ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಬಿಜೆಪಿ ತನ್ನ ಸಣ್ಣ ಬುದ್ಧಿ ಬದಲಾಯಿಸಲಿ, ಕ್ಯಾಂಟೀನ್ ಹೆಸರನಲ್ಲ'

|
Google Oneindia Kannada News

ಬೆಂಗಳೂರು, ಡಿಸೆಂಬರ್ 17: 'ಇಂದಿರಾ ಕ್ಯಾಂಟೀನ್‌' ನ ಹೆಸರು ಬದಲಾಯಿಸಿ 'ಮಹರ್ಷಿ ವಾಲ್ಮೀಕಿ ಅನ್ನ ಕುಟೀರ' ಎಂದು ಬದಲಾಯಿಸಲು ಹೊರಟಿರುವ ಬಿಜೆಪಿ ಸರ್ಕಾರದ ಕ್ರಮದ ಬಗ್ಗೆ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

'ಇಂದಿರಾ ಕ್ಯಾಂಟೀನ್ ಗಳ ಹೆಸರನ್ನು ಬದಲಾಯಿಸಲು ಹೊರಟಿರುವ ರಾಜ್ಯದ ಬಿಜೆಪಿ ಸರ್ಕಾರದ ನಡೆಯನ್ನು ಖಂಡಿಸುತ್ತೇನೆ ಮತ್ತು ಇಂತಹ ಕ್ಷುಲಕ ರಾಜಕಾರಣವನ್ನು ತಕ್ಷಣ ಕೈಬಿಡಬೇಕು ಎಂದು ಆಗ್ರಹಪಡಿಸುತ್ತೇನೆ' ಎಂದು ಅವರು ಹೇಳಿದ್ದಾರೆ.

ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮುಂದಾದ ಬಿಜೆಪಿ ಸರ್ಕಾರಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮುಂದಾದ ಬಿಜೆಪಿ ಸರ್ಕಾರ

'ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಗರೀಬಿ ಹಟಾವೋ ಘೋಷಣೆಯ ಮೂಲಕ ಬಡತನದ ವಿರುದ್ಧ ಯುದ್ದ ಸಾರಿ ಗೆದ್ದವರು. ಅವರು ಕೇವಲ ಕಾಂಗ್ರೆಸ್ ಪಕ್ಷದ ನಾಯಕಿಯಾಗಿರಲಿಲ್ಲ, ದೇಶದ ನಾಯಕಿಯಾಗಿದ್ದರು, ಬಡವರ ಪಾಲಿನ ಆಪತ್ಪಾಂಧವಗಾಗಿದ್ದರು. ಈ ಕಾರಣಕ್ಕಾಗಿ ಇಂದಿರಾ ಕ್ಯಾಂಟೀನ್ ಎಂದು ನಾಮಕರಣ ಮಾಡಲಾಗಿತ್ತು' ಎಂದಿದ್ದಾರೆ.

Siddaramaiah Oppose Government Decision Of Changing Indira Canteen Name

'ಈ ಕ್ಯಾಂಟೀನ್ ಗಳಿಗೆ ನಮ್ಮೆಲ್ಲರ ಹೆಮ್ಮೆಯ ಕವಿ ಮಹರ್ಷಿ ವಾಲ್ಮೀಕಿಯವರ ಹೆಸರು ಇಡುವ ಯೋಚನೆ ಇದೆಯಂತೆ. ಮಹರ್ಷಿ ವಾಲ್ಮೀಕಿಯವರ ಬಗ್ಗೆ ನಮಗೆಲ್ಲ ಅಪಾರವಾದ ಗೌರವ ಇದೆ. ಅವರ ಹೆಸರನ್ನು ಬಿಜೆಪಿ ತನ್ನಕ್ಷುಲಕ ರಾಜಕಾರಣಕ್ಕೆ ದುರ್ಬಳಕೆ ಮಾಡಿಕೊಂಡು ಮಹಾಕವಿಗೆ ಅವಮಾನ ಮಾಡಲಾಗುತ್ತಿದೆ' ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

'ಮಹರ್ಷಿ ವಾಲ್ಮೀಕಿಯವರು ಒಬ್ಬ ಮಹಾಕವಿ, ಅವರ ಸಾಧನೆಗೆ ಹೊಂದುವಂತಹ ಯೋಜನೆಯನ್ನು ಬಿಜೆಪಿ ಸರ್ಕಾರ ಪ್ರಾರಂಭಿಸಲಿ, ಒಬ್ಬರಿಗೆ ಅಗೌರವ ಸಲ್ಲಿಸುವ ಮೂಲಕ ಇನ್ನೊಬ್ಬರಿಗೆ ಗೌರವ ಸಲ್ಲಿಸುವುದು ಇಬ್ಬರಿಗೂ ಮಾಡುವ ಅವಮಾನವಾಗಿದೆ' ಎಂದಿದ್ದಾರೆ.

ವಿಶೇಷ ಕ್ಷಣ; ಟಗರು ಭೇಟಿಯಾದ ಹುಲಿಯ!ವಿಶೇಷ ಕ್ಷಣ; ಟಗರು ಭೇಟಿಯಾದ ಹುಲಿಯ!

'ರಾಜ್ಯ ಬಿಜೆಪಿ ಬದಲಾಯಿಸಬೇಕಾಗಿರುವುದು ಇಂದಿರಾ ಕ್ಯಾಂಟೀನ್ ಹೆಸರಲ್ಲ, ತನ್ನೊಳಗಿನ ಸಣ್ಣ ಬುದ್ದಿಯನ್ನು ಬದಲಾಯಿಸಬೇಕು. ನಮ್ಮ ಸರ್ಕಾರ ಜಾರಿಗೆ ತಂದಿರುವ ಪ್ರತಿಯೊಂದು ಬಡವರ ಪರ ಯೋಜನೆಗಳನ್ನು ರದ್ದುಮಾಡಲು ಹೊರಟಿರುವ ರಾಜ್ಯದ ಬಿಜೆಪಿ ಸರ್ಕಾರ ಜನಾಕ್ರೋಶಕ್ಕೆ ಹೆದರಿ ಯೋಜನೆಗಳ ಹೆಸರು ಬದಲಾಯಿಸಲು ಹೊರಟಿದೆ. ಬಡವರ ಪರವಾದ ಹೊಸ ಯೋಜನೆಗಳನ್ನು ರೂಪಿಸುವ ಶಕ್ತಿಯೂ ಇಲ್ಲ, ಮನಸ್ಸೂ ಇಲ್ಲ' ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

English summary
Former CM Siddaramaiah oppose BJP government decision of changing Indira canteen name. He only started famous Indira canteen in his tenure.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X