ಸಿದ್ದರಾಮಯ್ಯ ಅವರಿಂದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ
ಬೆಂಗಳೂರು, ಜನವರಿ 03: ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾರ್ಥಿಗಳಿಗೆ ಬುಧವಾರ ಲ್ಯಾಪ್ ಟಾಪ್ ಗಳನ್ನು ವಿತರಿಸಿದರು.
ಎಸ್‌ಸಿಪಿ/ಟಿಎಸ್‌ಪಿ (Special Component Plan (SCP) and Tribal Sub Plan (TSP)) ಯೋಜನೆಯಡಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಪ್ರಥಮ ಪದವಿ ಮತ್ತು ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ ಫಲಾನುಭವಿ ವಿದ್ಯಾರ್ಥಿಗಳು ಉಚಿತ ಲ್ಯಾಪ್‌ಟಾಪ್‌ಗಳನ್ನು ಪಡೆದುಕೊಂಡರು.

ಲ್ಯಾಪ್‌ಟಾಪ್ ವಿತರಣಾ ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಸಚಿವಾಲಯವು ಹಮ್ಮಿಕೊಂಡಿತ್ತು, ಕಾರ್ಯಕ್ರಮದಲ್ಲಿ ಬೆಂಗಳೂರು ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಇನ್ನಿತರ ಕಾಂಗ್ರೆಸ್ ಪ್ರಮುಖ ಮುಖಂಡರು ಭಾಗವಹಿಸಿದ್ದರು.

ಕಾರ್ಯಕ್ರಮದ ಚಿತ್ರಗಳನ್ನು ಮುಖ್ಯಮಂತ್ರಿ ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರೂ ಸಾಮಾಜಿಕ ಜಾಲತಾಣದಲ್ಲಿ ಕಾರ್ಯಕ್ರಮದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.











Click it and Unblock the Notifications