ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸದಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುವೆ: ಶಾಸಕ
ಕೋಲಾರ ಕ್ಷೇತ್ರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸ್ಪರ್ಧಿಸಿದರೆ ನಾನು ಅವರ ಪರ ಶ್ರಮಿಸುತ್ತೇನೆ. ಅವರು ಸ್ಪರ್ಧಿಸದಿದ್ದರೆ ನಾನು ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಶಾಸಕರೊಬ್ಬರು ತಿಳಿಸಿದ್ದಾರೆ.
ಬೆಂಗಳೂರು, ಮಾರ್ಚ್ 20: ಈ ಮೊದಲೇ ಹೇಳಿದಂತೆ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸ್ಪರ್ಧಿಸಿದರೆ ನಾನು ಅವರ ಗೆಲುವಿಗೆ ಶ್ರಮಿಸುತ್ತೇನೆ. ಒಂದು ವೇಳೆ ಅವರು ಕೋಲಾರದಿಂದ ಸ್ಪರ್ಧಿಸದಿದ್ದರೆ ನಾನು ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಶಾಸಕ ಕೆ.ಶ್ರೀನಿವಾಸಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕ ರಾಜ್ಯಕ್ಕೆ ಮೊದಲನೇ ಮುಖ್ಯಮಂತ್ರಿ ನೀಡಿದ ಜಿಲ್ಲೆ ಕೋಲಾರ. ಇದೀಗ ಮತ್ತೊಬ್ಬರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಇಲ್ಲಿಂದಲೇ ಕಳುಹಿಸಬೇಕು ಎಂಬ ಮದಹಾಸೆ ನಮ್ಮದು ಎಂದು ಅವರು ತಿಳಿಸಿದರು.

ಕಾಂಗ್ರೆಸ್ ಹೈಕಮಾಂಡ್ ಕೋಲಾರದಿಂದ ಸ್ಪಧಿಸುವುದು ಬೇಡ ಎಂದರೆ ಸಿದ್ದರಾಮಯ್ಯನವರು ಏನು ಮಾಡುತ್ತಾರೆ?. ಕೋಲಾರ ವಿಧಾನಸಭಾ ಕ್ಷೇತ್ರದಿಂದ ಅವರು ಕಣಕ್ಕಿಳಿದಿದ್ದರೆ ಗೆಲುವು ಅವರಿಗೆ ಖಚಿತವಾಗಿತ್ತು. ಅವರು ಇಲ್ಲಿಂದಲೇ ಸ್ಪರ್ಧಿಸಲಿ ಎಂಬ ವಿಶ್ವಾಸ ಇನ್ನೂ ನನ್ನಲ್ಲಿದೆ. ಆದರೆ ಕೋಲಾರದಿಂದ ನಾನು ಮಾತ್ರ ಸ್ಪರ್ಧೆ ಮಾಡುವುದಿಲ್ಲ ಎಂದು ಈ ವೇಳೆ ಶಾಸಕರು ಸ್ಪಷ್ಟಪಡಿಸಿದರು.
ಸಿದ್ದು ಕೋಲಾರ ಕ್ಷೇತ್ರ ಭೇಟಿ ದಿಢೀರ್ ಮುಂದೂಡಿಕೆ
ಇನ್ನೂ ಈಗಾಗಲೇ ಚುನಾವಣೆ ವೇಳೆ ಕಣ್ಣಕ್ಕಿಳಿಯುತ್ತೇನೆ ಎಂದು ಹೇಳಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕೋಲಾರ ಭೇಟಿಯನ್ನು ಏಕಾಎಕಿ ಮುಂದೂಡಿದ್ದಾರೆ. ಕೋಲಾರ ಕ್ಷೇತ್ರದ ಗ್ರಾಮಾಂತರ ಪ್ರದೇಶದಲ್ಲಿ ಮಾರ್ಚ್ 19ರಂದು, ನಗರ ಪ್ರದೇಶದಲ್ಲಿ ಮಾರ್ಚ್ 21ರಂದು ಪ್ರಚಾರ ಹಾಗೂ ಸಾರ್ವಜನಿಕ ಸಭೆ ನಡೆಸಲು ವೇಳಾಪಟ್ಟಿ ನಿಗದಿ ಮಾಡಲಾಗಿತ್ತು.
