ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೆಡಿಎಸ್ ನಾಯಕರ ಮೇಲೆ ಬೆಂಕಿ ಉಗುಳಿದ ಸಿದ್ದರಾಮಯ್ಯ

|
Google Oneindia Kannada News

Recommended Video

ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯವಾಡಿದ್ದ ಆಡಗೂರು.ಎಚ್.ವಿಶ್ವನಾಥ್ | Onendia Kannada

ಬೆಂಗಳೂರು, ಮೇ 13: "ನನ್ನನ್ನು ಗುರಿಯಾಗಿಸಿ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿರುವ ಕೆಲವು ಜೆಡಿಎಸ್ ನಾಯಕರ ಬಗ್ಗೆ ಪಕ್ಷದ ವರಿಷ್ಠರು ಗಮನ ಹರಿಸಬೇಕು" ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಪ್ರಿಯ ಮುಖ್ಯಮಂತ್ರಿಯಾಗಿದ್ದರೂ ಕಾಂಗ್ರೆಸ್ಸಿಗೆ ಕೇವಲ 75 ಸೀಟು ಯಾಕೆ ಬಂತು ಎಂಬ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಮಾತಿಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.

ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲು ಸಿದ್ದರಾಮಯ್ಯ ಕಾರಣ: ಎಚ್. ವಿಶ್ವನಾಥ್ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲು ಸಿದ್ದರಾಮಯ್ಯ ಕಾರಣ: ಎಚ್. ವಿಶ್ವನಾಥ್

ನಾನು ಎಲ್ಲಿಯೂ ಜನಪ್ರಿಯ ಮುಖ್ಯಮಂತ್ರಿ ಎಂದು ಹೇಳಿಕೊಂಡಿಲ್ಲ ಎಂದಿರುವ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಹಿಂದೆ ಜಿಟಿ ದೇವೇಗೌಡ ಅವರು ನನ್ನ ವಿರುದ್ಧ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದರು, ಈಗ ಎಚ್ ವಿಶ್ವನಾಥ್. ಮುಂದೆ ಇನ್ಯಾರೋ... ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಜೆಡಿಎಸ್ ವರಿಷ್ಠರು ಗಮನ ಹರಿಸಲಿ

ಜೆಡಿಎಸ್ ಅಧ್ಯಕ್ಷ ಎಚ್.ವಿಶ್ವನಾಥ್ ಹೊಟ್ಟೆಕಿಚ್ಚಿನ ಮಾತುಗಳನ್ನು ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಮೊದಲು ಜಿ.ಟಿ.ದೇವೇಗೌಡ,ಈಗ ವಿಶ್ವನಾಥ್... ಮುಂದೆ ಯಾರು ಗೊತ್ತಿಲ್ಲ. ನನ್ನನ್ನು ಗುರಿಯಾಗಿಸಿದ ಇಂತಹ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಠರು ಗಮನ ಹರಿಸುವುದು ಒಳಿತು- ಸಿದ್ದರಾಮಯ್ಯ

ದೇವರು ಒಳ್ಳೆಯ ಬುದ್ಧಿ ಕೊಡಲಿ!

ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಗೆ ಕುಖ್ಯಾತರು.ಅವರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ- ಸಿದ್ದರಾಮಯ್ಯ

ಅವನ್ಯಾರೀ ಎಚ್ ವಿಶ್ವನಾಥ್, ಅವ್ನಿಗೆ ಏನ್ ಗೊತ್ತು, ಹೊಟ್ಟಿಕಿಚ್ಚು ಆತನಿಗೆ: ಸಿದ್ದರಾಮಯ್ಯಅವನ್ಯಾರೀ ಎಚ್ ವಿಶ್ವನಾಥ್, ಅವ್ನಿಗೆ ಏನ್ ಗೊತ್ತು, ಹೊಟ್ಟಿಕಿಚ್ಚು ಆತನಿಗೆ: ಸಿದ್ದರಾಮಯ್ಯ

ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲು ಸಿದ್ದು ಕಾರಣ!

ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲು ಸಿದ್ದು ಕಾರಣ!

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕ ಸ್ಥಾನಗಳನ್ನು ಗೆಲ್ಲಲು ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರಣವೇ ಹೊರತು ಜೆಡಿಎಸ್ ಅಲ್ಲ ಎಂದು ವಿಶ್ವನಾಥ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. ತಮ್ಮನ್ನು ತಾವು ಜನಪ್ರಿಯ ಮುಖ್ಯಮಂತ್ರಿ ಎಂದುಕೊಳ್ಳುವ ಸಿದ್ದರಾಮಯ್ಯ, ನಿಜಕ್ಕೂ ಜನಪ್ರಿಯರಾಗಿದ್ದರೆ ಕಾಂಗ್ರೆಸ್ ಯಾಕೆ ಕೇವಲ 75 ಸ್ಥಾನ ಗೆಲ್ಲುತ್ತಿತ್ತು ಎಂದು ಅವರು ಪ್ರಶ್ನಿಸಿದ್ದರು.

ಕಾಂಗ್ರೆಸ್ ನಿಂದ ಹೈಕಮಾಂಡಿಗೆ ದೂರು

ಕಾಂಗ್ರೆಸ್ ನಿಂದ ಹೈಕಮಾಂಡಿಗೆ ದೂರು

ಜೆಡಿಎಸ್ ನಾಯಕರ ಇಂಥ ಹೇಳಿಕೆಯಿಂದ ಸಮ್ಮಿಶ್ರ ಸರ್ಕಾರದಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಹೈಕಮಾಂಡ್ ಗಮನ ಹರಿಸಬೇಕು ಎಂದು ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಮುಖಂಡ ಕೆ ಸಿ ವೇಣುಗೋಪಾಲ್ ಅವರ ಮೊರೆಹೋಗಿದ್ದಾರೆ.

English summary
Congress leader and former CM Siddaramaiah blames JDS leaders for giving irresponsible statements against him. And he forces JDS leaders to take necessary actions against them.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X