ಮೋದಿ ಚೌಕಿದಾರ್ ಅಲ್ಲ, ಭ್ರಷ್ಟಾಚಾರದಲ್ಲಿ ಭಾಗಿದಾರ್ : ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ 08 : 'ಪ್ರಧಾನಿ ನರೇಂದ್ರ ಮೋದಿ ದೇಶದ ಮಹಾನ್ ಸುಳ್ಳುಗಾರ. ಮೋದಿ ಚೌಕಿದಾರ್ ಅಲ್ಲ, ಭ್ರಷ್ಟಾಚಾರದಲ್ಲಿ ಭಾಗಿದಾರ್' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಸೋಮವಾರ ಬೆಂಗಳೂರಿನ ರಾಜಾಜಿನಗರದಲ್ಲಿ ಸಿದ್ದರಾಮಯ್ಯ ಅವರು ರೋಡ್ ಶೋ ನಡೆಸಿದರು. ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಪರವಾಗಿ ಮತ ಯಾಚನೆ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸರ್ಕಾರವನ್ನು ಟಾರ್ಗೆಟ್ ಮಾಡಿದ ಸಿದ್ದರಾಮಯ್ಯ ಅವರು, 'ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿ ಯಾರೂ ಇಲ್ಲ. ಮೋದಿ ದೇಶದ ಮಹಾನ್ ಸುಳ್ಳುಗಾರ' ಎಂದು ವಾಗ್ದಾಳಿ ನಡೆಸಿದರು.

ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಪರಿಚಯ ಓದಿ

ಏಪ್ರಿಲ್ 18ರಂದು ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಚುನಾವಣೆ ನಡೆಯಲಿದೆ. ಬಿಜೆಪಿಯಿಂದ ಹಾಲಿ ಸಂಸದ ಪಿ.ಸಿ.ಮೋಹನ್ ಅಭ್ಯರ್ಥಿ. ಕಾಂಗ್ರೆಸ್-ಜೆಡಿಎಸ್‌ನಿಂದ ರಿಜ್ವಾನ್ ಅರ್ಷದ್ ಕಣದಲ್ಲಿದ್ದಾರೆ. ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಟ ಪ್ರಕಾಶ್ ರಾಜ್ ಕಣದಲ್ಲಿದ್ದಾರೆ.....

ಸುಮಲತಾ ಗೆಲ್ಲಿಸಿಕೊಡಿ ಅಣ್ಣಾ

ಸುಮಲತಾ ಗೆಲ್ಲಿಸಿಕೊಡಿ ಅಣ್ಣಾ

ಸಿದ್ದರಾಮಯ್ಯ ಅವರು ರಾಜಾಜಿನಗರದಲ್ಲಿ ರೋಡ್ ಶೋ ನಡೆಸುವಾಗ ಕಾರ್ಯಕರ್ತನೊಬ್ಬ, 'ರಿಜ್ವಾನ್ ಅರ್ಷದ್ ಅವರನ್ನು ಇಲ್ಲಿ ಗೆಲ್ಲಿಸುತ್ತೇವೆ. ಮಂಡ್ಯದಲ್ಲಿ ಸುಮಲತಾ ಗೆಲ್ಲಿಸಿಕೊಡಿ ಅಣ್ಣಾ' ಎಂದು ಮನವಿ ಮಾಡಿದರು.

ಮೋದಿ ನೋಡಿ ಏಕೆ ಮತ ಹಾಕಬೇಕು

ಮೋದಿ ನೋಡಿ ಏಕೆ ಮತ ಹಾಕಬೇಕು

'ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಕ್ಷೇತ್ರದಲ್ಲಿ ಕೆಲಸ ಮಾಡಿದ್ದರೆ ಏಕೆ ಮೋದಿ ಮುಖ ನೋಡಿಕೊಂಡು ಮತ ಹಾಕಬೇಕು. ಒಂದೇ ಒಂದು ದಿನ ಸಂಸತ್‌ನಲ್ಲಿ ಕ್ಷೇತ್ರದ ವಿಚಾರದ ಬಗ್ಗೆ ಮಾತನಾಡಿಲ್ಲ. ಇವರನ್ನು ಮತ್ತೆ ಸಂಸತ್ತಿಗೆ ಕಳುಹಿಸುತ್ತೀರಾ?' ಎಂದು ಸಿದ್ದರಾಮಯ್ಯ ಜನರನ್ನು ಪ್ರಶ್ನಿಸಿದರು.

ಶ್ರೀಮಂತರಿಗೆ ಅಚ್ಛೇದಿನ್ ಬಂದಿತು

ಶ್ರೀಮಂತರಿಗೆ ಅಚ್ಛೇದಿನ್ ಬಂದಿತು

'ನನ್ನ ಅವಧಿಯಲ್ಲಿ ಬೆಂಗಳೂರು ಸಾಕಷ್ಟು ಅಭಿವೃದ್ಧಿಯಾಗಿದೆ. ಯುಕವರು ಉದ್ಯೋಗ ಕೇಳಿದರೆ ಮೋದಿ, ಅಮಿತ್ ಶಾ ಪಕೋಡ ಮಾರಾಟ ಮಾಡಿ ಎನ್ನುತ್ತಾರೆ. ಮೋದಿ ಚೌಕಿದಾರ್ ಅಲ್ಲ, ಭ್ರಷ್ಟಾಚಾರದಲ್ಲಿ ಭಾಗಿದಾರ್. ಶ್ರೀಮಂತರಿಗೆ ಅಚ್ಛೇದಿನ್ ಬಂದಿದೆ ಹೊರತು ಬಡವರಿಗೆ ಬಂದಿಲ್ಲ' ಎಂದು ಸಿದ್ದರಾಮಯ್ಯ ಟೀಕಿಸಿದರು.

ಜೈಲಿಗೆ ಹೋದವರು ಚೌಕಿದಾರ್

ಜೈಲಿಗೆ ಹೋದವರು ಚೌಕಿದಾರ್

'ಜೈಲಿಗೆ ಹೋಗಿ ಬಂದವರು ಈಗ ಚೌಕಿದಾರ್ ಆಗಿದ್ದಾರೆ. ಯಡಿಯೂರಪ್ಪ, ಕಟ್ಟಾ ಸುಬ್ರಮಣ್ಯ ನಾಯ್ಡು, ಜನಾರ್ದನ ರೆಡ್ಡಿ ಚೌಕಿದಾರ್‌ಗಳು ಎಂದು ಹೇಳುತ್ತಿದ್ದಾರೆ. ಪಿ.ಸಿ.ಮೋಹನ್ ಕೇಂದ್ರದಿಂದ ಏನೇನೂ ಯೋಜನೆ ತಂದಿದ್ದಾರೆ ಎಂದು ಎದೆ ತಟ್ಟಿ ಹೇಳಲಿ ನೋಡೋಣ' ಎಂದು ಸಿದ್ದರಾಮಯ್ಯ ಸವಾಲು ಹಾಕಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+