ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಾದಾಮಿ, ಐಹೊಳೆ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಿದ್ದರಾಮಯ್ಯ ಸೂಚನೆ

By Nayana
|
Google Oneindia Kannada News

Recommended Video

ಬಾದಾಮಿ, ಐಹೊಳೆ ಹಾಗು ಪಟ್ಟದಕಲ್ಲು ಪ್ರವಾಸಿ ತಾಣಗಳನ್ನ ಅಭಿವೃದ್ಧಿ ಪಡಿಸಲು ಹೋರಾಟ ಸಿದ್ದು | Oneindia Kananda

ಬೆಂಗಳೂರು, ಜು.7: ಐತಿಹಾಸಿಕ ಪ್ರವಾಸಿ ತಾಣಗಳಾದ ಬಾದಾಮಿ, ಪಟ್ಟದಕಲ್ಲು ಹಾಗೂ ಐಹೊಳೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಯೋಜನೆ ಸಿದ್ಧಪಡಿಸಲು ಮಾಜಿ ಮುಖ್ಯಮಂತ್ರಿ, ಬಾದಾಮಿ ಶಾಸಕ ಸಿದ್ದರಾಮಯ್ಯ ಅವರು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಾದಾಮಿ, ಐಹೊಳೆ, ಪಟ್ಟದಕಲ್ಲು ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲೊಂದಾಗಿದೆ. ದಿನಿತ್ಯ ನೂರಾರು ಪ್ರವಾಸಿಗರು ಭೇಟಿ ನೀಡುತ್ತಿರುತ್ತಾರೆ, ಆದರೆ ಅಲ್ಲಿನ ಮೂಲಭೂತ ಸೌಕರ್ಯ ಕೊರತೆ ಎದ್ದು ಕಾಣುತ್ತಿದೆ. ಹಾಗಿ ಇಂತಹ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸುವ ಕುರಿತು ಯೋಜನೆ ರೂಪಿಸಬೇಕಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನವಿಲು ತೀರ್ಥದಿಂದ ಬಾದಾಮಿಗೆ ನೀರು ಕೇಳಿದ ಸಿದ್ದರಾಮಯ್ಯ ನವಿಲು ತೀರ್ಥದಿಂದ ಬಾದಾಮಿಗೆ ನೀರು ಕೇಳಿದ ಸಿದ್ದರಾಮಯ್ಯ

ರಸ್ತೆ ಸಂಪರ್ಕ ಸೇರಿದಂತೆ ಪ್ರವಾಸಿಗರಿಗೆ ಸೂಕ್ತ ಸೌಲಭ್ಯ ಒದಗಿಸಲು ಯೋಜನೆ ಸಿದ್ಧಪಡಿಸುವಂತೆಯೂ ತಿಳಿಸಿದ್ದಾರೆ. ಈ ಸಂಬಂಧ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದ್ದಾರೆ.

Siddaramaiah insists planning for infrastructure in Badami surrounding historical places

ಸ್ಷಕ್ಷೇತ್ರ ಬಾದಾಮಿ, ಪಟ್ಟದಕಲ್ಲು ಹಾಗೂ ಐಹೊಳೆಗೆ ದೇಶ, ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಅವರಿಗೆ ಮೂಲಭೂತ ಸೌಕರ್ಯ ಒದಗಿಸುವ ಅಗತ್ಯವಿದೆ. ಮೂರೂ ಸ್ಥಳಗಳಿಗೆ ರಸ್ತೆ ಸಂಪರ್ಕ, ಮಾಹಿತಿ ಕೇಂದ್ರಗಳ ಸ್ಥಾಪನೆ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒಳಗೊಂಡಂತೆ ಯೋಜನೆ ರೂಪಿಸಲು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

English summary
Former chief minister Siddaramaiah has given instructions to officials to prepare detailed project report on infrastructure development of historical places like Badami, Pattadakalli. Aihole which located Badami constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X