ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಹುಲ್ ಗಾಂಧಿ ಬಂಧಿಸಿದ ಉತ್ತರ ಪ್ರದೇಶ ಪೊಲೀಸರ ವಿರುದ್ಧ ಸಿದ್ದರಾಮಯ್ಯ ಕಿಡಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 1: ಉತ್ತರ ಪ್ರದೇಶ ಸರ್ಕಾರ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಮೇಲೆ ದೌರ್ಜನ್ಯವೆಸಗಿದೆ ಎಂದು ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ದಲಿತ ಯುವತಿ ಪರವಾಗಿ ಹಾಗೂ ಪ್ರಕರಣವನ್ನು ಖಂಡಿಸಿ ರಾಹುಲ್ ಗಾಂಧಿ ಹಾಗೂ ಪ್ರಯಾಂಕಾ ಗಾಂಧಿ ಪ್ರತಿಭಟನೆಯನ್ನು ಮಾಡಿದ್ದಾರೆ.

ಹತ್ರಾಸ್‌ಗೆ ಹೊರಟಿದ್ದ ರಾಹುಲ್, ಪ್ರಿಯಾಂಕಾ ಬಂಧನಹತ್ರಾಸ್‌ಗೆ ಹೊರಟಿದ್ದ ರಾಹುಲ್, ಪ್ರಿಯಾಂಕಾ ಬಂಧನ

ಆದರೆ ಪೊಲೀಸ್ ಬಲದಿಂದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರ ಮೇಲೆ ಉತ್ತರ ಪ್ರದೇಶದ ಸರ್ಕಾರ ದೌರ್ಜನ್ಯ ಎಸಗಿದೆ. ರಾಹುಲ್ ಗಾಂಧಿ ಅವರ ಮೇಲೆ ಪೊಲೀಸರು ಹಲ್ಲೆ ಮಾಡಿ ಅವರ ಮೇಲೆ ಕೈ ಮಾಡಿರುವಂಥದ್ದು ತೀವ್ರ ಖಂಡನೀಯ.

Siddaramaiah Condemns Arrest Of Rahul Gandhi By UP Police

ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅಂಥವರಿಗೆ ರಕ್ಷಣೆ ಇಲ್ಲದ ಉತ್ತರ ಪ್ರದೇಶದಲ್ಲಿ ಸಾಮಾನ್ಯ ಜನರಿಗೆ ರಕ್ಷಣೆ ಎಲ್ಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಜೊತೆಗೆ ಈ ಎಲ್ಲ ಘಟನೆಗಳನ್ನು ಜನ ಸಾಮಾನ್ಯರೂ ಖಂಡಿಸಬೇಕು ಎಂದು ಅವರು ವಿನಂತಿಸಿದ್ದಾರೆ.

ಈ ಇಬ್ಬರು ನಾಯಕರ ಬಂಧನ ಮತ್ತು ಅವರ ಜೊತೆಗಿನ ಪೊಲೀಸರ ದುರ್ವರ್ತನೆಗೆ ಯೋಗಿ ಆದಿತ್ಯನಾಥ್ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಅತ್ಯಾಚಾರಕ್ಕೀಡಾಗಿ ಸಾವನ್ನಪ್ಪಿರುವ ದಲಿತ ಯುವತಿಯ ಕುಟುಂಬವನ್ನು ಪೊಲೀಸರು ಗೃಹಬಂಧನದಲ್ಲಿರಿಸಿದ್ದಾರೆ. ಸರ್ಕಾರದ ಬಣ್ಣ ಬಯಲಾಗುತ್ತದೆ ಎನ್ನುವ ಕಾರಣಕ್ಕೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಅವರಿಗೆ ಅವಕಾಶ ನೀಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Recommended Video

ಉಪಚುನಾವಣೆ , Rajarajeshwari ಕ್ಷೇತ್ರದ್ದೆ TENSION!! | Oneindia Kannada

English summary
Karnataka opposition leader Siddaramaiah criticised the Uttar Pradesh police for "arresting" party leader Rahul Gandhi when he was on his way to meet the family of Hathras victim.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X