Karnataka CM:ಸೋಮವಾರ ಸಿದ್ದರಾಮಯ್ಯ - ಡಿಕೆ ಶಿವಕುಮಾರ್ ದೆಹಲಿಗೆ : ಅಲ್ಲೇ ಅಂತಿಮ ನಿರ್ಧಾರ

ಕರ್ನಾಟಕ ಮುಂದಿನ ಮುಖ್ಯಮಂತ್ರಿ ಆಯ್ಕೆ ವಿಚಾರ ಈಗ ದೆಹಲಿ ಅಂಗಳಕ್ಕೆ ತಲುಪಿದೆ. ಸಿಎಂ ಯಾರು ಎನ್ನುವುದನ್ನು ಹೈಕಮಾಂಡ್ ನಿರ್ಧರಿಸಲಿ ಎಂದು ಪಟ್ಟುಹಿಡಿದಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಂದಿನ ಸಿಎಂ ಯಾರು ಎಂದು ನಿರ್ಧರಿಸಲಿದ್ದಾರೆ.

ಈ ಬೆನ್ನಲ್ಲೇ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರನ್ನು ದೆಹಲಿಗೆ ಬರುವಂತೆ ಸೂಚಿಸಲಾಗಿದೆ. ಸೋಮವಾರ ಇಬ್ಬರೂ ನಾಯಕರಿಗೆ ದೆಹಲಿಗೆ ತೆರಳಲಿದ್ದು, ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಜೊತೆ ಚರ್ಚೆ ಮಾಡಲಿದ್ದಾರೆ.

Siddaramaiah & DK Shivakumar Summoned By Congress High Command To Decide Karnatakas Next CM

ಇಬ್ಬರ ಜೊತೆ ಕಾಂಗ್ರೆಸ್ ಹೈ ಕಮಾಂಡ್ ಚರ್ಚೆ ನಡೆಸಲಿದ್ದು ಯಾವ ತೀರ್ಮಾನ ಮಾಡುತ್ತಾರೆ ಎಂದು ಕಾದು ನೋಡಬೇಕಿದೆ. ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತೆರಳಿದ್ದು, ಅಧಿಕಾರ ಹಂಚಿಕೆ ವಿಚಾರವಾಗಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಜೊತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಚುನಾವಣೆಗೂ ಮುನ್ನ ಒಗ್ಗಟ್ಟಿನ ಮಂತ್ರ ಜಪಿಸಿದ್ದ ಕಾಂಗ್ರೆಸ್ ನಾಯಕರಲ್ಲಿ ಸರ್ಕಾರ ರಚನೆ ಬಳಿಕವೂ ಅದೆ ಒಗ್ಗಟ್ಟನ್ನು ಕಾಪಾಡಿಕೊಳ್ಳುವುದು ಮುಖ್ಯವಾಗಿದೆ. ಇಬ್ಬರೂ ಪ್ರಬಲ ನಾಯಕರಾಗಿದ್ದು, ಒಬ್ಬರನ್ನು ಸಿಎಂ ಮಾಡಿದರೆ, ಇನ್ನೊಬ್ಬರನ್ನು ಸಮಾಧಾನ ಪಡಿಸುವುದು ಹೈಕಮಾಂಡ್‌ಗೆ ದೊಡ್ಡ ಸವಾಲಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+