ಸಿದ್ದರಾಮಯ್ಯ ಸುಳ್ಳಿನ ಮೂಲಕ ರಾಜಕೀಯ ಬೇಳೆ ಬೇಯಿಸುತ್ತಿದ್ದಾರೆ ಎಂದ ಎಚ್‌ಡಿಕೆ

ಬೆಂಗಳೂರು ಜನವರಿ 3: ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಇತ್ತೀಚೆಗೆ ಟೀಕಾಪ್ರಹಾರ ಜೋರಾಗಿದೆ. ಸತ್ಯಕ್ಕೆ ಸಮಾಧಿ ಕಟ್ಟಿ ಸುಳ್ಳಿನಯಾತ್ರೆಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ದೂರಿದ್ದಾರೆ. ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮಿಸ್ಟರ್ ಸುಳ್ಳಯ್ಯ ಎಂದು ಕುಮಾರಸ್ವಾಮಿ ಸೋಮವಾರ ಟ್ವೀಟ್ ಮಾಡಿದ್ದಾರೆ. ಮಾಜಿ ಸಿಎಂ, ಹಾಲಿ ಪ್ರತಿಪಕ್ಷ ನಾಯಕರ ನಾಲಿಗೆ ಮೇಲೆ ರಾಜ್ಯ ನೀರಾವರಿ ಬಗ್ಗೆ ಸೃಷ್ಟಿ ಆಗುತ್ತಿರುವ ʼಸುಳ್ಳಿನ ಸರಮಾಲೆʼಯು ಜನತೆಗೆ ಯಾಮಾರಿಸಿ ಬೇಳೆ ಬೇಯಿಸಿಕೊಳ್ಳುತ್ತಿರುವ ʼರಾಜಕೀಯ ಹುಂಬತನʼವಲ್ಲದೆ ಮತ್ತೇನೂ ಅಲ್ಲ. ಸತ್ಯಕ್ಕೆ ಸಮಾಧಿ ಕಟ್ಟಿ ʼಸುಳ್ಳಿನಯಾತ್ರೆʼಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ.

ʼಸುಳ್ಳು ಹೇಳಿದ ಸುಳ್ಳಯ್ಯ'

1989ರಲ್ಲಿ ತಮಿಳುನಾಡು ಒತ್ತಡಕ್ಕೆ ಮಣಿದು ವಿ.ಪಿ.ಸಿಂಗ್ ಸರಕಾರ ಕಾವೇರಿ ಟ್ರಿಬ್ಯೂನಲ್ ರಚಿಸಿತ್ತು. ಆಗ ವೀರೇಂದ್ರ ಪಾಟೀಲ್ ಸಿಎಂ ಆಗಿದ್ದರೆ, ಪುಟ್ಟಸ್ವಾಮಿ ಗೌಡರು ನೀರಾವರಿ ಮಂತ್ರಿ. ಈ ಟ್ರಿಬ್ಯೂನಲ್ ಬೇಡವೇ ಬೇಡ ಎಂದು ದನಿಯೆತ್ತಿದ ಏಕೈಕ ನಾಯಕರು ದೇವೇಗೌಡರು ಮಾತ್ರ. ಆದರೆ, ಅವರ ಮಾತನ್ನು ಯಾರೂ ಕೇಳಲಿಲ್ಲ. ಈಗ ʼಮಿ.ಸುಳ್ಳಯ್ಯʼ ಹೊಸ ಕಥೆ, ಚಿತ್ರಕಥೆ ಬರೆದಿದ್ದಾರೆ. 1968ರಲ್ಲೇ ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಪ್ರಯತ್ನಿಸಿತ್ತಂತೆ ಎಂದು ಹೇಳಿದ್ದಾರೆ. 2017ರಲ್ಲೇ ಕಾಂಗ್ರೆಸ್ ಸರಕಾರ DPR ಸಿದ್ಧಪಡಿಸಿ 5,912 ಕೋಟಿ ರೂ. ಯೋಜನಾ ವೆಚ್ಚ ನಿಗದಿ ಮಾಡಿತ್ತು. ಸಮ್ಮಿಶ್ರ ಸರಕಾರದಲ್ಲಿ ಜಲ ಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಮತ್ತೆ 9,000 ಕೋಟಿ ರೂ. ಮೊತ್ತದ ವಿಸ್ತೃತ DPR ಸಿದ್ಧಪಡಿಸಿ ಕೇಂದ್ರಕ್ಕೆ ಕಳುಹಿಸಿದ್ದರಂತೆ.

