ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಗಡಿಪಾರು ಮಾಡಬೇಕು' ಎಂದು ಆಗ್ರಹಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಫೆ. 21: ಪಾಕಿಸ್ತಾನ್ ಜಿಂದಾಬಾದ್ ಘೊಷಣೆ ಕೂಗಿರುವ ಅಮೂಲ್ಯಳನ್ನು ಗಡಿಪಾರು ಶಿಕ್ಷಗೆ ಒಳಪಡಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಘಟನೆಯನ್ನು ತೀವ್ರವಾಗಿ ಖಂಡಿಸಿ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ. ಇಂತಹ ಹೇಳಿಕೆಯನ್ನು ಯಾರೇ ಕೊಡಲಿ ಗಡಿಪಾರು ಮಾಡಬೇಕು. ಅಮೂಲ್ಯ ಕೂಡ ಇದಕ್ಕೆ ಹೊರತಾಗಿಲ್ಲ. ಹೀಗಾಗಿ ಅವರನ್ನು ಗಡಿಪಾರು ಮಾಡಲಿ ಎಂದಿದ್ದಾರೆ. ದೇಶದ್ರೋಹದ ಹೇಳಿಕೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ದೇಶದ್ರೋಹದ ಅಪರಾಧಕ್ಕೆ ಅತ್ಯಂತ ಕ್ರೂರ ಶಿಕ್ಷೆ ಆಗಬೇಕು ಎಂದಿದ್ದಾರೆ.

ಇನ್ನು ಅಮೂಲ್ಯ ಹಿನ್ನೆಲೆ ಬಗ್ಗೆ ನನಗೆ ಸರಿಯಾಗಿ ಗೊತ್ತಿಲ್ಲ. ಮಾಹಿತಿಯನ್ನು ಪಡೆಯುತ್ತಿದ್ದೇನೆ. ಆದ್ರೆ ಅವಳು ಕೊಟ್ಟಿರುವ ಹೇಳಿಕೆ ಸರಿಯಲ್ಲ. ದೇಶದ ವಿಚಾರದಲ್ಲಿ ಒಗ್ಗಟ್ಟು ಇರಬೇಕು. ಒಗ್ಗಟ್ಟು ಒಡೆಯುವ ಕೆಲಸ ಆಗಬಾರದು. ಮಂಗಳೂರು ಗೋಲಿಬಾರ್ ಪ್ರಕರಣದಲ್ಲಿ ಮೃತರಾದರು ಮತ್ತು ಜೈಲಿಗೆ ಸೇರಿದವರನ್ನು ನಾನು ಅಮಾಯಕರು ಎಂದು ಹೇಳಿದ್ದೇನೆ. ಅದನ್ನು ಕೋರ್ಟ್ ಸಹ ಹೇಳಿದೆ. ಆದರೆ ಇಂತಹ ಘೋಷಣೆ ಕೂಗಿದವರ ವಿರುದ್ಧ ಸರ್ಕಾರ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿ ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ನೆರೆ ಪರಿಹಾರದಲ್ಲಿ ವೈಫಲ್ಯ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯನೆರೆ ಪರಿಹಾರದಲ್ಲಿ ವೈಫಲ್ಯ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ

 Siddaramaiah has demanded that Amulya Leon be sentenced to deportation

ಪ್ರತಿಭಟನೆಗಳನ್ನು ಹತ್ತಿಕ್ಕಲಾಗುತ್ತಿದೆ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಇಂಥ ಘಟನೆಗಳು ನಡೆದಾಗ, ಮತ್ತೊಮ್ಮೆ ಯೋಚಿಸಬೇಕಾದ ಅವಶ್ಯಕತೆ ಇದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡಿದ್ದರು. ಗೃಹಸಚಿವ ಬೊಮ್ಮಾಯಿ ಆರೋಪಕ್ಕೆ ಸಿದ್ದರಾಮಯ್ಯ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.

English summary
Leader of the Opposition Siddaramaiah has demanded that Amulya Leon, who has been declared a traitor, be sentenced to deportation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X