ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಖ್ಯಮಂತ್ರಿ ಬದಲಾವಣೆ ಕುರಿತ ಹೇಳಿಕೆ: ಸಿದ್ದರಾಮಯ್ಯ ಹೇಳಿದ್ದೇನು?

|
Google Oneindia Kannada News

Recommended Video

ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನಗೊಂಡ ಸಿದ್ದರಾಮಯ್ಯ

ಬೆಂಗಳೂರು, ಮೇ 8: ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿಯಾಗಬೇಕು ಎನ್ನುವ ಕಾಂಗ್ರೆಸ್ ಶಾಸಕರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಮುರಿದಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು, ಶಾಸಕರು ನನ್ನ ಮೇಲಿಟ್ಟಿರುವ ವಿಶ್ವಾಸದಿಂದ ಈ ರೀತಿ ಹೇಳಿದ್ದಾರೆಯೇ ವಿನಃ, ಮೈತ್ರಿ ಮುರಿಯುವ ಅಥವಾ ಇನ್ಯಾವುದೇ ದುರುದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯ ಮತ್ತೆ ಸಿಎಂ ಆಗೋದನ್ನು ಕಾಯ್ತಿದ್ದೇನೆ: ಎಂಬಿ ಪಾಟೀಲ್ ಸಿದ್ದರಾಮಯ್ಯ ಮತ್ತೆ ಸಿಎಂ ಆಗೋದನ್ನು ಕಾಯ್ತಿದ್ದೇನೆ: ಎಂಬಿ ಪಾಟೀಲ್

ಕಾಂಗ್ರೆಸ್ ಕಾರ್ಯಕರ್ತರಿಗೆ ನನ್ನ ಮೇಲೆ ಅಪಾರ ಪ್ರೀತಿ, ಗೌರವವಿದೆ ಹೀಗಾಗಿ ನಾನು ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಬಯಸಿದ್ದಾರೆ. ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ವಿಚಾರ ಇಲ್ಲವೇ ಇಲ್ಲ, ಕಾರ್ಯಕರ್ತರ ಹೇಳಿಕೆಯಿಂದ ನನಗೂ ನೋವಾಗಿದೆ. ಆದರೆ ಅವರ ಹೇಳಿಕೆಯ ಹಿಂದೆ ಬೇರೆಯೇ ಅರ್ಥವಿದೆ ಎಂದರು.

ಸಿದ್ದರಾಮಯ್ಯ ಮತ್ತೆ ಸಿಎಂ ಆದರೆ ತಪ್ಪೇನಿದೆ?

ಸಿದ್ದರಾಮಯ್ಯ ಮತ್ತೆ ಸಿಎಂ ಆದರೆ ತಪ್ಪೇನಿದೆ?

ಸಿದ್ದರಾಮಯ್ಯ ಎರಡನೇ ಅವಧಿಗೆ ಮತ್ತೆ ಮುಖ್ಯಮಂತ್ರಿಯಾದರೆ ತಪ್ಪೇನಿದೆ. ಅವರಿಗೆ ಆ ಅರ್ಹತೆ ಇದೆ ಎಂದು ಸಚಿವ ಎಂಬಿ ಪಾಟೀಲ್ ಇತ್ತೀಚೆಗೆ ಹೇಳಿಕೆ ನೀಡಿದ್ದರು.

ಸಿದ್ದರಾಮಯ್ಯ ಸಿಎಂ ಆದರೆ ನಮ್ಮ ಬೆಂಬಲ

ಸಿದ್ದರಾಮಯ್ಯ ಸಿಎಂ ಆದರೆ ನಮ್ಮ ಬೆಂಬಲ

ಸಿದ್ದರಾಮಯ್ಯ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡುವ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ ನಮ್ಮ ಬೆಂಬಲ ಅವರಿಗಿದೆ ಎಂದು ಶಾಸಕ ಸುಧಾಕರ್ ಕೂಡ ಇತ್ತೀಚೆಗೆ ಹೇಳಿಕೆ ನೀಡಿದ್ದರು.ದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮಾಡಿದ ಕೆಲಸಗಳು ಅವರ ಪರವಾಗಿವೆ. ಆದರೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರಬೇಕು. ಆಗ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಲಿ ಎಂದು ಹೇಳಿದ್ದರು.

'ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿ!' ಬಿಸಿತುಪ್ಪವಾದ ಅತೃಪ್ತರ ನಡೆ 'ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿ!' ಬಿಸಿತುಪ್ಪವಾದ ಅತೃಪ್ತರ ನಡೆ

ಕಾರ್ಯಕರ್ತರ ಹೇಳಿಕೆಯನ್ನು ಅನ್ಯತಾ ಭಾವಿಸಬೇಡಿ

ಕಾರ್ಯಕರ್ತರ ಹೇಳಿಕೆಯನ್ನು ಅನ್ಯತಾ ಭಾವಿಸಬೇಡಿ

ಕಾಂಗ್ರೆಸ್ ಕಾರ್ಯಕರ್ತರಿಗೆ ನನ್ನ ಮೇಲೆ ವಿಶ್ವಾಸ ಹೆಚ್ಚಿದೆ ಹಾಗಾಗಿ ನಾನೇ ಮುಖ್ಯಮಂತ್ರಿಯಾಗಬೇಕು ಎನ್ನುವ ಕುರಿತು ಹೇಳಿಕೆ ನೀಡಿದ್ದಾರೆ. ಆದರೆ ಅವರ ಮಾತಿನ ಹಿಂದೆ ದುರುದ್ದೇಶವಿಲ್ಲ, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕೂಡ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅದರ ಬಗ್ಗೆ ಎರಡು ಮಾತಿಲ್ಲ ಎಂದು ಹೇಳಿದರು.

ನಾನೂ ಕೂಡ ಸಿಎಂ ಅಭ್ಯರ್ಥಿ ಎಂದ ಎಂಬಿ ಪಟಾಲ್

ನಾನೂ ಕೂಡ ಸಿಎಂ ಅಭ್ಯರ್ಥಿ ಎಂದ ಎಂಬಿ ಪಟಾಲ್

ನಾನೂ ಕೂಡ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ. ಆದರೆ, ಮತ್ತೊಮ್ಮ ಮುಖ್ಯಮಂತ್ರಿ ಆಗುವ ಅರ್ಹತೆ ಸಿದ್ದರಾಮಯ್ಯ ಅವರಿಗೆ ಇದೆ. ಅವರು ಸಿಎಂ ಆಗುತ್ತಾರೆ ಎಂದರೆ ನಾನು ಕಾಯುತ್ತೇನೆ. ಈಗಿನ ಪರಿಸ್ಥಿತಿಯಲ್ಲಿ ಸಮನ್ವಯ ಸಮಿತಿಯ ಪರಿಣಾಮಕಾರಿ ಕಾರ್ಯನಿರ್ವಹಣೆ ಅತಿ ಮುಖ್ಯವಾಗಿದೆ. ಸಿದ್ದರಾಮಯ್ಯ ಅವರು ಅದರೆಡೆಗೆ ಗಮನ ಹರಿಸಬೇಕಿದೆ ಎಂದರು.

English summary
Former CM siddaramaiah reacts on Congress MLAs demand for changing the CM of Karnataka, says HD Kumaraswamy is doing a good job. He further defends Congress MLAs, says they are making such statements out of affection.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X