Siddaramaiah lied Kumaraswamys criticism

ʼಸಿದ್ದ ಸುಳ್ಳುಶೂರʼ

ಅಬ್ಬಾ.. ʼಸಿದ್ದ ಸುಳ್ಳುಶೂರ' ಸುಳ್ಳು ಸೃಷ್ಟಿಗೊಂದು ಆಸ್ಕರ್ ಇರಬೇಕಿತ್ತು. ಮೇಕೆದಾಟು ಸಮಗ್ರ ಯೋಜನಾ ವರದಿ-DPR ಸಿದ್ಧವಾಗಿ ಕೇಂದ್ರಕ್ಕೆ ಸಲ್ಲಿಕೆ ಆಗಿದ್ದು 2018ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗಲೇ. ಇದರಲ್ಲಿ ಡಿಕೆಶಿ ಪಾತ್ರವೇನೂ ಇರಲಿಲ್ಲ. ಈ ಸತ್ಯವನ್ನು ʼಸಿದ್ದಹಸ್ತರುʼ ಮುಚ್ಚಿಟ್ಟ ಪರಮಾರ್ಥವೇನು? ಎಂದು ಟೀಕಾಪ್ರಹಾರ ಮಾಡಿದ್ದಾರೆ.

ನನ್ನ ಸಂಪುಟದಲ್ಲಿ ಜಲಸಂಪನ್ಮೂಲ ಮಂತ್ರಿಯಾಗಿದ್ದವರು ಮೇಕೆದಾಟು ವಿಚಾರದಲ್ಲಿ ನಾನು ಮತ್ತು ನನ್ನ ಸಂಪುಟ ಸಹೋದ್ಯೋಗಿ ಹೆಚ್.ಡಿ.ರೇವಣ್ಣ ಅವರು ಆಗಿನ ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದಾಗ ಎಲ್ಲಿದ್ದರು? ಜನರಿಗೆ ತಿಳಿಯಬೇಕಲ್ಲವೆ? ನನ್ನ ಮನವಿ ಮೇರೆಗೆ ಅಂದು ಗಡ್ಕರಿ ಅವರು ತಕ್ಷಣವೇ DPR ಸಿದ್ಧಪಡಿಸಿ ಕಳಿಸಿ ಎಂದು ಹೇಳಿದ್ದರು. ಆ ಸಭೆಗೆ ಡಿ.ಕೆ.ಶಿವಕುಮಾರ್ ಬರಲೇ ಇಲ್ಲ. ಅಂದು ನಾನು ದೆಹಲಿಯಲ್ಲಿ ಮಾಧ್ಯಮಗಳ ಜತೆ ಮೇಕೆದಾಟು ಯೋಜನೆ ಬಗ್ಗೆ ಹಾಗೂ ಗಡ್ಕರಿ ಅವರ ಜತೆಗಿನ ಚರ್ಚೆಯ ವಿವರಗಳ ಕುರಿತು ಮಾತನಾಡಿದ್ದೆ ಎಂದಿದ್ದಾರೆ.

'ಕ್ಷಣಕ್ಕೊಂದು ಬಣ್ಣ ಬದಲು'

