ಸಿದ್ದರಾಮಯ್ಯ ವಿರುದ್ಧ ಮತ್ತೊಮ್ಮೆ ಗುಡುಗಿದ ದೇವೇಗೌಡ

Recommended Video

      ಸಿದ್ದರಾಮಯ್ಯ ವಿರುದ್ಧ ಮತ್ತೊಮ್ಮೆ ಗುಡುಗಿದ ದೇವೇಗೌಡ | Oneindia Kannada

      ಬೆಂಗಳೂರು, ಆಗಸ್ಟ್ 22: ಸಮ್ಮಿಶ್ರ ಸರ್ಕಾರ ಪತನವಾಗಲು ಸಿದ್ದರಾಮಯ್ಯ ಅವರೇ ನೇರ ಕಾರಣ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಮತ್ತೊಮ್ಮೆ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ್ದಾರೆ.

      ಮೈತ್ರಿ ಸರ್ಕಾರ ಬೀಳಲು ಸಿದ್ದರಾಮಯ್ಯ ಅವರೇ ಕಾರಣ ಎಂದು ಈ ಹಿಂದೆಯೂ ದೇವೇಗೌಡರು ಹೇಳಿದ್ದಾರೆ. ಮೈತ್ರಿ ಸರ್ಕಾರ ಇರುವವರೆಗೂ ಸಿದ್ದರಾಮಯ್ಯ ಹಾಗೂ ದೇವೇಗೌಡರು ಒಂದೇ ವೇದಿಕೆಯನ್ನು ಹಂಚಿಕೊಳ್ಳುತ್ತಿದ್ದರು.

      ಮೈತ್ರಿ ಸರ್ಕಾರ ಬಿದ್ದ ಬಳಿಕ ಈಗ ಏಕಾಏಕಿ ಸಿದ್ದರಾಮಯ್ಯ ಅವರನ್ನು ದೋಷಿಯನ್ನಾಗಿ ಮಾಡುತ್ತಿದ್ದಾರೆ. ಸರ್ಕಾರ ಬೀಳಿಸಲು ಸಿದ್ದರಾಮಯ್ಯ ಅವರೇ ತಿಳಿಸಿದ್ದು ಎಂದು ಅವರ ಆಪ್ತರೇ ಹೇಳಿದ್ದಾರೆ ಎಂದು ದೇವೇಗೌಡರು ಹೇಳಿದ್ದಾರೆ.

      Siddaramaiah Is Reason For The Collapse Of The Coalition Government

      ನಮಗೆ ಮುಖ್ಯಮಂತ್ರಿ ಸ್ಥಾನ ಬೇಕು ಎಂದು ಎಂದು ಯಾರನ್ನೂ ಕೇಳಿಲ್ಲ, ಅವರೇ ಬಂದು ನಿಮ್ಮ ಮಗ ಮುಖ್ಯಮಂತ್ರಿಯಾಗಲಿ ಎಂದು ಒತ್ತಡ ಹಾಕಿದ್ದರು ನಾವು ಒಪ್ಪಿಕೊಂಡಿದ್ದೆವು.

      ನಮಗೆ ಸೇರಿದ್ದ ಒಂದು ಮಂತ್ರಿ ಖಾತೆಯನ್ನೂ ಅವರಿಗೆ ಬಿಟ್ಟು ಕೊಟ್ಟಿದ್ದೆವು. ಅಷ್ಟಾದರೂ ಅವರ ಸ್ನೇಹಿತರು ಹೊರಟು ಹೋಗುತ್ತಾರೆ. ಸರ್ಕಾರವನ್ನು ತೆಗೆಯಬೇಕು ಎಂದು ಇವರೇ ಹೇಳಿದ್ದರು ಅಂತ ಅವರ ಸ್ನೇಹಿತರೇ ಹೇಳಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

      ಪಿ ಚಿದಂಬರಂ ಬಗ್ಗೆ ಮಾತನಾಡಿದ ಅವರು, ತಮಗೆ ಈ ಪ್ರಕರಣದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ, ನಮ್ಮ ವ್ಯವಸ್ಥೆ ವಿಪರೀತ ಹಂತಕ್ಕೆ ಹೋಗಿದೆ ಎನಿಸುತ್ತದೆ ಎಂದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+