ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸ್ವತಃ ಪಕ್ಷಾಂತರ ಮಾಡಿದ್ದ ಸಿದ್ದರಾಮಯ್ಯಗೆ ನೈತಿಕತೆ ಇದೆಯೇ?: ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಜುಲೈ 9: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮಾನಾಸ್ಪದ ರೀತಿಯ ಆಟವಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಬೊಮ್ಮಾಯಿ, ಸಿದ್ದರಾಮಯ್ಯ ಅವರು ಶಾಸಕರಿಗೆ ಬೆದರಿಕೆ ಹಾಕಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯ ಸಭೆ ಚುನಾವಣೆಗೆ ಮತ ಹಾಕಲು ಏಳು ಶಾಸಕರನ್ನು ಎಲ್ಲಿಂದ ಕರೆದುಕೊಂಡು ಬಂದಿದ್ದರು ಎಂದು ಸಿದ್ದರಾಮಯ್ಯ ಹೇಳಲಿ. ಅವರಿಗೆ ಎಲ್ಲಿಂದ ಹಣ ಬಂದಿತ್ತು? ಎಂದು ಪ್ರಶ್ನಿಸಿದರು.

ರಾಜೀನಾಮೆ ನೀಡಿರುವ ಶಾಸಕರಿಗೆ ಕೊನೆ ಎಚ್ಚರಿಕೆ ಕೊಟ್ಟ ಸಿದ್ದರಾಮಯ್ಯ ರಾಜೀನಾಮೆ ನೀಡಿರುವ ಶಾಸಕರಿಗೆ ಕೊನೆ ಎಚ್ಚರಿಕೆ ಕೊಟ್ಟ ಸಿದ್ದರಾಮಯ್ಯ

ಶಾಸಕರು ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡಿರುವುದರಿಂದ ಅವರ ಮೇಲೆ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯವಾಗುವುದಿಲ್ಲ. ಸಿದ್ದರಾಮಯ್ಯ ಅವರು ಸ್ವತಃ ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಪಕ್ಷಾಂತರ ಮಾಡಿದ್ದವರು. ಅವರಿಗೆ ಈಗ ಯಾವ ನೈತಿಕತೆ ಇದೆ ಎಂದು ಹೇಳಿದರು.

siddaramaiah does not have moral right himself defected from jds basavaraj bommai

ಶಾಸಕರ ರಾಜೀನಾಮೆಯಿಂದ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವು ರಾಜಕೀಯ ಬಿಕ್ಕಟ್ಟಿನಿಂದ ಅಂತಿಮ ಸ್ಥಿತಿಗೆ ತಲುಪಿದೆ ಎಂದರು.

ಅನರ್ಹತೆಯ ಬೆದರಿಕೆಗೂ ಜಗ್ಗದ ಅತೃಪ್ತ ಶಾಸಕರು: ಮುಂಬೈನಿಂದ 'ರೆಬೆಲ್ಸ್' ಖಡಕ್ ಸಂದೇಶ ಅನರ್ಹತೆಯ ಬೆದರಿಕೆಗೂ ಜಗ್ಗದ ಅತೃಪ್ತ ಶಾಸಕರು: ಮುಂಬೈನಿಂದ 'ರೆಬೆಲ್ಸ್' ಖಡಕ್ ಸಂದೇಶ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ತೆರಳಿರುವ ಶಾಸಕರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳುವುದಾಗಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದ್ದರು. ರಾಜೀನಾಮೆ ಹಿಂದಕ್ಕೆ ಪಡೆದುಕೊಳ್ಳದೆ ಇದ್ದರೆ ಅನರ್ಹತೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು.

English summary
BJP MLA Basavaraj Bommai asked, Siddaramaiah himself had defected from the JDS to Congress. What moral right does he have?
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X