• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೂದಿ ಮುಚ್ಚಿದ ಕೆಂಡ ಮಂಗಳೂರಿಗೆ ಸಿದ್ದರಾಮಯ್ಯ ಭೇಟಿ

|
   ಧಾರ್ಮಿಕ ಮುಖಂಡರ ಜೊತೆ ಚರ್ಚೆ ಮಾಡಲಿರುವ ಸಿದ್ದು | Siddaramaiah | OneIndia kannada

   ಬೆಂಗಳೂರು, ಡಿಸೆಂಬರ್ 23: ಮಂಗಳೂರಿಗೆ ಭೇಟಿ ನೀಡಲು ಚಡಪಡಿಸುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅಡೆತಡೆಗಳ ನಂತರ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

   ಇಂದು 11 ಗಂಟೆಗೆ ಮಂಗಳೂರಿಗೆ ತೆರಳಲಿರುವ ಸಿದ್ದರಾಮಯ್ಯ ಅಲ್ಲಿನ ಧಾರ್ಮಿಕ ಮುಖಂಡರು, ಕಾಂಗ್ರೆಸ್ ಮುಖಂಡರು, ಪ್ರತಿಭಟನಾಕಾರರನ್ನು ಭೇಟಿ ಮಾಡಿ ಸಂಜೆ ವೇಳೆಗೆ ವಾಪಸ್ ಆಗಲಿದ್ದಾರೆ.

   ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಇಬ್ಬರು ಪೊಲೀಸರ ಗುಂಡಿಗೆ ಬಲಿ ಆಗಿದ್ದಾರೆ. ಘಟನೆ ನಡೆದ ಮರುದಿನವೇ ಸಿದ್ದರಾಮಯ್ಯ ಮಂಗಳೂರಿಗೆ ತೆರಳಬೇಕಾಗಿತ್ತು. ಆದರೆ ಅವರ ಪ್ರವೇಶವನ್ನು ಪೊಲೀಸರು ನಿಷೇಧಿಸಿದ್ದರು.

   ಸಿದ್ದರಾಮಯ್ಯ ಅವರಿಗೆ ನೊಟೀಸ್ ನೀಡಿದ ಮಂಗಳೂರು ಪೊಲೀಸ್ ಆಯುಕ್ತ, ಸಿದ್ದರಾಮಯ್ಯ ಮಂಗಳೂರಿಗೆ ಬರದಂತೆ 144 ಹೇರಿರುವುದಾಗಿ ತಿಳಿಸಿದ್ದರು. ಇದನ್ನು ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದರು.

   ಮಂಗಳೂರು ಭೇಟಿಗೆ ತೆರಳಿದ್ದ ಕಾಂಗ್ರೆಸ್ ನಾಯಕರಾದ ರಮೇಶ್ ಕುಮಾರ್, ಎಂ.ಬಿ.ಪಾಟೀಲ್, ಉಗ್ರಪ್ಪ ಇನ್ನೂ ಹಲವು ನಾಯಕರನ್ನು ಪೊಲೀಸರು ವಿಮಾನ ನಿಲ್ದಾಣದಲ್ಲಿಯೇ ಬಂಧಿಸಿ ಮರಳಿ ಕಳುಹಿಸಿದ್ದರು.

   ಈಗ ಮಂಗಳೂರಿನಲ್ಲಿ ನಿಷೇಧಾಜ್ಞೆ ತೆರವು ಮಾಡಿರುವ ಕಾರಣ ಸಿದ್ದರಾಮಯ್ಯ ಅವರು ಮಂಗಳೂರಿಗೆ ತೆರಳುತ್ತಿದ್ದಾರೆ. ಅವರೊಂದಿಗೆ ಇನ್ನೂ ಕೆಲವು ಕಾಂಗ್ರೆಸ್ ನಾಯಕರೂ ಮಂಗಳೂರಿಗೆ ಹೋಗುತ್ತಿದ್ದಾರೆ.

   English summary
   Former CM Siddaramaiah visiting Mangaluru on December 23. Mangaluru has been tensed due to CAA protest and golibar.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X