ಸಿದ್ದರಾಮಯ್ಯ ವಿರುದ್ಧ ಫೆ.7ರಂದು ಬಿಜೆಪಿ ಯುವಮೋರ್ಚಾ ಪ್ರತಿಭಟನೆ

ಬೆಂಗಳೂರು, ಫೆಬ್ರವರಿ 6 : ಕರ್ನಾಟಕ ಬಿಜೆಪಿ ಯುವ ಮೋರ್ಚಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಫೆ.7ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ.

ಬಿಜೆಪಿ ಯುವಮೋರ್ಚಾ ಬೆಂಗಳೂರು ಘಟಕ ವತಿಯಿಂದ ಬುಧವಾರ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಯುವಮೋರ್ಚಾ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

ಈ ಪ್ರತಿಭಟನೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್, ಬೆಂಗಳೂರು ನಗರ ಯುವಮೋರ್ಚಾ ಅಧ್ಯಕ್ಷರಾದ ಸಪ್ತಗಿರಿಗೌಡ, ನಗರ ಜಿಲ್ಲೆಯ ಯುವಮೋರ್ಚಾ ಅಧ್ಯಕ್ಷ ನವೀನ್ ರೆಡ್ಡಿ ಮುಂತಾದವರು ಪಾಲ್ಗೊಳ್ಳಲಿದ್ದಾರೆ.

siddaramaiah

ಹೂಗೂಚ್ಛ ನೀಡಿ ಸ್ವಾಗತ : ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದಿಂದ ಬೆಂಗಳೂರು ರಾಜ್ಯ ಬಿಜೆಪಿ ಕಾರ್ಯಾಲಯದ ತನಕ ಸ್ವಚ್ಛ ಭಾರತ ಅಭಿಯಾನದ ಜಾಗೃತಿ ಓಟ ನಡೆಸಲಾಗಿದೆ.

ಓಟದಲ್ಲಿ ಭಾಗಿಯಾಗಿದ್ದ ರಮೇಶ್ ಜಿರಾಳ ಅವರನ್ನು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಇಂದು ಹೂಗುಚ್ಛ ನೀಡಿ ಸ್ವಾಗತಿಸಿದರು.

Siddaramaiah comment on Modi : BJP yuva morcha calls for protest

ಈ ಸಂದರ್ಭದಲ್ಲಿ ಬೆಂಗಳೂರು ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಶಾರದಾ ನಾಯ್ಕ, ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾ ಶೇಖರಪ್ಪ ತಳವಾರ, ಅಪ್ಪಾಜಿ ಗೌಡ್, ಸಂಗಮೇಶ ಹತ್ತಿಗುಡ್ಡ, ಶರಣಪ್ಪ ಮುಂತಾದವರು ಹಾಜರಿದ್ದರು.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+