ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದು ವಿರುದ್ಧ 400 ಕೋಟಿ ರೂ. ಮೌಲ್ಯದ ಜಾಗ ಕಬಳಿಕೆ ಆರೋಪ: ಲೋಕಾಯುಕ್ತಕ್ಕೆ ದೂರು

|
Google Oneindia Kannada News

ಬೆಂಗಳೂರು ನವೆಂಬರ್ 23: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಡಿ ನೋಟಿಫಿಕೇಷನ್ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಕಬಳಿಸಿದ್ದಾರೆ ಎಂದು ಆರೋಪಿ ಬಿಜೆಪಿ ಮುಖಂಡರೊಬ್ಬರು ಕರ್ನಾಟಕ ಲೋಕಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಹೀಗೆಂದು ಆರೋಪಿಸಿ ಬಿಜೆಪಿ ಬೆಂಗಳೂರು ದಕ್ಷಿಣ ಘಟಕದ ಅಧ್ಯಕ್ಷ ಎನ್‌.ಆರ್.ರಮೇಶ್ ಲೋಕಾಯುಕ್ತಕ್ಕೆ ಮಂಗಳವಾರ ದಾಖಲೆಗಳ ಸಮೇತ ದೂರು ನೀಡಿದ್ದಾರೆ.

40 ವರ್ಷಗಳಲ್ಲಿ ಸಿದ್ದರಾಮಯ್ಯ ಇಂತಹ ಅವಮಾನವನ್ನು ಎಂದೂ ಅನುಭವಿಸಿಲ್ಲ: ಬಿಜೆಪಿ 40 ವರ್ಷಗಳಲ್ಲಿ ಸಿದ್ದರಾಮಯ್ಯ ಇಂತಹ ಅವಮಾನವನ್ನು ಎಂದೂ ಅನುಭವಿಸಿಲ್ಲ: ಬಿಜೆಪಿ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ಕ್ಕೆ ಸೇರಿದ ಸುಮಾರು 400 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಮೂರನೇ ವ್ಯಕ್ತಿಯ ಪಾಲಾಗುವಂತೆ ಮಾಡಿದ್ದಾರೆ. ಅದಕ್ಕಾಗಿ ಸಂಬಂಧಿಸಿದ ಅಧಿಕಾರಿಗಳನ್ನು ದುರಪಯೋಗ ಮಾಡಿಕೊಂಡಿದ್ದಾರೆ ದೂರಿನಲ್ಲಿ ಅವರು ಉಲ್ಲೇಖಿಸಿದ್ದಾರೆ.

Siddaramaiah did denotification land worth 400cr allegations NR Ramesh Complaint filed in Lokayukta

ಸಿದ್ದರಾಮಯ್ಯರ ಅವಧಿಯಲ್ಲಿ ನಗರಾಭಿವೃದ್ಧ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ ಮಹೇಂದ್ರ ಕುಮಾರ್ ಜೈನ್, ಇಲಾಖೆ ಅಧೀನ ಕಾರ್ಯದರ್ಶಿಯಾಗಿದ್ದ ಎನ್‌.ನರಸಿಂಹ ಮೂರ್ತಿ, ಇಲಾಖೆ ಕಾನೂನು ಕೋಶಾಧಿಕಾರಿಗಳು ಹಾಗೂ ಬಿಡಿಎ ಆಯುಕ್ತರಾಗಿದ್ದ ಶ್ಯಾಮ್ ಭಟ್‌ ವಿರುದ್ಧ ಅವರ ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಈ ಮೂಲಕ ಡಿ ನೋಟಿಫಿಕೇಷನ್ ಹೆಸರಿನಡಿ ಭಾರಿ ಭ್ರಷ್ಟಾಚಾರ ಎಸಗಿದ್ದಾರೆ.

2016ರಲ್ಲಿ ಡಿನೋಟಿಫಿಕೇಷನ್

ಭೂಪಸಂದ್ರದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ಕ್ಕೆ ಸೇರಿದ್ದ ಸುಮಾರು 6 ಎಕರೆಗಿಂತಲೂ ಅಧಿಕ ಜಾಗವನ್ನು ಆರ್ಎಂವಿ ಎರಡನೇ ಹಂತದ ಬಡಾವಣೆ ನಿರ್ಮಾಣಕ್ಕೆಂದು 1984ರಲ್ಲಿ ಬಿಡಿಎ ಅಲ್ಲಿನ ಪ್ರದೇಶವನ್ನು ಸ್ವಾಧೀನ ಪಡೆಸಿಕೊಂಡಿತ್ತು. ಆದರೆ ಈ ಜಾಗವನ್ನು 2016ರಲ್ಲಿ ಸಿದ್ದರಾಮಯ್ಯರ ಅವಧಿಯಲ್ಲಿ ಡಿನೋಟಿಫಿಕೇಷನ್ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಸಿದ್ದರಾಮ್ಯನವರು ತಮ್ಮ ಅಧಿಕಾರದ ಪ್ರಭಾವ ಭೀರಿ ಕಾನೂನು ಮೀರಿ ಡಿನೋಟಿಫಿಕೇಷನ್ ಮಾಡಿಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಸದ್ಯ ಸಿದ್ದರಾಮಯ್ಯರ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಕಲಂ 420, 465, 468 ಮತ್ತು 120(B) ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ ಹಾಗೂ ಬೇನಾಮಿ ಆಸ್ತಿ ನಿಷೇಧ ಕಾಯ್ದೆಯಡಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.

Siddaramaiah did denotification land worth 400cr allegations NR Ramesh Complaint filed in Lokayukta

ಸಿದ್ದು ವಿರುದ್ಧ 1.30 ಕೋಟಿ ರೂ. ಆರೋಪ

ಕೆಲವು ದಿನಗಳ ಹಿಂದಷ್ಟೇ ಸಿದ್ದರಾಮಯ್ಯನವರು ಅಧಿಕಾರದಲ್ಲಿದ್ದಾಗ ಚೆಕ್ ಮೂಲಕ 1.30 ಕೋಟಿ ರೂ. ಪಡೆದಿದ್ದರು ಎಂದು ಆರೋಪ ಮಾಡಿದ್ದರು. ಈ ಸಂಬಂಧ ಲೋಕಾಯುಕ್ತ ತನಿಖೆ ಆಗ್ರಹಿಸಿ ದೂರು ಸಲ್ಲಿಸುವುದಾಗಿ ಎಚ್ಚರಿಕೆ ನೀಡಿದ್ದರು. ಬಳಿಕ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಈ ಬಗ್ಗೆ ದೂರು ಸಲ್ಲಿಸಿದ್ದರು.

English summary
Farmer CM Siddaramaiah did denotification land worth of 400cr allegations by BJP leader NR Ramesh Complaint filed in Lokayukta on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X