ನಿರ್ಮಲಾ ಸೀತಾರಾಮನ್ ವರ್ತನೆಗೆ ಸಿದ್ದರಾಮಯ್ಯ ಕೆಂಗಣ್ಣು

ಬೆಂಗಳೂರು, ಆಗಸ್ಟ್ 25: ಅಧ್ಯಯನಕ್ಕೆ ಬಂದ ಕೇಂದ್ರ ಸಚಿವರು ರಾಜ್ಯ ಸಚಿವರನ್ನು ಹಿಂದಿಕ್ಕುವುದರಲ್ಲೇ ಮಗ್ನರಾಗಿದ್ದರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ಗರಂ ಆಗಿರುವ ಸಿದ್ದರಾಮಯ್ಯ ಪ್ರಧಾನಿ ಮೋದಿಯ ಮಲತಾಯಿ ಧೋರಣೆಯನ್ನು ಖಂಡಿಸುತ್ತೇನೆ, ಕೊಡಗಿಗೆ ಪರಿಹಾರ ಹಣ ಬಿಡುಗಡೆ ಮಾಡುವಲ್ಲಿ ಕೇಂದ್ರ ತಾರತಮ್ಯ ತೋರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಚಿವೆ ನಿರ್ಮಲಾ ಸೀತಾರಾಮನ್ ಕೊಡಗಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕೊಡಗು ಉಸ್ತುವಾರಿ ಸಚಿವ ಸಾ.ರಾ. ಮಹೇಶ್‌ ಅವರ ಮೇಲೆ ಹರಿಹಾಯ್ದಿದ್ದಕ್ಕೆ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವರಾಗಿ ಮತ್ತೊಂದು ಸಚಿವರ ಮೇಲೆ ಈ ರೀತಿ ಮಾತನಾಡುವುದು ಸರಿಯಲ್ಲ ಎಂದಿದ್ದಾರೆ.

Siddaramaiah criticizes Nirmala Seetharaman attitude

ಜತೆಗೆ ಕೇಂದ್ರ ಸರ್ಕಾರ ಕೇರಳಕ್ಕೆ ಅನುದಾನ ನೀಡಿದೆ, ಆದರೆ ಕೊಡಗಿಗೆ ಅನುದಾನ ನೀಡಲು ಹಿಂದೇಟು ಹಾಕುತ್ತಿದೆ. ಕೊಡಗಿನ ಪರಿಸ್ಥಿತಿಯನ್ನು ನೋಡಿದ ಮೇಲೆಯೂ ಅವರಿಗೆ ಕನಿಕರ ಬಂದಂತೆ ಕಾಣುತ್ತಿಲ್ಲ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+