'ಇದು ಮೋದಿ ಕುರುಡುತನದ ಆಲೋಚನೆ': ಸಿದ್ದರಾಮಯ್ಯ ಅಸಮಾಧಾನ
ಬೆಂಗಳೂರು, ಮೇ 31: ಆನ್ಲೈನ್ ತರಗತಿಗಳ ಮೂಲಕ ಪದವಿ ಮತ್ತು ವೃತ್ತಿಪರ ಶಿಕ್ಷಣವನ್ನು ಮಾಡುವ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.
Recommended Video
''ಪದವಿ ಮತ್ತು ವೃತ್ತಿಪರ ಶಿಕ್ಷಣವನ್ನು ಆನ್ಲೈನ್ ತರಗತಿಗಳ ಮೂಲಕ ನೀಡುವ ಪ್ರಧಾನಿ ಮೋದಿ ಪ್ರಸ್ತಾವ, ದೇಶದ ಸಾಮಾಜಿಕ ವಾಸ್ತವದ ಅರಿವಿಲ್ಲದವರ ಕುರುಡುತನದ ಆಲೋಚನೆ! ಇದರಿಂದ ಸಮಾಜದ ದೊಡ್ಡ ವರ್ಗ ಶಿಕ್ಷಣದಿಂದ ವಂಚಿತವಾಗಲಿದೆ.'' ಎಂದು ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೊರೊನಾ ಲಾಕ್ಡೌನ್ ನಂತರ ಸರ್ಕಾರ ಆನ್ ಲೈನ್ ಶಿಕ್ಷಣಕ್ಕೆ ಒತ್ತು ನೀಡಿದೆ. ಆದರೆ, ಆನ್ ಲೈನ್ ಶಿಕ್ಷಣ ನಗರ ಪ್ರದೇಶದಲ್ಲಿ ನೀಡಬಹುದು. ಹಳ್ಳಿಗಳಲ್ಲಿ ಆನ್ ಲೈನ್ ಶಿಕ್ಷಣಕ್ಕೆ ಸಮಸ್ಯೆಗಳು ಹೆಚ್ಚು. ನೆಟ್ವರ್ಕ್ ಸಮಸ್ಯೆ, ವಿದ್ಯುತ್ ಸಮಸ್ಯೆ ಹೀಗೆ ಆನ್ ಲೈನ್ ತರಗತಿಗೆ ಅಡ್ಡಿಗಳು ಹೆಚ್ಚಿವೆ.
ಪದವಿ ಮತ್ತು ವೃತ್ತಿಪರ ಶಿಕ್ಷಣವನ್ನು ಆನ್ಲೈನ್ ತರಗತಿಗಳ ಮೂಲಕ ನೀಡುವ @PMOIndia ಪ್ರಸ್ತಾವ,
— Siddaramaiah (@siddaramaiah) May 31, 2020
ದೇಶದ ಸಾಮಾಜಿಕ ವಾಸ್ತವದ ಅರಿವಿಲ್ಲದವರ ಕುರುಡುತನದ ಆಲೋಚನೆ!
ಇದರಿಂದ ಸಮಾಜದ ದೊಡ್ಡ ವರ್ಗ ಶಿಕ್ಷಣದಿಂದ ವಂಚಿತವಾಗಲಿದೆ.#onlinelearning
1/2
ಹೀಗಾಗಿ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ಧರಾಮಯ್ಯ ಆನ್ ಲೈನ್ ಮೂಲಕ ಪದವಿ ಮತ್ತು ವೃತ್ತಿಪರ ಶಿಕ್ಷಣ ತರಗತಿ ಮಾಡಿದರೆ, ಸಮಾಜದ ದೊಡ್ಡ ವರ್ಗ ಶಿಕ್ಷಣದಿಂದ ವಂಚಿತವಾಗಲಿದೆ ಎಂದಿದ್ದಾರೆ. ಹಳ್ಳಿ ವಿದ್ಯಾರ್ಥಿಗಳು ಆನ್ ಲೈನ್ ಶಿಕ್ಷಣ ಪಡೆದುಕೊಳ್ಳುವುದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ.
ಭಾರತದ ಅಸ್ತಿತ್ವ ಇರುವುದು ಹಳ್ಳಿಗಳಲ್ಲಿ.
— Siddaramaiah (@siddaramaiah) May 31, 2020
ಅಲ್ಲೆಲ್ಲ ಕಂಪ್ಯೂಟರ್-ಲ್ಯಾಪ್ ಟಾಪ್ -ಸ್ಮಾರ್ಟ್ ಪೋನ್ಗಳೆಲ್ಲಿಂದ ಬರಬೇಕು?
ಪೋನ್ ಇದ್ದರೂ ನೆಟ್ವರ್ಕ್ ಎಲ್ಲಿದೆ?
ಆನ್ ಲೈನ್ ಶಿಕ್ಷಣದಲ್ಲಿ ಹಳ್ಳಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದು ಹೇಗೆ?
ದೇಶ ಆಳುವ ನಾಯಕರಿಗೆ ಈ ಪ್ರಾಥಮಿಕ ಜ್ಞಾನ ಬೇಡವೇ?#onlinelearning
2/2
''ಭಾರತದ ಅಸ್ತಿತ್ವ ಇರುವುದು ಹಳ್ಳಿಗಳಲ್ಲಿ. ಅಲ್ಲೆಲ್ಲ ಕಂಪ್ಯೂಟರ್-ಲ್ಯಾಪ್ ಟಾಪ್ -ಸ್ಮಾರ್ಟ್ ಪೋನ್ಗಳೆಲ್ಲಿಂದ ಬರಬೇಕು? ಪೋನ್ ಇದ್ದರೂ ನೆಟ್ವರ್ಕ್ ಎಲ್ಲಿದೆ? ಆನ್ ಲೈನ್ ಶಿಕ್ಷಣದಲ್ಲಿ ಹಳ್ಳಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದು ಹೇಗೆ? ದೇಶ ಆಳುವ ನಾಯಕರಿಗೆ ಈ ಪ್ರಾಥಮಿಕ ಜ್ಞಾನ ಬೇಡವೇ?'' ಎಂದು ಸಿದ್ಧರಾಮಯ್ಯ ಟ್ವಿಟ್ಟರ್ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications