ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್‌ ಮಾಡಲು ಸಿದ್ದರಾಮಯ್ಯ ಒತ್ತಾಯ

|
Google Oneindia Kannada News

ಬೆಂಗಳೂರು, ಜೂನ್ 26: ಕರ್ನಾಟಕದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಏರುತ್ತಿದೆ. ದಿನೇ ದಿನೇ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆ ಮತ್ತೊಮ್ಮೆ ಲಾಕ್‌ಡೌನ್‌ ಮಾಡಬೇಕು ಎಂಬ ಒತ್ತಾಯ ಹೆಚ್ಚಾಗಿದೆ.

Recommended Video

ಪತ್ರದ ಮೂಲಕ ಯಡಿಯೂರಪ್ಪನಿಗೆ ಎಚ್ಚರಿಕೆ ನೀಡಿದ ದೇವೇಗೌಡ | Devegowda Writes letter to Yediyurappa

ಆದರೆ, ಯಾವುದೇ ಕಾರಣಕ್ಕೂ ಲಾಕ್‌ಡೌನ್‌ ಮಾಡಲ್ಲ ಎಂದು ಸಿಎಂ ಯಡಿಯೂರಪ್ಪ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಇದೀಗ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ''ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್‌ ಮಾಡಿ'' ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸಮುದಾಯಕ್ಕೆ ಹರಡಿದೆ ಕೋವಿಡ್ ಸೋಂಕು: ಸಿದ್ದರಾಮಯ್ಯ ಎಚ್ಚರಿಕೆ!ಸಮುದಾಯಕ್ಕೆ ಹರಡಿದೆ ಕೋವಿಡ್ ಸೋಂಕು: ಸಿದ್ದರಾಮಯ್ಯ ಎಚ್ಚರಿಕೆ!

ಕೊರೊನಾ ಭೀತಿ ಹಿನ್ನೆಲೆ ಈ ಮೊದಲ ಪ್ರಧಾನಿ ಮೋದಿ ಘೊಷಣೆ ಮಾಡಿದ ಲಾಕ್‌ಡೌನ್‌ಗೆ ಪೂರ್ವಸಿದ್ಧತೆ ಇರಲಿಲ್ಲ. ಆದ್ದರಿಂದಲೇ ದೇಶದ ಜನರು ಇಂತಹ ಸ್ಥಿತಿಗೆ ತಲುಪಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

 Siddaramaiah Demanding For Once again Lockdown In State

'ಪೂರ್ವಸಿದ್ಧತೆ ಇಲ್ಲದೆ ಪ್ರಾರಂಭದಲ್ಲಿ ಲಾಕ್‌ಡೌನ್ ಘೋಷಿಸಿದ್ದರಿಂದ ಜನರ ಆರೋಗ್ಯ ಮತ್ತು ರಾಜ್ಯದ ಆರ್ಥಿಕತೆ ಎರಡೂ ಹಾಳಾಯ್ತು. ಈಗ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವಾಗ ಲಾಕ್‌ಡೌನ್ ಆಗಬೇಕಾಗಿದೆ' ಎಂದು ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಸೋಂಕು ನಿಯಂತ್ರಣ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ನಿನ್ನೆ ಸಚಿವ ಸಂಪುಟ ಸಭೆ ನಡೆದಿತ್ತು. ಇಂದು ಬೆಂಗಳೂರಿನ ಸರ್ವಪಕ್ಷ ಶಾಸಕರ ಸಭೆ ನಡೆದಿದೆ. ಎರಡೂ ಸಭೆಯಲ್ಲೂ ಲಾಕ್‌ಡೌನ್‌ ಮಾಡುವ ಯೋಚನೆ ಇಲ್ಲ ಸರ್ಕಾರ ಸ್ಪಷ್ಟವಾಗಿದೆ ಹೇಳಿದೆ.

ಲಾಕ್‌ಡೌನ್‌ ಮಾಡಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಸಹ ನಿನ್ನೆ ವಿಧಾನಸೌದದಲ್ಲಿ ಮಾಹಿತಿ ನೀಡಿದ್ದರು. ಈ ನಡುವೆ ಸೋಂಕು ಹೆಚ್ಚು ಕಾಣಿಸಿಕೊಂಡ ಕೆಲವು ಪ್ರದೇಶಗಳಲ್ಲಿ ಸೀಲ್‌ಡೌನ್ ಮಾಡಲಾಗಿದೆ.

English summary
Congress senior leader Siddaramaiah demanding for state govt to implement once again Lockdown due to covid19 cases rise.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X