ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿದ ಸಿದ್ಧರಾಮಯ್ಯ

|
Google Oneindia Kannada News

ಬೆಂಗಳೂರು, ಜೂನ್ 13: ದಿನೇ ದಿನೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ಇದನ್ನು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ವಿರೋಧಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.

''ಕೇಂದ್ರ ಸರ್ಕಾರ ಸತತ ಏಳನೇ ದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿದೆ. ಏಳು ದಿನಗಳಲ್ಲಿ ಪೆಟ್ರೋಲ್ ಬೆಲೆ ರೂ. 4.70 ಮತ್ತು ಡೀಸೆಲ್ ಬೆಲೆ ರೂ. 3.40 ಏರಿಕೆಯಾಗಿದೆ.'' ಎಂದಿರುವ ಅವರು ಪೆಟ್ರೋಲ್, ಡೀಸೆಲ್ ಬೆಲೆಗೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೋಲಿಕೆ ಮಾಡಿದ್ದಾರೆ.

''ಆ ಕಡೆ ಕೊರೊನಾ ಸೋಂಕಿತರ ಸಂಖ್ಯೆ, ಈ ಕಡೆ ಪೆಟ್ರೋಲ್-ಡೀಸೆಲ್ ಬೆಲೆ ಎರಡೂ ಅನಿಯಂತ್ರಿತವಾಗಿ ಏರುತ್ತಿದೆ.'' ಎಂದು ಸಿದ್ಧರಾಮಯ್ಯ ಅಸಮಾಧಾನ ಹೊರ ಹಾಕಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ತುಟ್ಟಿ: ಸತತ 7ನೇ ದಿನ ಏರಿಕೆಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ತುಟ್ಟಿ: ಸತತ 7ನೇ ದಿನ ಏರಿಕೆ

Siddaramaiah Opposed Petrol And Diesel Price Hike

ಜೂನ್ 7 ರಂದು ಪೆಟ್ರೋಲ್ ಬೆಲೆ 71.86 ಇದ್ದೂ, ಇಂದು 75.16 ಆಗಿದೆ. ಕೇವಲ 6 ದಿನಗಳಲ್ಲಿ 4 ರೂಪಾಯಿ ಹೆಚ್ಚಾಗಿದೆ. ಇನ್ನು ಜೂನ್ 7 ರಂದು ಡೀಸೆಲ್ ದರ 69.99 ಇದ್ದೂ, ಇಂದಿಗೆ 73.39 ಆಗಿದೆ. ಡೀಸೆಲ್ ಸಹ 4 ರೂಪಾಯಿ ಹೆಚ್ಚಾಗಿದೆ.

ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಹ ಪ್ರತಿಕ್ರಿಯೆ ನೀಡಿದ್ದಾರೆ. ''ಪೆಟ್ರೋಲ್, ಡೀಸೆಲ್ ದರ ಹೆಚ್ಚು ಮಾಡುವ ಮೂಲಕ ಸರ್ಕಾರ ಲೂಟಿ ಮಾಡಲು ಮುಂದಾಗಿದೆ. ಇದು ಆತಂಕಕಾರಿ ಬೆಳವಣಿಗೆ. ಹೀಗೆ ಜನರನ್ನು ಕಿತ್ತು ತಿನ್ನುವ ಪ್ರವೃತ್ತಿಯನ್ನು ಕೇಂದ್ರ ಸರ್ಕಾರ ನಿಲ್ಲಿಸಬೇಕು.'' ಎಂದಿದ್ದಾರೆ.

English summary
opposition party leader in kannada siddaramaiah opposed petrol and diesel price hike. Today petrol price is 75.16 and diesel price is 73.39.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X