ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು, ಜು.21: ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎನ್ನುವ ಮೂಲಕ ಎಲ್ಲಾ ಊಹಾಪೋಹಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ.

ಇತ್ತೀಚಿಗಷ್ಟೇ ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಕಗೊಂಡಿದ್ದರಿಂದ ರಾಜ್ಯ ರಾಜಕಾರಣದಿಂದ ದೂರ ಸರಿದು ರಾಷ್ಟ್ರೀಯ ರಾಜಕಾರಣಕ್ಕೆ ತೆರಳುತ್ತಾರೆ ಎಂಬ ಕುರಿತಂತೆ ಕಾಂಗ್ರೆಸ್‌ ವಲಯದಲ್ಲಿ ಮಾತು ಕೇಳಿಬಂದಿತ್ತು.

ಆದರೆ ಸಂಸತ್‌ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ರಾಜ್ಯರಾಜಕಾರಣದಲ್ಲಿ ಇನ್ನೂ ಆಸಕ್ತಿ ಹೊಂದಿರುವುದಾಗಿ ಸಿದ್ದರಾಮಯ್ಯ ಪರೋಕ್ಷ ಸಂದೇಶ ರವಾನೆ ಮಾಡಿದ್ದಾರೆ.

Siddaramaiah clarifies he will not contest for parliament election

ರಾಜ್ಯದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಇರುವುದರಿಂದ ಸಿದ್ದರಾಮಯ್ಯ ಅವರನ್ನು ರಾಜ್ಯ ರಾಜಕಾರಣದಿಂದ ದೂರ ಇರಿಸಲು ಕಾಂಗ್ರೆಸ್‌ ಪಕ್ಷದಲ್ಲಿ ಒಂದು ಗುಂಡಪು ಪ್ರಯತ್ನ ನಡೆಸಿದೆ ಎಂಬ ದೂರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ತಾವು ಯಾವುದೇ ಕಾರಣಕ್ಕೂ ರಾಜ್ಯರಾಜಕಾರಣದಿಂದ ದೂರ ಸರಿಯುವುದಿಲ್ಲ ಎಂದು ಸಿದ್ದರಾಮಯ್ಯ ಪಕ್ಷದ ಒಳಗಿನ ವಿರೋಧಿಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಕಾಂಗ್ರೆಸ್‌ ಶಾಂಸಕಾಂಗ ಪಕ್ಷದ ಅಧ್ಯಕ್ಷ ಹುದ್ದೆ ಹಾಗೂ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಮೂರೂ ಹುದ್ದೆಗಳಲ್ಲಿ ಮುಂದುವರೆಯುವುದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೇನೆ, ಯಾವುದೇ ಕಾರಣಕ್ಕು ಚುನಾವಣೆಗೆ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ, ಈ ಮೊದಲು ಉತ್ತರ ಕರ್ನಾಟಕದಿಂದ ಸ್ಪರ್ಧಿಸುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿತ್ತು, ಇದೆಲ್ಲಾ ಊಹಾಪೋಹಗಳಿಗೂ ತೆರೆ ಎಳೆದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+