾಗಿದೆ ಎಂದಯ ಸಿದ್ದರಾಮಯ್ಯ ದೂರಿದರು.

ರಾಜೀನಾಮೆ ನೀಡಿರುವ ಶಾಸಕರು ಕೂಡಲೇ ವಾಪಸ್ಸಾಗಬೇಕೆಂದೂ, ಅವರಿಗೆ ಮಂತ್ರಿ ಸ್ಥಾನವನ್ನು ನೀಡಲಾಗುವುದೆಮದೂ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಭರವಸೆ ನೀಡಿದ್ದಾರೆ.

ಸರ್ಕಾರ ಉಳಿಯುತ್ತಾ? ಉರುಳುತ್ತಾ? ನಿರಂತರ ಮಾಹಿತಿ Live Updatesಸರ್ಕಾರ ಉಳಿಯುತ್ತಾ? ಉರುಳುತ್ತಾ? ನಿರಂತರ ಮಾಹಿತಿ Live Updates

ಕರ್ನಾಟಕದಲ್ಲಿ ಒಟ್ಟು 14 ಶಾಸಕರು ರಾಜೀನಾಮೆ ನೀಡಿದ್ದು, ರಾಜ್ಯ ಸರ್ಕಾರ ಸದ್ಯಕ್ಕೆ ಅಲ್ಪ ಮತ(105 (224))ಕ್ಕೆ ಕುಸಿದಿದೆ. ಈ ಬೆಳವಣಿಗೆಗೂ ತನಗೂ ಸಂಬಂಧವೇ ಇಲ್ಲ ಎಂದು ಬಿಜೆಪಿ ಹೇಳುತ್ತಿದೆ.ಇತ್ತ ಕಾಂಗ್ರೆಸ್ ಹೇಗಾದರೂ ಮಾಡಿ ಸರ್ಕಾರವನ್ನು ಉಳಿಸಿಕೊಳ್ಳಲೇಬೇಕೆಂಬ ಜಿದ್ದಿಗೆ ಬಿದ್ದಿದ್ದು, ಹಲವು ಸಚಿವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀದಿ, ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡಲು ಮುಂದಾಗಿದ್ದಾರೆ.

ಈ ಎಲ್ಲ ಬೆಳವಣಿಗೆಯ ಕುರಿತಂತೆ ಸಿದ್ದರಾಮಯ್ಯ ಅವರು ಸಾಲು ಸಾಲು ಟ್ವೀಟ್ ಮಾಡಿ, ಬಿಜೆಪಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ

ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ

ಬಿಜೆಪಿಗೆ ಪ್ರಜಾಪ್ರಭುತ್ವ ಹಾಗೂ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆಯಿಲ್ಲ. ಅವರಿಗೆ ಸ್ಪಷ್ಟ ಬಹುಮತವೂ ಇಲ್ಲ, ಬೇರೆ ಪಕ್ಷಗಳ ಬೆಂಬಲವೂ ಇಲ್ಲ ಆದರೂ ಸಹ ಅಸಂವಿಧಾನಿಕ ಮಾರ್ಗದ ಮೂಲಕ ಶಾಸಕರನ್ನು ತಮ್ಮತ್ತ ಸೆಳೆದುಕೊಂಡು ಸರ್ಕಾರ ರಚಿಸುವ ವಿಫಲ ಯತ್ನಕ್ಕೆ ಕೈಹಾಕಿದೆ.‌ ಇದೂ ಸಹ ಹಿಂದಿನಂತೆ ಯಶಸ್ವಿಯಾಗುವುದಿಲ್ಲ- ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

ಕರ್ನಾಟಕದಲ್ಲಿ ಕಮಲ ಅರಳಿಸುವ ವಿಶ್ವಾಸದಲ್ಲಿ ಅಧ್ಯಕ್ಷ ಅಮಿತ್ ಶಾ!ಕರ್ನಾಟಕದಲ್ಲಿ ಕಮಲ ಅರಳಿಸುವ ವಿಶ್ವಾಸದಲ್ಲಿ ಅಧ್ಯಕ್ಷ ಅಮಿತ್ ಶಾ!

ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ

ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ

ಕೇಂದ್ರ ಸರ್ಕಾರ ತನ್ನ ಅಂಗ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಾಮ ಮಾರ್ಗದ ಮೂಲಕ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಇಳಿದಿದೆ. ಇದರ ಹಿಂದೆ ರಾಜ್ಯ ಬಿಜೆಪಿ ನಾಯಕರಷ್ಟೇ ಅಲ್ಲ‌ ಕೇಂದ್ರದ ಕೈವಾಡ ಕೂಡ ಸ್ಪಷ್ಟವಾಗಿದೆ. ಈ ಬಾರಿಯ ಪ್ರಯತ್ನದಲ್ಲಿ ಬಿಜೆಪಿ ತನ್ನ ಕೈವಾಡವೇ ಇಲ್ಲ ಎಂಬ ಹೊಸ ನಾಟಕ ಶುರುಮಾಡಿದೆ ಅಷ್ಟೆ- ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ.

ವಿಫಲ ಪ್ರಯತ್ನವಷ್ಟೆ

ವಿಫಲ ಪ್ರಯತ್ನವಷ್ಟೆ

2008 ರಲ್ಲಿ ಯಡಿಯೂರಪ್ಪನವರು ಇದೇ ರೀತಿ ನಮ್ಮ ಶಾಸಕರಿಂದ ರಾಜೀನಾಮೆ ಕೊಡಿಸಿ, ಕೋಟ್ಯಂತರ ಹಣ ಸುರಿದ ಉಪಚುನಾವಣೆಯಲ್ಲಿ ಗೆಲ್ಲಿಸುವ ಪ್ರಯತ್ನ ಮಾಡಿದ್ದರು. ಅದರ ಮುಂದುವರಿದ ಭಾಗವೇ ಈ ಬಾರಿಯ ಆಪರೇಷನ್ ಕಮಲ. ಈ ಹಿಂದೆ ಐದು ಬಾರಿ ಸರ್ಕಾರ ಕೆಡವುವ ವಿಫಲ ಯತ್ನ ಮಾಡಿದ್ದರು, ಅದಕ್ಕೆ ಈ ಬಾರಿಯ ಪ್ರಯತ್ನ ಇನ್ನೊಂದು ಹೊಸ ಸೇರ್ಪಡೆಯಾಗುತ್ತದೆ ಅಷ್ಟೆ- ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ.

ಸ್ವಯಂ ಪ್ರೇರಣೆಯಿಂದ ರಾಜೀನಾಮೆ

ಸ್ವಯಂ ಪ್ರೇರಣೆಯಿಂದ ರಾಜೀನಾಮೆ

ನಮ್ಮ ಪಕ್ಷದಲ್ಲಿ ಮಂತ್ರಿ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಸಹಜವಾಗಿ ಕೆಲವರಿಗೆ ಬೇಸರವಿದೆ. ಅದನ್ನು ಸರಿಪಡಿಸುವುದಕ್ಕಾಗಿ ನಮ್ಮ ಮಂತ್ರಿಗಳೆಲ್ಲರೂ ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡಿದ್ದು, ಪಕ್ಷದ ಭವಿಷ್ಯ ಮುಖ್ಯವೇ ಹೊರತು ವೈಯಕ್ತಿಕ ಸ್ಥಾನಮಾನ ಮುಖ್ಯವಲ್ಲ ಎಂಬ ಒಕ್ಕೊರಲ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ- ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ.

ಅತೃಪ್ತರು ರಾಜೀನಾಮೆ ವಾಪಸ್ ಪಡೆಯಲಿ

ಅತೃಪ್ತರು ರಾಜೀನಾಮೆ ವಾಪಸ್ ಪಡೆಯಲಿ

ಮಂತ್ರಿ ಸ್ಥಾನದಿಂದ ವಂಚಿತರಾದ ಕಾರಣಕ್ಕೆ ರಾಜೀನಾಮೆ ನೀಡುತ್ತಿರುವ ಶಾಸಕರು ಬಿಜೆಪಿಯ ಆಮಿಷಗಳಿಗೆ ಬಲಿಯಾಗದೆ ರಾಜೀನಾಮೆ ವಾಪಸ್ಸು ಪಡೆಯಿರಿ, ನಿಮ್ಮ ಸಮಸ್ಯೆಗಳನ್ನು ಆಲಿಸಿ ತಕ್ಷಣ ಪರಿಹಾರ ಮಾಡುತ್ತೇವೆ ಎಂದು ಪಕ್ಷದ ಪರವಾಗಿ ನಾನು ಮನವಿ ಮಾಡುತ್ತಿದ್ದೇನೆ. ನಾವು ಈಗಾಗಲೇ ಮಂತ್ರಿಮಂಡಲ ಪುನರ್ ರಚನೆ ನಿರ್ಧಾರಕ್ಕೆ ಸಹ ಬಂದಿದ್ದೇವೆ - ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ.

English summary
Former chief minister Siddaramaiah critisizes BJP for destabilizing coalition government of karnataka. He blames BJP with multiple tweets.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X