ಸಿದ್ದರಾಮಯ್ಯರ ಕೋಲಾರ ಪ್ರವಾಸ ಕುರಿತು ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಶಾಸಕ ಕೆ.ಶ್ರೀನಿವಾಸಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಎಲ್.ಅನಿಲ್ ಕುಮಾರ್ ಹಾಗೂ ನಸೀರ್ ಅಹಮದ್ ಪೂರ್ವಭಾವಿ ಪೂರ್ವಭಾವಿಸಭೆ ನಡೆಸಿದ್ದರು. ಆದರೆ ಸಿದ್ದರಾಮಯ್ಯ ಅವರ ಕೋಲಾರ ಕ್ಷೇತ್ರ ಭೇಟಿ ದಿಢೀರ್ ಮುಂದೂಡಿದೆ. ಕಾರಣಗಳು ಏನೆಂಬುದು ತಿಳಿದು ಬಂದಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಿನಾರಾಯಣ ಹೇಳಿದರು.

ಕೋಲಾರ ಸ್ಪರ್ಧೆಯಿಂದ ಹಿಂದೆ ಸರಿದ ಸಿದ್ದರಾಮಯ್ಯ
ಪ್ರಸಕ್ತ ಚುನಾವಣೆ ವೇಳೆ ಕೋಲಾರ ವಿಧಾನಸಭಾ ಚುನಾವಣೆಯಿಂದ ಸಿದ್ದರಾಮಯ್ಯನವರು ಸ್ಪರ್ಧಿಸುವುದಾಗಿ ಮೊದಲು ಘೋಷಿಸಿದ್ದರು. ಆದರೆ ಸಮೀಕ್ಷೆ ಯೊಂದರ ಅಧ್ಯಯನದ ಬಳಿಕ ಕೋಲಾರದಲ್ಲಿ ಗೆಲುವ ಕಷ್ಟ ಎನ್ನಲಾಗಿದೆ. ಹೀಗಾಗಿ ಇಲ್ಲಿ ನಿಮ್ಮ ಸ್ಪರ್ಧೆ ಬೇಡ ಎಂದು ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯನವರಿಗೆ ಸಲಹೆ ನೀಡಿದ್ದಾರೆ.
ಇದೇ ಕಾರಣಕ್ಕೆ ಅವರು ಕೋಲಾರದಿಂದ ಸ್ಪರ್ಧಿಸುವುದಾಗಿ ಹೇಳಿದ್ದ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಅವರು ವರುಣ ಕ್ಷೇತ್ರದಿಂದಲೇ ಈ ಭಾರಿ ಸ್ಪರ್ಧಿಸುವ ಬಯಕೆ ಹೊಂದಿದ್ದಾರೆ ಎನ್ನಲಾಗಿದ್ದು, ಸದ್ಯ ಸಿದ್ದರಾಮಯ್ಯನವರಿಗೆ ಎಲ್ಲಿಂದ ಸ್ಪರ್ಧೆ ಮಾಡಬೇಕು ಎಂಬುದೇ ತಿಳಿಯದಂತಾಗಿದೆ.
ಕೋಲಾರ: ಬೇರೊಬ್ಬ ನಾಯಕನಿಗೆ ಡಿಕೆಶಿ ಗಾಳ
ಇತ್ತ ಅವರ 2018ರ ವಿಧಾನಸಭಾ ಕ್ಷೇತ್ರ ಬಾದಾಮಿಯಿಂದಲೇ ಸ್ಪರ್ಧಿಸುವಂತೆ ಅವರ ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರು ಕೋಲಾರ ಸ್ಪರ್ಧೆ ನಿರ್ಧಾರ ಹಿಂಪಡೆದಿದ್ದಾರೆ ಎನ್ನುತ್ತಿದ್ದಂತೆ ಹಲವು ರಾಜಕೀಯ ಬೆಳವಣಿಗೆಗಳು ನಡೆದಿವೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಸಿದ್ದರಾಮಯ್ಯನವರು ಕೋಲಾರದಿಂದ ಸ್ಪರ್ಧಿಸುತ್ತಿಲ್ಲ ಎಂಬದು ತಿಳಿಯುತ್ತಿದ್ದಂತೆ ಬೇರೆ ಪ್ರಭಾವಿ ನಾಯಕರಿಗೆ ಅದರಲ್ಲೂ ಒಕ್ಕಲಿಗೆ ಸಮುದಾಯದ ನಾಯಕರೊಬ್ಬರಿಗೆ ಗಾಳ ಹಾಕಿದ್ದಾರೆ. ಬ್ಯಾಲಹಳ್ಳಿ ಗೋವಿಂದಗೌಡರ ಜೊತೆ ಡಿಕೆ ಶಿವಕುಮಾರ್ ಚರ್ಚಿಸಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಹಿರಂಗಗೊಂಡಿಲ್ಲ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications