ವರುಣಾ: ಸಿದ್ದರಾಮಯ್ಯ ಗೆದ್ದರೂ, ಸೋತರು ಬಿಜೆಪಿಗೆ ಲಾಭ!
ಬೆಂಗಳೂರು: ಜಿದ್ದಿಗೆ ಬಿದ್ದು ವರುಣಾ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರ ನಡೆಸುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಮಲ ಪಾಳಯ ಫೀಲ್ಡ್‌ಗೆ ಇಳಿದಿದೆ. ಈ ಹೊತ್ತಲ್ಲೇ ಅಲರ್ಟ್ ಆಗಿರುವ ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಿಎಂ ಸಿದ್ದರಾಮಯ್ಯ, ಗೆಲುವಿಗಾಗಿ ಅಖಾಡ ಪ್ರವೇಶಿಸಿದ್ದಾರೆ. ಆದರೆ ವರುಣಾ ಬಿಟ್ಟು ಸಿದ್ದರಾಮಯ್ಯ ಕದಲುತ್ತಿಲ್ಲ, ಯಾಕೆ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕೇಬಿಟ್ಟಿದೆ.
ಅಂದಹಾಗೆ ಮತದಾನಕ್ಕೆ ಇನ್ನೇನು 4 ದಿನ ಮಾತ್ರ ಬಾಕಿ ಇದೆ. ಬಹಿರಂಗ ಚುನಾವಣಾ ಪ್ರಚಾರಕ್ಕೆ 2 ದಿನದಲ್ಲಿ ತೆರೆ ಬೀಳಲಿದೆ. ಇದೇ ಸಂದರ್ಭದಲ್ಲಿ ಸೋಲು ಗೆಲುವಿನ ಲೆಕ್ಕಾಚಾರ ಕೂಡ ಬಲುಜೋರು. ಅದ್ರಲ್ಲೂ ವರುಣಾ ಕ್ಷೇತ್ರದಲ್ಲಿ ಗೆದ್ದೇ ಗೆಲ್ಲಬೇಕು ಎಂಬ ಛಲದಲ್ಲಿ ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳಿಗೆ ಸೋಲಿನ ಭಯ ಹೆಚ್ಚಾಗಿ ಕಾಡುತ್ತಿದೆ. ಇಷ್ಟೆಲ್ಲದರ ನಡುವೆ ಸಿದ್ದರಾಮಯ್ಯ ಹೊಸ ಗೇಮ್ ಪ್ಲ್ಯಾನ್ ಶುರು ಮಾಡಿದ್ದಾರೆ. ತಮ್ಮ ಕ್ಷೇತ್ರ ಉಳಿಸಿಕೊಳ್ಳಲು ವರುಣಾದಲ್ಲೇ ಉಳಿದುಬಿಟ್ಟಿದ್ದಾರೆ ಸಿದ್ದರಾಮಯ್ಯ. ಇದರಿಂದ ಬಿಜೆಪಿ ಲಾಭ ಆಗುತ್ತಾ? ಮುಂದೆ ಓದಿ.

ಸಿದ್ದರಾಮಯ್ಯ ಗೆದ್ದರೂ, ಸೋತರು ಬಿಜೆಪಿಗೆ ಲಾಭ!
ಮೊದಲೇ ಬಿಜೆಪಿ ಪ್ಲ್ಯಾನ್ ಮಾಡಿದಂತೆ ಕಾಂಗ್ರೆಸ್ ನಾಯಕರನ್ನ ಅವರದ್ದೇ ಕ್ಷೇತ್ರಗಳಲ್ಲಿ ಕಟ್ಟಿ ಹಾಕುವ ತಂತ್ರ ಭಾಗಶಃ ವರ್ಕೌಟ್ ಆಗಿದೆ. ಸಿದ್ದರಾಮಯ್ಯ, ಡಿಕೆಶಿ, ಮಲ್ಲಿಕಾರ್ಜುನ ಖರ್ಗೆ ಪುತ್ರನ ಕ್ಷೇತ್ರಗಳಲ್ಲಿ ಬಿಜೆಪಿ ಹೊಸ ಗೇಮ್ ಪ್ಲ್ಯಾನ್ ಮಾಡಿತ್ತು. ಕಾಂಗ್ರೆಸ್ ಘಟಾನುಘಟಿ ನಾಯಕರನ್ನೇ ಕಟ್ಟಿ ಹಾಕಿದ್ರೆ ಅವರು ರಾಜ್ಯದ ಬೇರೆಡೆ ಪ್ರಚಾರ ಮಾಡುವುದಿಲ್ಲ. ಇದೇ ಅಸ್ತ್ರ ಇಟ್ಕೊಂಡು ಸಿದ್ದರಾಮಯ್ಯ ವಿರುದ್ಧ ರಣತಂತ್ರ ರೂಪಿಸಲಾಗಿತ್ತು. ಈಗ ಸಿದ್ದರಾಮಯ್ಯ ವರುಣಾ ಬಿಟ್ಟು ಕದಲುತ್ತಿಲ್ಲ. ಹೀಗಾಗಿ ಸಿದ್ದರಾಮಯ್ಯ ಗೆದ್ದರೂ, ಸೋತರು BJPಗೆ ಲಾಭ ಸಿಕ್ಕಂತಾಗಿದೆ ಎಂಬ ಮಾತು ಹರಿದಾಡುತ್ತಿವೆ.
ಸಿದ್ದರಾಮಯ್ಯ ಸೋಲಿಗೆ ದಿಲ್ಲಿಯಲ್ಲೇ ರಣತಂತ್ರ!
ಹೌದು, ಕಾಂಗ್ರೆಸ್ ಘಟಾನುಘಟಿಗಳಿಗೆ ಈ ಬಾರಿ ಮನೆಯ ದಾರಿ ಸೋರಿಸಲು ದಿಲ್ಲಿಯಲ್ಲೇ ಪ್ಲ್ಯಾನ್ ಮಾಡಿತ್ತು ಬಿಜೆಪಿ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕಟ್ಟಿಹಾಕಲು ಅಂತಾ ಮೋದಿ-ಅಮಿತ್ ಶಾ ಸಚಿವ ಸೋಮಣ್ಣರನ್ನ ವರುಣಾದಿಂದಲೇ ಕಣಕ್ಕಿಳಿಸಿದ್ದರು. ಹಾಗೇ ಖರ್ಗೆ ಕಟ್ಟಿಹಾಕಲು ಅಂತನೇ ಕಲಬುರಗಿಗೆ ಮೋದಿ, ಅಮಿತ್ ಶಾ ಸೇರಿದಂತೆ ಜೆಪಿ ನಡ್ಡಾ ಲಗ್ಗೆ ಇಟ್ಟಿದ್ದರು. ಈಗ ಬಿಜೆಪಿ ನಾಯಕರ ಈ ತಂತ್ರ ವರ್ಕೌಟ್ ಆದಂತೆ ಕಾಣುತ್ತಿದ್ದು, ಕಾಂಗ್ರೆಸ್ ನಾಯಕರು ಅವರವರ ಕ್ಷೇತ್ರ ಬಿಟ್ಟು ಕದಲದಂತಹ ಸ್ಥಿತಿ ನಿರ್ಮಾಣವಾಗಿದೆ.
ಜಾತಿ ಲೆಕ್ಕಾಚಾರ ಹೇಳುವುದೇನು?
ವರುಣಾ ಕ್ಷೇತ್ರದಲ್ಲಿ ಗೆದ್ದೇ ಗೆಲ್ಲಬೇಕು ಎಂಬ ಹಠ ಬಿಜೆಪಿ ನಾಯಕರದ್ದು. ಹೀಗಾಗಿಯೇ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಈಗ ಜಾತಿ ಲೆಕ್ಕಾಚಾರ ಕೂಡ ಶುರುವಾಗಿದೆ. ಹಾಗಾದರೆ ವರುಣಾ ಕ್ಷೇತ್ರದಲ್ಲಿನ ಜಾತಿವಾರು ಮತದಾರರನ್ನು ನೋಡುವುದಾದರೆ ಇಲ್ಲಿ 55 ಸಾವಿರ ಲಿಂಗಾಯತ ಮತದಾರರಿದ್ದು ಇವರದ್ಧೇ ನಿರ್ಣಾಯಕ ಪಾತ್ರ ಎನ್ನಬಹುದು. ಲಿಂಗಾಯತ ಮತದಾರರನ್ನ ಬಿಟ್ಟರೆ, ಕುರುಬ ಸಮುದಾಯದ ಮತದಾರರು 35 ಸಾವಿರದಷ್ಟು ಇದ್ದಾರೆ.

ಇನ್ನುಳಿದವರ ಪಾತ್ರ ಬಹುಮುಖ್ಯ!
ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆಲುವಿಗೆ ಚುನಾವಣಾ ಲೆಕ್ಕಾಚಾರ ಶುರುವಾಗುವುದೇ ಇಲ್ಲಿ. ಲಿಂಗಾಯತ ಹಾಗೂ ಕುರುಬ ಸಮುದಾಯದ ಮತಗಳನ್ನು ಹೊರತುಪಡಿಸಿ, ಪರಿಶಿಷ್ಟ ಜಾತಿ ಸಮುದಾಯದ 43 ಸಾವಿರ ಮತದಾರರು ಸೇರಿದಂತೆ ಪರಿಶಿಷ್ಟ ಪಂಗಡದ 23 ಸಾವಿರ ಮತಗಳು ಇಲ್ಲಿವೆ. ಇನ್ನುಳಿದಂತೆ ಒಕ್ಕಲಿಗರು 12 ಸಾವಿರ ಹಾಗೂ ಇತರ ಹಿಂದುಳಿದ ವರ್ಗಗಳ ಸಮುದಾಯದ 12 ಸಾವಿರ ಮತಗಳು ವರುಣಾ ಕ್ಷೇತ್ರದಲ್ಲಿ ಇರುವುದು ಗಮನಾರ್ಹ.
ಒಟ್ನಲ್ಲಿ ಮತದಾನಕ್ಕೆ ಕೌಂಟ್‌ಡೌನ್ ಶುರುವಾದ ಬೆನ್ನಲ್ಲೇ ಅಸ್ತ್ರ ಮತ್ತು ಪ್ರತ್ಯಸ್ತ್ರ ಜೋರಾಗಿದೆ. ರಾಜಕೀಯ ಪಕ್ಷಗಳ ತಂತ್ರ, ರಣತಂತ್ರಗಳಿಗೆ ಕರ್ನಾಟಕದ ಮತದಾರ ಪ್ರಭು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾನೆ ಎಂಬುದನ್ನ ಕಾದು ನೋಡಬೇಕು. ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ












Click it and Unblock the Notifications