ಸುಧಾಕರ್ ಒಂಥರಾ ಊಸರವಳ್ಳಿ ಇದ್ದಂಗೆ ಎಂದ ಸಿದ್ದರಾಮಯ್ಯ

ಬೆಂಗಳೂರು, ಡಿಸೆಂಬರ್ 2: ಸುಧಾಕರ್ ಒಂಥರಾ ಊಸರವಳ್ಳಿ ಇದ್ದಂಗೆ, ಜಾತ್ಯತೀತರ ಜೊತೆ ಇದ್ದಾಗ ಅವರಂತೆ, ಕೋಮುವಾದಿಗಳ ಜೊತೆಯಿದ್ದಾಗ ಅವರಂತೆ ಬಣ್ಣ ಬದಲಾಯಿಸುತ್ತಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಇವತ್ತೇನಾದರೂ ಬಿಜೆಪಿಯ ಆಪರೇಷನ್ ಕಮಲ ಯಶಸ್ವಿಯಾಗಿದ್ದರೆ ಅದರ ಕಿಂಗ್‌ಪಿನ್ ಈ ಸುಧಾಕರ್. 'ಕೋತಿ ತಾನು ಕೆಡುವುದಲ್ಲದೆ ಇಡೀ ವನವನ್ನೇ ಕೆಡಿಸಿತ್ತಂತೆ' ಹಾಗೆ ಇದು ಎಂದರು.

2013ರಲ್ಲಿ ಆಂಜನಪ್ಪನವರಿಗೆ ಟಿಕೆಟ್ ನೀಡುವ ಬದಲು ಸುಧಾಕರ್‌ಗೆ ನೀಡಿದ್ದೆ, ಒಂದು ವೇಳೆ ಆಗಲೇ ಆಂಜನಪ್ಪಂಗೆ ಟಿಕೆಟ್ ನೀಡಿದ್ದರೆ ಅವರು ಶಾಸಕರೂ ಆಗಿರುತ್ತಿದ್ದರು ಮತ್ತು ಕ್ಷೇತ್ರ ಇಂದು ಉಪಚುನಾವಣೆ ಎದುರಿಸುವಂತಹ ಸ್ಥಿತಿಯೂ ಬರುತ್ತಿರಲಿಲ್ಲ.

Siddaramaiah Called Sudhakar Is A Chameleon

ಎಂಥಾ ನಯವಂಚಕನಿಗೆ ಟಿಕೆಟ್ ನೀಡಿದೆನಲ್ಲಾ ಅಂತ ಈಗ ಪಶ್ಚಾತಾಪವಾಗುತ್ತಿದೆ. ಬೆಳಿಗ್ಗೆ 9 ಗಂಟೆಗೆ ರಾಜೀನಾಮೆ ವಾಪಾಸು ತಗೋತೀನಿ ಅಂತ ರಾತ್ರಿ ನನಗೆ ಮಾತು ಕೊಟ್ಟು, ಮುಂಜಾನೆ 6 ಗಂಟೆಗೆ ಕದ್ದು ಮುಂಬೈ ಓಡಿಹೋದ ಆಸಾಮಿ ಈ ಸುಧಾಕರ್.

ಇಂಥವರನ್ನು ನಯಾಪೈಸೆಗೂ ನಂಬಬೇಡಿ. ಸದಾ ಇವರ ಒಳ್ಳೆಯದನ್ನೇ ಬಯಸಿದ ನಮ್ಮ ಬೆನ್ನಿಗೇ ಚೂರಿ ಹಾಕಿದವರು ಇನ್ನು ಕ್ಷೇತ್ರದ ಅಮಾಯಕ ಜನರನ್ನು ಬಿಟ್ಟಾರೆಯೇ.
ಚಿಕ್ಕಬಳ್ಳಾಪುರ ಭಾಗಕ್ಕೆ ನೀರು ಹರಿಸುವ ಎತ್ತಿನಹೊಳೆ ಯೋಜನೆ ಅನುಷ್ಠಾನಗೊಳಿಸಿದ್ದು ನಮ್ಮ‌ ಸರ್ಕಾರ.

ನಾನು ಮುಖ್ಯಮಂತ್ರಿಯಾಗಿದ್ದಾಗ ವೀರಪ್ಪ ಮೊಯ್ಲಿ, ಶಿವಶಂಕರ್ ರೆಡ್ಡಿ ಇವರೆಲ್ಲರ ಸಹಕಾರದಿಂದ ಯೋಜನೆ ಜಾರಿ ಮಾಡಿದ್ದೆ. ಕುಡಿಯಲು ನೀರು ಕೊಟ್ಟವರಿಗೆ ಮೋಸಮಾಡಿ, ಯೋಜನೆಗೆ ವಿರೋಧ ಮಾಡಿದ್ದ ಬಿಜೆಪಿ ಜೊತೆ ಈಗ ಸುಧಾಕರ್ ಕೈಜೋಡಿಸಿದ್ದಾರೆ.

2016-17ರ ಬಜೆಟ್‌ನಲ್ಲಿ ರಾಜ್ಯದ ಪ್ರತಿ ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಸ್ಥಾಪನೆಗೆ ಅನುಮೋದನೆ ನೀಡಿದ್ದು ನಮ್ಮ ಸರ್ಕಾರ. ಹಾಗಾಗಿ ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗುತ್ತಿದೆ. ಅಂದಿನ ಬಜೆಟ್ ಮಂಡಿಸಿದ್ದು ನಾನು, ಆರ್ಥಿಕ ಸಚಿವ ನಾನು, ಮುಖ್ಯಮಂತ್ರಿ ನಾನು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+