ಸಿಇಟಿ ದಿನವೇ ಸಿದ್ದು-ಡಿಕೆಶಿ ಪ್ರಮಾಣ ವಚನ; ವಿದ್ಯಾರ್ಥಿಗಳಿಗೆ ಟ್ರಾಫಿಕ್ ಸಮಸ್ಯೆ ಸಾಧ್ಯತೆ
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳೊಂದಿಗೆ ಅಭೂತಪೂರ್ವ ಗೆಲುವು ದಾಖಲಿಸಿದ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ನೂತನ ಸರ್ಕಾರ ರಚಿಸಲು ಮುಂದಾಗಿದೆ.
ಶನಿವಾರ, ಮೇ 20ರಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಿದ್ದರಾಮಯ್ಯನವರ ಪ್ರಮಾಣ ವಚನ ಸಮಾರಂಭಕ್ಕೆ ರಾಜ್ಯದ ಮೂಲೆಮೂಲೆಯಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಆಗಮಿಸುವುದರಿಂದ ನಗರದಲ್ಲಿ ಸಂಚಾರ ದಟ್ಟಣೆ ಹಾಗೂ ಜನದಟ್ಟಣೆ ಹೆಚ್ಚಾಗಲಿದೆ.
ತುಮಕೂರು ರಸ್ತೆ, ಮೈಸೂರು ರಸ್ತೆ ಹಾಗೂ ಬಳ್ಳಾರಿ ರಸ್ತೆ ಸೇರಿದಂತೆ ನಗರದ ಬಹುತೇಕ ಎಲ್ಲ ಭಾಗಗಗಳ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಕಂಡುಬರಲಿದೆ. ಇದು ವಾರಾಂತ್ಯದಲ್ಲೂ ಸುಗಮ ಸಂಚಾರಕ್ಕೆ ಸಮಸ್ಯೆಯಾಗುವ ಸಾಧ್ಯತೆ ಇದೆ.

ಇದೇ ವೇಳೆ ಶನಿವಾರ (ಮೇ 20) ಮತ್ತು ಭಾನುವಾರ (ಮೇ 21) ರಾಜಧಾನಿ ಬೆಂಗಳೂರಿನಲ್ಲಿ ವೃತ್ತಪರ ಕೋರ್ಸ್‌ಗಳ ಸಿಇಟಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಟ್ರಾಫಿಕ್ ಸಮಸ್ಯೆಯ ಆತಂಕ ಎದುರಾಗಿದೆ.
ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷೆಗಾಗಿ ಬೇರೆ ಬೇರೆ ಜಿಲ್ಲೆಗಳಿಂದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಶನಿವಾರ ಬೆಳಗ್ಗೆಯಿಂದಲೇ ನಗರದಲ್ಲಿ ಸಂಚಾರ ದಟ್ಟಣೆ ಆಗುವುದರಿಂದ ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಟ್ರಾಫಿಕ್ ಸಮಸ್ಯೆ ಎದುರಾಗುವ ಆತಂಕ ಮನೆ ಮಾಡಿದೆ. ಹೀಗಾಗಿ ಬೆಂಗಳೂರು ನಗರ ಸಂಚಾರಿ ಪೊಲೀಸರು ಸೂಕ್ತ ವ್ಯವಸ್ಥೆ ಮಾಡಬೇಕಾಗುತ್ತದೆ.
ಶನಿವಾರ, ಮೇ 20ರಂದು ಬೆಳಗ್ಗೆ 10.30ಕ್ಕೆ ಸಿಇಟಿ ಪರೀಕ್ಷೆಗಳು ಆರಂಭವಾಗಲಿದ್ದು, ಮೊದಲ ದಿನ ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ಪರೀಕ್ಷೆ ನಡೆಯಲಿದೆ.
ಬೆಂಗಳೂರು ಸಂಚಾರ ಪೊಲೀಸರಿಗೆ ಪತ್ರ
ಸಿಎಂ ಹಾಗು ಡಿಸಿಎಂ ಪ್ರಮಾಣ ವಚನ ಸಮಾರಂಭದಿಂದ ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಟ್ರಾಫಿಕ್ ಸಮಸ್ಯೆಯಾಗಲಿದೆಯೇ ಎಂಬುದರ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಬೆಂಗಳೂರು ಸಂಚಾರ ಪೊಲೀಸರಿಗೆ ಪತ್ರ ಬರೆದಿದ್ದಾರೆ.
ಸಮಾರಂಭಕ್ಕೆ ಎಷ್ಟು ಜನ ಅಗಮಿಸುವ ನಿರೀಕ್ಷೆ ಇದೆ, ಯಾವ ರಸ್ತೆಗಳಲ್ಲಿ ಹೆಚ್ಚು ಸಂಚಾರ ದಟ್ಟಣೆ ಕಂಡುಬರಲಿದೆ ಎಂಬ ಮಾಹಿತಿಯನ್ನು ನೀಡಿದರೆ, ಸರ್ಕಾರದ ಗಮನಕ್ಕೆ ತಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ. ಈ ಬಗ್ಗೆ ಪೊಲೀಸರು ಶುಕ್ರವಾರ ಮಾಹಿತಿ ನೀಡುವ ಸಾಧ್ಯತೆ ಇದ್ದು, ಆ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನಲ್ಲೇ 121 ಪರೀಕ್ಷಾ ಕೇಂದ್ರಗಳು
ಈ ಬಾರಿಯ ಸಿಇಟಿ ಪರೀಕ್ಷೆಗೆ 2.61 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, ರಾಜ್ಯದ ಸುಮಾರು 562 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ 121 ಪರೀಕ್ಷಾ ಕೇಂದ್ರಗಳಿದ್ದು, ನಗರದ ಹೃದಯ ಭಾಗದ ಹಲವು ಕಾಲೇಜುಗಳನ್ನು ಪರೀಕ್ಷಾ ಕೇಂದ್ರಗಳಾಗಿ ಆಯ್ಕೆ ಮಾಡಲಾಗಿದೆ.
85 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪರೀಕ್ಷೆ ಬರೆಯಲು ಆಯ್ಕೆ ಮಾಡಿಕೊಂಡಿದ್ದಾರೆ. ಸಿಎಂ ಹಾಗು ಸಚಿವ ಸಂಪುಟದ ಪ್ರಮಾಣ ವಚನ ಸಮಾರಂಭ ನಡೆಯುವ ಕಂಠೀರವ ಕ್ರೀಡಾಂಗಣ ಸುತ್ತಮುತ್ತಲಿನ ಕೆಲವು ಕಾಲೇಜುಗಳನ್ನು ಪರೀಕ್ಷಾ ಕೇಂದ್ರಗಳನ್ನಾಗಿಸಿದೆ.
ಆದ್ದರಿಂದ ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಭಾರೀ ಸಂಚಾರ ಹಾಗೂ ಜನದಟ್ಟಣೆ ಸಮಸ್ಯೆಯಿಂದ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಲು ಸಾಧ್ಯವಾಗದಿರಬಹುದು ಎಂಬ ಆತಂಕದಲ್ಲಿದ್ದಾರೆ. ಬೆಂಗಳೂರು ನಗರ ಸಂಚಾರಿ ಪೊಲೀಸರು ಇದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಸಿ, ವಿದ್ಯಾರ್ಥಿಗಳು ಆರಾಮವಾಗಿ ಪರೀಕ್ಷಾ ಕೇಂದ್ರ ತಲುಪಲು ಮತ್ತು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ












Click it and Unblock the Notifications