ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೈತ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ಮಾಡಿದರೆ ದೊಡ್ಡ ಬೆಲೆ ತೆರಬೇಕಾಗುತ್ತದೆ:ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು,ಜನವರಿ 26:ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನ ಮಾಡಿದರೆ, ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕಲು ಮುಖ್ಯಮಂತ್ರಿ ಯಡಿಯೂರಪ್ಪ
ಅವರು ತನ್ನ ರೈತ ವಿರೋಧಿ ನಿಲುವಿಗೆ ತಕ್ಕ ಪ್ರತಿಫಲವನ್ನು ಉಣ್ಣಬೇಕಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: ಪೊಲೀಸರ ಮೇಲೆ ಟ್ರ್ಯಾಕ್ಟರ್ ಹತ್ತಿಸಲು ಪ್ರಯತ್ನಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: ಪೊಲೀಸರ ಮೇಲೆ ಟ್ರ್ಯಾಕ್ಟರ್ ಹತ್ತಿಸಲು ಪ್ರಯತ್ನ

ರೈತ ಹೋರಾಟಗಾರರ ಆಕ್ರೋಶ ಸ್ಪೋಟಗೊಳ್ಳಲು ಅವಕಾಶ ನೀಡದೆ ಪ್ರಧಾನಿ ಮೋದಿ ಅವರು ತಕ್ಷಣ ರೈತ ವಿರೋಧಿ ಕಾನೂನುಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸುತ್ತೇನೆ ಎಂದರು.

Siddaramaiah Hits Back To Yediyurappa For Suppressing Farmers Protest

ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಇಂದು ಸಾವಿರಾರು ರೈತರು ಬೆಂಗಳೂರಿಗೆ ಮುತ್ತಿಗೆ ಹಾಕಿದ್ದಾರೆ. ಟ್ರ್ಯಾಕ್ಟರ್​ ರ್ಯಾಲಿ ನಡೆಸಲು ಮುಂದಾಗಿದ್ದು, ಬೆಂಗಳೂರನ್ನು ಪ್ರವೇಶಿಸುವ ಮುನ್ನವೇ ಅನೇಕ ಕಡೆ ಪೊಲೀಸರು ಅವರನ್ನು ತಡೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರತಿಭಟನೆಯನ್ನು ಹತ್ತಿಕ್ಕುವುದು ಪ್ರಜಾಪ್ರಭುತ್ವ ವಿರೋಧಿ ಕೆಲಸ.

ಹೋರಾಟ ಮಾಡುವ ಹಕ್ಕನ್ನು ಕಿತ್ತುಕೊಳ್ಳುವ ಕೆಲಸ ಮಾಡಬಾರದು. ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಮಾಡಿದರೆ ಸರ್ಕಾರ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದಿದ್ದಾರೆ.

ರೈತರ ಪ್ರತಿಭಟನೆ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಪ್ರತಿಕ್ರಿಯೆ ನೀಡಿದ್ದು. ರೈತರ ಹೋರಾಟ ಶಾಂತ ರೀತಿಯಲ್ಲಿ ನಡೆಯುವುದಕ್ಕೆ ನನ್ನ ಅಭ್ಯಂತರ ಏನೂ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟವಾದ ನಿರ್ಧಾರ ತೆಗೆದುಕೊಂಡು ಎರಡು ವರ್ಷಗಳ ನಂತರ ತೀರ್ಮಾನ ಮಾಡುತ್ತೇನೆ ಎಂದು ಹೇಳಿದ್ದಾರೆ.

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನವನ್ನು ನಾವು ಮಾಡಿಲ್ಲ. ಟ್ರ್ಯಾಕ್ಟರ್ ತಂದು ಪ್ರತಿಭಟನೆ ಮಾಡಿದರೆ ಜನರಿಗೆ ತೊಂದರೆ ಆಗುತ್ತದೆ ಎಂಬ ಕಾರಣಕ್ಕೆ ಅದಕ್ಕೆ ಬೇಡ ಎಂದು ಹೇಳಿದ್ದೇವೆ ಎಂದು ಸ್ಪಷ್ಟ ಪಡಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶವಿದೆ. ಸರ್ವಾಧಿಕಾರಕ್ಕೆ ಪ್ರಜಾಪ್ರಭುತ್ವದಲ್ಲಿ ಅವಕಾಶ ಇಲ್ಲ. ಪ್ರತಿಭಟನೆಯನ್ನು ಹತ್ತಿಕ್ಕುವುದು ಪ್ರಜಾಪ್ರಭುತ್ವ ವಿರೋಧಿ ಕೆಲಸ.

ಹೋರಾಟ ಮಾಡುವ ಹಕ್ಕನ್ನು ಕಿತ್ತುಕೊಳ್ಳುವ ಕೆಲಸ ಮಾಡಬಾರದು. ರೈತರು ನಮ್ಮ ಬೆನ್ನೆಲುಬು. ಅವರನ್ನು ತಡೆದಿದ್ದಕ್ಕೆ ತಕ್ಕ ಉತ್ತರವನ್ನು ದೇಶದ ಜನರೇ ಕೊಡುತ್ತಾರೆ. ರೈತರ ಪ್ರತಿಭಟನೆಯನ್ನು ಹತ್ತಿಕ್ಕುವುದನ್ನು ನಾನು ಖಂಡಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Recommended Video

ಬೆಂಗಳೂರು: ನೆಲಮಂಗಲದಲ್ಲಿ ಅನ್ನದಾತರ ಬೃಹತ್ ಪ್ರೊಟೆಸ್ಟ್..! | Oneindia Kannada

English summary
Opposition Leader Siddaramaiah hits back to Karnataka Chief Minister BS Yediyurappa For suppressing Farmers Protest In Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X