'ಜೈಲ್ ಭರೋ ಚಳವಳಿ' ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಬೆಂಗಳೂರು, ಜೂನ್ 18: ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಕಾರ್ಯಾಧ್ಯಕ್ಷ, ಈಶ್ವರ್ ಖಂಡ್ರೆ ಭಾಗವಹಿಸಿದ್ದರು.
ನಸೀರ್ ಅಹ್ಮದ್ ಮತ್ತು ಬಿ.ಕೆ.ಹರಿಪ್ರಸಾದ್ ಇಬ್ಬರು ಕಾಂಗ್ರೆಸ್ ಮೇಲ್ಮನೆ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಅಭ್ಯರ್ಥಿಗಳ ಪರ ಬೆಂಬಲಕ್ಕೆ ನಿಲ್ಲುವಂತೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು
ಈ ಸಭೆ ಬಳಿಕ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಭೂ ಸುಧಾರಣಾ ಕಾಯಿದೆ ತಿದ್ದುಪಡಿ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಕ್ರಮ ಖಂಡಿಸಿದ ಸಿದ್ದರಾಮಯ್ಯ ಜೈಲ್ ಭರೋ ಚಳವಳಿ ನಡೆಸುವ ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯಿದೆ ತಿದ್ದುಪಡಿ ಒಂದು ಕರಾಳ ಶಾಸನವಾಗಲಿದೆ.
— Siddaramaiah (@siddaramaiah) June 18, 2020
ಇದರ ವಿರುದ್ಧ ಕಾಂಗ್ರೆಸ್ ಪಕ್ಷ ರಾಜ್ಯವ್ಯಾಪಿ ಹೋರಾಟ ನಡೆಸಲಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಜೈಲ್ ಭರೋ ಚಳವಳಿ ಸಹ ನಡೆಸಲಾಗುವುದು. 3/3 #CLPmeeting
'ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯಿದೆ ತಿದ್ದುಪಡಿ ಒಂದು ಕರಾಳ ಶಾಸನವಾಗಲಿದೆ. ಇದರ ವಿರುದ್ಧ ಕಾಂಗ್ರೆಸ್ ಪಕ್ಷ ರಾಜ್ಯವ್ಯಾಪಿ ಹೋರಾಟ ನಡೆಸಲಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಜೈಲ್ ಭರೋ ಚಳವಳಿ ಸಹ ನಡೆಸಲಾಗುವುದು' ಎಂದು ಎಚ್ಚರಿಕೆ ನೀಡಿದ್ದಾರೆ.
'ಕಚ್ಛಾ ತೈಲ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕುಸಿದಿದ್ದರೂ ಪೆಟ್ರೋಲ್, ಡೀಸೆಲ್ ಬೆಲೆ ನಿತ್ಯ ಏರಿಕೆಯಾಗುತ್ತಿದೆ. ಸದ್ಯ ಪೆಟ್ರೋಲ್, ಡೀಸೆಲ್ ಲೀಟರ್ ಗೆ ರೂ. 25 - 30 ಇರಬೇಕಿತ್ತು. ಕೇಂದ್ರ ಸರ್ಕಾರ ಪದೇ ಪದೆ ದರ ಏರಿಕೆ ಮಾಡುವ ಮೂಲಕ ಮಧ್ಯಮ ವರ್ಗದ ಜನರನ್ನು ಬಲಿ ಹಾಕುತ್ತಿದೆ' ಎಂದು ಖಂಡಿಸಿದ್ದಾರೆ.
ಇನ್ನು ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಹಿರಿಯ ಮುಖಂಡರಾದ ಬಿಕೆ ಹರಿಪ್ರಸಾದ್ ಅವರು ನಾಮಪತ್ರ ಸಲ್ಲಿಸಿದರು. ಈ ವೇಳೆ ಸೇರಿದಂತೆ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಭಾಗವಹಿಸಿದ್ದರು.