ಕ್ಷಣಕ್ಕೊಂದು ಬಣ್ಣ ಬದಲಿಸುವ ಇವರ ನಿಜಬಣ್ಣ ಪಿ.ವಿ.ನರಸಿಂಹರಾವ್ ಪ್ರಧಾನಿ ಆಗಿದ್ದಾಗಲೇ ಕನ್ನಡಿಗರಿಗೆ ಅರಿವಾಗಿತ್ತು. ಬೆಂಗಳೂರಿಗೆ ಕಾವೇರಿ 4ನೇ ಹಂತದಲ್ಲಿ ನ್ಯಾಯಸಮ್ಮತವಾಗಿ ದಕ್ಕಬೇಕಿದ್ದ 9 ಟಿಎಂಸಿ ನೀರನ್ನು ತಮಿಳುನಾಡು ಒತ್ತಡಕ್ಕೆ ಮಣಿದು ಸಾರಾಸಗಟಾಗಿ ನಿರಾಕರಿಸಿತ್ತು ಇದೇ ಕಾಂಗ್ರೆಸ್! ಹೋಗಲಿ, ಆ 9 ಟಿಎಂಸಿ ನೀರು ಬೆಂಗಳೂರಿಗೆ ತಂದವರು ಯಾರು? ಅದೇ ʼಸುಳ್ಳಯ್ಯʼನನ್ನು ವಿತ್ತಮಂತ್ರಿ, ಡಿಸಿಎಂ ಮಾಡಿದ ದೇವೇಗೌಡರೇ. ಬೆನ್ನಿಗಿರಿದು ಹೋದವರ ನಾಲಿಗೆಯ ಮೇಲೆ ಸತ್ಯಕ್ಕೆ ತಾವಿದೆಯೇ? ಸಾಧಿಸಿ ತೋರಿದ್ದನ್ನು ಹೇಳಿಕೊಳ್ಳದ ಆ ಹಿರಿಯ ಜೀವದ ತ್ಯಾಗವನ್ನೂ ʼಹೈಜಾಕ್ʼ ಮಾಡುವ ಹುನ್ನಾರಷ್ಟೇ ಇದು. 2013ರಲ್ಲಿ ಇದೇ 'ಸಿದ್ದಹಸ್ತರು' ಸಿಎಂ ಆದ ಮೇಲೆ ನಡೆದ ವಿಧಾನಮಂಡಲ ಜಂಟಿ ಕಲಾಪದಲ್ಲಿ ರಾಜ್ಯಪಾಲರ ಭಾಷಣದಲ್ಲಿ; "ಕಾವೇರಿ ಐ ತೀರ್ಪಿನ ಭಾಗವಾಗಿ ಕಾವೇರಿ ವಿಸ್ತರಣಾ, ಮುಂದುವರಿದ ಹಾಗೂ ನವೀಕರಣ ಯೋಜನೆಗಳನ್ನು ಕೇಂದ್ರದ ಅನುಮೋದನೆ ಕೋರಲಾಗುವುದು" ಎಂದು ಹೇಳಿಸಿದ್ದರು.

ಕೇಂದ್ರದ ಅನುಮೋದನೆ ಎಂದರೆ, ಮತ್ತೆ ಮತ್ತೆ ಅರ್ಜಿ ಹಿಡಿದು ಕೇಂದ್ರದ ಮರ್ಜಿ ಕಾಯುವುದು. ಅದಕ್ಕೆ, ಅಂದೇ ಸದನದಲ್ಲಿ ಜೆಡಿಎಸ್ ಆ ಭಾಷಣವನ್ನು ವಿರೋಧಿಸಿತ್ತು. ಕಾವೇರಿ ಐ ತೀರ್ಪಿನ ಭಾಗವಾಗಿ ನಮ್ಮ ಪಾಲಿನ ನೀರು ಬಳಕೆಗೆ ಕ್ರಮ ಕೈಗೊಳ್ಳುವುದು ನಮ್ಮ ಹಕ್ಕು. ಈ ಸರಳ ವಿಷಯವೂ ಆವತ್ತಿನ ಸಿಎಂಗೆ ಅರ್ಥವಾಗಲಿಲ್ಲ. ಚಾಮರಾಜನಗರದ ಶ್ರೀ ಚಾಮರಾಜೇಶ್ವರನ ಸನ್ನಿಧಿಯಲ್ಲಿ ಸಿದ್ದಹಸ್ತರು ʼಸತ್ಯʼ ನುಡಿಯಬೇಕಿತ್ತು. ಆದರೆ, ಆ ಶಿವನ ಶಿರದಲ್ಲಿ ನೆಲೆನಿಂತ ಗಂಗೆಯ ಸಾಕ್ಷಿಯಾಗಿ ʼಸುಳ್ಳು ಹೇಳಿ ಅಪಚಾರʼ ಎಸಗಿದ್ದಾರೆ. ತಪ್ಪಿಗೆ ಪ್ರಾಯಶ್ಚಿತ್ತ ತಪ್ಪಿದ್ದಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

Recommended Video

      ನಗೆಪಾಟಲಾಯ್ತು ಮೋದಿ ವಿಡಿಯೋ! | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+