ಪ್ರಧಾನಿ ಮೋದಿಗೆ ಸಹಾನುಭೂತಿ ತೋರಿದ ಸಿದ್ದರಾಮಯ್ಯ!

Recommended Video

      5 states election resuts 2018:ಪ್ರಧಾನಿ ಮೋದಿಗೆ ಸಹಾನುಭೂತಿ ತೋರಿದ ಸಿದ್ದರಾಮಯ್ಯ! | Oneindia Kannada

      ಬೆಂಗಳೂರು, ಡಿಸೆಂಬರ್ 12: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಟ್ವೀಟ್ ಮಾಡಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ.

      "ರಾಜಸ್ಥಾನ, ಛತ್ತೀಸ್ ಗಢ ಮತ್ತು ಮಧ್ಯಪ್ರದೇಶದ ಮತದಾರರು ಸರ್ವಾಧಿಕಾರಿ, ಕೋಮುವಾದಿ ಮತ್ತು ದುರಹಂಕಾರಿ ನಾಯಕತ್ವವನ್ನು ತಿರಸ್ಕರಿಸಿ, ಪ್ರಜಾಪ್ರಭುತ್ವವಾದಿ, ಜಾತ್ಯತೀತ ಮತ್ತು ವಿನಯವಂತ ನಾಯಕತ್ವವನ್ನು ಬೆಂಬಲಿಸಿದ್ದಾರೆ.

      ಮತದಾರರಿಗೆ ಕೃತಜ್ಞತೆಗಳು, ರಾಹುಲ್‌ಜಿಗೆ ಅಭಿನಂದನೆಗಳು, ನರೇಂದ್ರ ಮೋದಿಯವರಿಗೆ ಸಹಾನುಭೂತಿಗಳು" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

      Siddaramaiah expresses sympathy for Modi

      ಇದಕ್ಕೂ ಮುನ್ನ ಫಲಿತಾಂಶದಲ್ಲಿ ಕಾಂಗ್ರೆಸ್ಸಿಗೆ ಮುನ್ನಡೆ ವ್ಯಕ್ತವಾಗುತ್ತಿದ್ದಂತೆಯೇ, "ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಪ್ರಚಾರದ ಗಾಳಿಪಟಗಳು ನೆಲಕ್ಕುರುಳುತ್ತಿವೆ. ಇದು ಗೆದ್ದು ಬೀಗುವ ಸಮಯ ಅಲ್ಲ. ಸೈದ್ಧಾಂತಿಕವಾಗಿ ಗಟ್ಟಿಗೊಂಡು ನೆಲದಲ್ಲಿ ಕಾಲೂರಿ ಹೋರಾಟದಲ್ಲಿ ತೊಡಗಬೇಕಾದ ಕಾಲ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

      ಛತ್ತೀಸ್ ಗಢ, ರಾಜಸ್ಥಾನ, ಮಧ್ಯಪ್ರದೇಶ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ವಹಿಸಿಕೊಳ್ಳುವುದು ಖಚಿತವಾಗಿದ್ದರೆ, ತೆಲಂಗಾಣದಲ್ಲಿ ಟಿಆರ್ ಎಸ್ ಮತ್ತು ಮಿಜೋರಾಂ ನಲ್ಲಿ ಎಂಎನ್ ಎಫ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಐದೂ ರಾಜ್ಯಗಳಲ್ಲೂ ಬಿಜೆಪಿ ಸೋಲು ಕಂಡಿದೆ. ತಾನು ಅಧಿಕಾರದಲ್ಲಿದ್ದ ಛತ್ತೀಸ್ ಗಢ, ರಾಜಸ್ಥಾನ, ಮಧ್ಯಪ್ರದೇಶ ಮೂರೂ ರಾಜ್ಯಗಳಲ್ಲೂ ಬಿಜೆಪಿ ಸೋಲುಂಡಿದ್ದು, ಬಿಜೆಪಿ ನಾಯಕರಲ್ಲಿ ಆತಂಕ ಸೃಷ್ಟಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+