Breaking: ಚೀನಾದಿಂದ ಪಾಲಿಸ್ಟರ್ ಧ್ವಜಗಳ ಆಮದು:ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು , ಜುಲೈ 22: 'ಕೇಂದ್ರ ಸರ್ಕಾರ ಧ್ವಜ ಸಂಹಿತೆಗೆ ತಿದ್ದುಪಡಿ ಮಾಡಿ ಪಾಲಿಸ್ಟರ್ ರಾಷ್ಟ್ರಧ್ವಜಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುತ್ತಿರುವುದು ರಾಷ್ಟ್ರಧ್ವಜ ಮತ್ತು ಖಾದಿ ಬಟ್ಟೆಗೆ ಮಾಡಿರುವ ಅಗೌರವವಾಗಿದೆ' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಇಂದು ಭಾರತದ ತ್ರಿವರ್ಣ ಧ್ವಜವನ್ನು ಅಳವಡಿಸಿಕೊಂಡ ದಿನದ ಹಿನ್ನೆಲೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, 'ಕೇಸರಿ, ಬಿಳಿ, ಹಸಿರು ಬಣ್ಣಗಳ ತ್ರಿವರ್ಣ ಧ್ವಜವನ್ನು 1947ರಲ್ಲಿ ಇದೇ ದಿನ ಸಂವಿಧಾನ ರಚನಾ ಸಭೆ ರಾಷ್ಟ್ರಧ್ವಜವಾಗಿ ಅಂಗೀಕರಿಸಿತ್ತು. ಈ ಬಣ್ಣಗಳು ಸಾರುವ ಶಾಂತಿ, ತ್ಯಾಗ, ಧೈರ್ಯ, ಸಾಮರ್ಥ್ಯ, ಭರವಸೆ ಮತ್ತು ಸರ್ವಸಮಾನ ಅಭಿವೃದ್ದಿಯ ಸಂದೇಶವನ್ನು ನಾವೆಲ್ಲರೂ ಗೌರವಿಸೋಣ' ಎಂದಿದ್ದಾರೆ.
ಪಾಲಿಸ್ಟರ್ ರಾಷ್ಟ್ರಧ್ವಜಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, 'ರಾಷ್ಟ್ರಗೀತೆಯಷ್ಟೇ ಪವಿತ್ರವಾದ ರಾಷ್ಟ್ರಧ್ವಜ ದೇಶದ ಅಸ್ಮಿತೆ ಮತ್ತು ಸ್ವಾಭಿಮಾನದ ಸಂಕೇತ. ಕೇಂದ್ರ ಸರ್ಕಾರ ಧ್ವಜ ಸಂಹಿತೆಗೆ ತಿದ್ದುಪಡಿ ಮಾಡಿ ಪಾಲಿಸ್ಟರ್ ರಾಷ್ಟ್ರಧ್ವಜಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುತ್ತಿರುವುದು ರಾಷ್ಟ್ರಧ್ವಜ ಮತ್ತು ಖಾದಿ ಬಟ್ಟೆಗೆ ಮಾಡಿರುವ ಅಗೌರವವಾಗಿದೆ' ಎಂದಿದ್ದಾರೆ.
ರಾಷ್ಟ್ರಗೀತೆಯಷ್ಟೇ ಪವಿತ್ರವಾದ ರಾಷ್ಟ್ರಧ್ವಜ ದೇಶದ ಅಸ್ಮಿತೆ ಮತ್ತು ಸ್ವಾಭಿಮಾನದ ಸಂಕೇತ.
— Siddaramaiah (@siddaramaiah) July 22, 2022
ಕೇಂದ್ರ ಸರ್ಕಾರ ಧ್ವಜ ಸಂಹಿತೆಗೆ ತಿದ್ದುಪಡಿ ಮಾಡಿ ಪಾಲಿಸ್ಟರ್ ರಾಷ್ಟ್ರಧ್ವಜಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುತ್ತಿರುವುದು ರಾಷ್ಟ್ರಧ್ವಜ ಮತ್ತು ಖಾದಿ ಬಟ್ಟೆಗೆ ಮಾಡಿರುವ ಅಗೌರವವಾಗಿದೆ.
2/4#nationalflagday pic.twitter.com/tpgHBHZvUJ
'ಪಾಲಿಸ್ಟರ್ ರಾಷ್ಟ್ರಧ್ವಜಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುವ ಬಿಜೆಪಿ ಸರ್ಕಾರದ ನಿರ್ಧಾರದಿಂದಾಗಿ, ದಶಕಗಳಿಂದ ರಾಷ್ಟ್ರಧ್ವಜವನ್ನು ತಯಾರಿಸಿ ದೇಶಕ್ಕೆ ಹಂಚುತ್ತಿದ್ದ ನಮ್ಮ ಹುಬ್ಬಳ್ಳಿಯ 'ಕರ್ನಾಟಕ ಖಾದಿ ಗ್ರಾಮದ್ಯೋಗ ಸಂಯುಕ್ತ ಸಂಘ' ಬಾಗಿಲು ಹಾಕುವ ಪರಿಸ್ಥಿತಿ ಎದುರಾಗಿದೆ' ಎಂದು ತಿಳಿಸಿದ್ದಾರೆ.

'ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪಾಲಿಸ್ಟರ್ ಧ್ವಜಗಳ ಬಳಕೆಯ ಆದೇಶವನ್ನು ತಕ್ಷಣ ವಾಪಸು ಪಡೆದು ಖಾದಿ ಬಟ್ಟೆಯ ರಾಷ್ಟ್ರಧ್ವಜಗಳ ತಯಾರಿಕೆಗಷ್ಟೇ ಅವಕಾಶ ನೀಡಬೇಕು. ಈ ಮೂಲಕ ರಾಷ್ಟ್ರಧ್ವಜದ ಗೌರವವನ್ನು ಎತ್ತಿಹಿಡಿಯಬೇಕು ಮತ್ತು ಖಾದಿ ಗ್ರಾಮದ್ಯೋಗದ ಅಭಿವೃದ್ದಿಗೆ ನೆರವಾಗಬೇಕು' ಎಂದು ಆಗ್ರಹಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಟ್ವೀಟ್ ಮಾಡಿದ್ದ ಪ್ರಧಾನು ಮೋದಿ ದೇಶವು 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದು ಆಗಸ್ಟ್ 13 ರಿಂದ 15ರ ನಡುವೆ ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ 'ಹರ್ ಘರ್ ತಿರಂಗ' ಅಭಿಯಾನವನ್ನು ಬಲಪಡಿಸುವಂತೆ ನಾಗರಿಕರಲ್ಲಿ ಮನವಿ ಮಾಡಿದ್ದರು.
"ಆಜಾದಿ ಕಾ ಅಮೃತ್ ಮಹೋತ್ಸವ"ವನ್ನು ಗುರುತಿಸಲು ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸುವ ಈ ಅಭಿಯಾನವು "ರಾಷ್ಟ್ರಧ್ವಜದೊಂದಿಗಿನ ನಮ್ಮ ಸಂಪರ್ಕವನ್ನು ಗಾಢಗೊಳಿಸುತ್ತದೆ" ಎಂದು ಸರಣಿ ಟ್ವೀಟ್‌ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.












Click it and Unblock the Notifications