'ಬಳೆ ತೊಟ್ಟುಕೊಳ್ಳಿ' ಎಂದ ಶೋಭಾಗೆ ಸಿದ್ದರಾಮಯ್ಯ ಕ್ಲಾಸ್

Recommended Video

      ಬಳೆ ತೊಡುವ ಬಗ್ಗೆ ಶೋಭಾ ಕರಂದ್ಲಾಜೆ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ | Oneindia Kannada

      ಬೆಂಗಳೂರು, ಮೇ 16: "ನೀವೂ ಒಬ್ಬ ಹೆಣ್ಣಾಗಿ ಹೆಣ್ಣು ಸಂಕುಲವೇ ಅಸಮರ್ಥ ಎಂಬಂತೆ ಕೀಳು ಹೇಳಿಕೆ ನೀಡಬೇಡಿ" ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೋಭಾ ಕರಂದ್ಲಾಜೆ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

      "ನಿಮ್ಮ ಪಕ್ಷದ ಶಾಸಕರನ್ನು ಹಿಂಡಿದಿಟ್ಟುಕೊಳ್ಳುವುದು ನಿಮ್ಮ ಕೆಲಸ. ಅವರನ್ನು ಹಿಡಿದಿಟ್ಟುಕೊಳ್ಳಲು ಆಗದ ನೀವು ದುರ್ಬಲರು. ಕೆಲಸ ಮಾಡಲು ಸಾಧ್ಯವಾಗದಿದ್ದರೆ ಕೈಗೆ ಬಳೆ ಹಾಕಿಕೊಳ್ಳಿ" ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕಿ, ಸಂಸದೆ ಶೋಭಾ ಕರಂದ್ಲಾಜೆ ನೀಡಿದ ಹೇಳಿಕೆಗೆ ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ ಉತ್ತರಿಸಿದರು.

      Siddaramaiah blames Shobha Karndlaje for her Wear Bangale comment

      "ಕುಮಾರಿ ಶೋಭಾ ಕರಂದ್ಲಾಜೆ ಅವರೇ, ಓರ್ವ ಹೆಣ್ಣಾಗಿ ತಾವು ಮಹಿಳಾ ಸಂಕುಲವೇ ಅಸಮರ್ಥರು ಎಂಬಂತೆ ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಸಂಸದರಾಗಿ ತಾವೊಬ್ಬರು ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ ಬಳೆ ತೊಟ್ಟವರೆಲ್ಲ ಕೆಲಸ ಮಾಡಲಾಗದವರು ಎಂದಲ್ಲ. ನೆನಪಿರಲಿ, ಚೆನ್ನಮ್ಮ,ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟೆ ಸಾಧನೆಯ ಉತ್ತುಂಗಕ್ಕೇರಿದವರು" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+