ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪರಿವಾರ, ತಳವಾರ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ: ಸಿದ್ಧರಾಮಯ್ಯ

|
Google Oneindia Kannada News

ಬೆಂಗಳೂರು, ಮೇ 26: ಪರಿವಾರ ಮತ್ತು ತಳವಾರ ಸಮುದಾಯಗಳನ್ನು ತಕ್ಷಣ ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸಿದ್ಧರಾಮಯ್ಯ ಬರೆದುಕೊಂಡಿದ್ದಾರೆ.

''ಪರಿವಾರ ಮತ್ತು ತಳವಾರ ಸಮುದಾಯಗಳನ್ನು ತಕ್ಷಣ ಪರಿಶಿಷ್ಟ ಪಂಗಡಕ್ಕೆ ಸೇರಿಸಿ. ರಾಜ್ಯ ಪತ್ರ ಹೊರಡಿಸುವ ಮೂಲಕ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಪಂಗಡದ ಮೀಸಲು ಸೌಲಭ್ಯ ಪಡೆಯಲು ಅವಕಾಶ ಮಾಡಿಕೊಡ ಬೇಕೆಂದು ಮುಖ್ಯಮಂತ್ರಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಗೋವಿಂದ ಕಾರಜೋಳ ಅವರನ್ನು ಆಗ್ರಹಿಸುತ್ತೇನೆ.'' ಎಂದು ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.

 Siddaramaiah Insisted State Government To Inclusion Talawara and Parivara Communities To Scheduled Tribes

ಪರಿಶಿಷ್ಟ ಪಂಗಡಕ್ಕೆ ಸಿದ್ದಿ, ತಳವಾರ, ಪರಿವಾರ ಸೇರ್ಪಡೆ: ದಶಕಗಳ ಬೇಡಿಕೆ ಕೊನೆಗೂ ಸಾಕಾರ ಪರಿಶಿಷ್ಟ ಪಂಗಡಕ್ಕೆ ಸಿದ್ದಿ, ತಳವಾರ, ಪರಿವಾರ ಸೇರ್ಪಡೆ: ದಶಕಗಳ ಬೇಡಿಕೆ ಕೊನೆಗೂ ಸಾಕಾರ

ನಾನು ಮುಖ್ಯಮಂತ್ರಿಯಾಗಿದ್ದಾಗ ತಳವಾರ/ಪರಿವಾರ ಸಮುದಾಯದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೆ. 6 ವರ್ಷಗಳ ನಂತರ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿತ್ತು. ಈಗ ಅದನ್ನು ಜಾರಿಗೊಳಿಸಲು ಕರ್ನಾಟಕ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಸಿದ್ಧರಾಮಯ್ಯ ಬರೆದುಕೊಂಡಿದ್ದಾರೆ.

ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ತಳವಾರ ಹಾಗೂ ಪರಿವಾರ ಸಮುದಾಯದ ಬೇಡಿಕೆ ಇಟ್ಟಿತ್ತು. ತಮ್ಮನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಮನವಿ ಮಾಡಿತ್ತು. ಅದರಂತೆ, ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಂಡಿತ್ತು.

ಸಚಿವ ಸಂಪುಟದ ತೀರ್ಮಾನ ನಂತರ ಕೇಂದ್ರಕ್ಕೆ ಪತ್ರ ಬರೆದಿದ್ದು, ಅಲ್ಲಿಂದ ಆರು ವರ್ಷಗಳ ನಂತರ ಒಪ್ಪಿಗೆ ಸಿಕ್ಕಿದೆ. ಆದರೆ, ರಾಜ್ಯ ಸರ್ಕಾರ ಅದನ್ನು ಕಾರ್ಯ ರೂಪಕ್ಕೆ ತರಲು ತಡ ಮಾಡುತ್ತಿದೆ ಎಂದು ಸಿದ್ಧರಾಮಯ್ಯ ಆರೋಪ ಮಾಡಿದ್ದಾರೆ.

English summary
Opposition party leader Siddaramaiah insisted state government to inclusion Talawara and Parivara communities to scheduled tribes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X