ಪತ್ರಕರ್ತ ಡಾ ಚಪ್ಪಲ್ಲಿ ಸೀತಾರಾಂ ನಿಧನಕ್ಕೆ ಸಿಎಂ ಸಂತಾಪ
ಬೆಂಗಳೂರು, ಸೆ. 16: ಹಿರಿಯ ಪತ್ರಕರ್ತ ಹಾಗೂ ಕನ್ನಡ ಚಲನಚಿತ್ರ ಪತ್ರಿಕೋದ್ಯಮದ ದಿಗ್ಗಜ ಡಾ. ಚಪ್ಪಲ್ಲಿ ಸೀತಾರಾಂ(74) ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಕನ್ನಡದ ಸಿನಿ ಸಾಪ್ತಾಹಿಕ ಮೇನಕ' ಪತ್ರಿಕೆಯಿಂದ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿ 'ಕನ್ನಡಪ್ರಭ' ಪತ್ರಿಕೆಯ ಸಿನಿಮಾ ಪುರವಣಿಗೆ ಕಾಯಕಲ್ಪ ನೀಡಿ ಎಲ್ಲರ ಮೆಚ್ಚುಗೆ ಗಳಿಸಿದ ಡಾ ಸೀತಾರಾಂ ಅವರು ತಮ್ಮ ನೇರ ಮತ್ತು ನಿಷ್ಠೂರ ಬರವಣಿಗೆಗೆ ಮತ್ತೊಂದು ಹೆಸರಾಗಿದ್ದರು.
ಆ ಕಾಲದಲ್ಲಿ ಕನ್ನಡ ಪ್ರಭ ಪತ್ರಿಕೆಯಲ್ಲಿನ ಡಾ ಸೀತಾರಾಂ ಅವರ ಚಿತ್ರ ವಿಮರ್ಶೆಯ ಅಂಕಣವನ್ನು ಇಡೀ ಗಾಂಧೀನಗರವೇ ಎದುರು ನೋಡುತ್ತಿತ್ತು! ಮೇಲ್ನೋಟಕ್ಕೆ ಗಂಭೀರ ಸ್ವಭಾವದಂತೆ ಕಂಡರೂ, ಡಾ ಸೀತಾರಾಂ ಅವರು ಹಲವು ಹಾಸ್ಯ ಲೇಖನಗಳನ್ನು ಬರೆದಿದ್ದಾರೆ ಎಂಬುದು ಸೋಜಿಗದ ಸಂಗತಿ.

ಕನ್ನಡ ಚಲನಚಿತ್ರ ರಂಗದ ಎಲ್ಲಾ ಕಲಾವಿದರು ಹಾಗೂ ತಂತ್ರಜ್ಞರ ಬಗ್ಗೆ ಅಪಾರ ಮಾಹಿತಿ ಹೊಂದಿ ನಡೆದಾಡುವ ವಿಶ್ವಕೋಶ ಎಂದೆನಿಸಿದ್ದ ಡಾ ಸೀತಾರಾಂ ಅವರು ಚಲನಚಿತ್ರ ಸಂಬಂಧಿ ಹಲವು ಮೌಲಿಕ ಪುಸ್ತಕಗಳನ್ನೂ ಹೊರತಂದಿದ್ದಾರೆ.
ಚಿತ್ರ ನಿರ್ದೇಶಕ ಎನ್.ಲಕ್ಷ್ಮೀ ನಾರಾಯಣ್ ಅವರ ಸಿನೆಮಾಗಳ ಕುರಿತು ಸೀತಾರಾಮ್ ಅವರು ಬರೆದ ವಿಶ್ಲೇಷಣಾತ್ಮಕ ಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಡಾಕ್ಟರೇಟ್ ಪ್ರದಾನಿಸಿ ಗೌರವಿಸಿದೆ ಎಂದು ಮುಖ್ಯಮಂತ್ರಿ ಬಣ್ಣಿಸಿದ್ದಾರೆ.
ಕರ್ನಾಟಕ ಚಲನಚಿತ್ರ ಪತ್ರಕರ್ತರ ಪರಿಷತ್‌ನ ಅಧ್ಯಕ್ಷರೂ ಆಗಿ ಸೇವೆ ಸಲ್ಲಿಸಿದ್ದ ಡಾ ಸೀತಾರಾಂ ಅವರು ಮಲ್ಲೇಶ್ವರಂ ಬಡಾವಣೆಯಲ್ಲಿ ಶತಮಾನ ಕಂಡ ತಮ್ಮ ಮನೆಯನ್ನು ತಾವು ಬದುಕಿರುವವರೆಗೂ ಉಳಿಸಿಕೊಳ್ಳುತ್ತೇನೆ ಎಂದು ತಮ್ಮ ಆಪ್ತ ವಲಯದಲ್ಲಿ ಸದಾ ಹೇಳುತ್ತಿದ್ದರು. ಅಂತೆಯೇ, ನುಡಿದಂತೆ ನಡೆದರು ಎಂದು ಸಿದ್ದರಾಮಯ್ಯ ಅವರು ಸ್ಮರಿಸಿದ್ದಾರೆ.
ಕೆಲ ಕಾಲದಿಂದ ಅನಾರೋಗ್ಯ ಪೀಡಿತರಾಗಿದ್ದ ಸೀತಾರಾಮ್ ಅವರು ಮಂಗಳವಾರ (ಸೆಪ್ಟೆಂಬರ್ 15) ನಗರದ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾದರು. ಇವರ ಅಂತ್ಯ ಸಂಸ್ಕಾರವು ಸಂಜೆ ಹರಿಶ್ಚಂದ್ರ ಘಾಟ್‌ನಲ್ಲಿ ನೆರವೇರಿತು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ











Click it and Unblock the Notifications