Hindi Impose: ಕನ್ನಡ ಧ್ವಜದ ಬಗ್ಗೆ ವಿರೋಧ ಏಕೆ?: ಅಮಿತ್ ಶಾಗೆ ಸಿದ್ದರಾಮಯ್ಯ ಸಾಲು ಸಾಲು ಪ್ರಶ್ನೆ
ಬೆಂಗಳೂರು, ಏಪ್ರಿಲ್ 02: ಹಿಂದಿ ಎನ್ನುವುದು ರಾಷ್ಟ್ರಭಾಷೆ ಎನ್ನುವ ಸುಳ್ಳನ್ನು ಹೇಳಿ, ಕನ್ನಡಿಗರ ಮೇಲೆ ಆ ಭಾಷೆ ಹೆರಲಾಗುತ್ತಿದೆ. ಈ ನೆಲದ ಭಾಷೆ ಕನ್ನಡ ಧ್ವಜವನ್ನು ರೂಪಿಸಿ ಅಂಗೀಕಾರಕ್ಕಾಗಿ ಕೇಂದ್ರ ಬಿಜೆಪಿ ಸರ್ಕಾರಕ್ಕೆ ರವಾನಿಸಿ ಆರು ವರ್ಷಗಳಾದರೂ ಈವರೆಗೆ ಅನುಮೋದನೆ ಏಕೆ ನೀಡಿಲ್ಲ. ನಿಮಗೆ ಕನ್ನಡ ಧ್ವಜದ ಬಗ್ಗೆ ನಿಮ್ಮ ವಿರೋಧ ಏಕೆ? ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟುವಾಗಿ ಪ್ರಶ್ನಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆ ಕೇಳಿರುವ ಸಿಎಂ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ. ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಮತ್ತು ಕನ್ನಡ ಭಾಷೆಯನ್ನು ಚುನಾವಣೆ ಹೊತ್ತಿನಲ್ಲಿ ಪ್ರಸ್ತಾಪಿಸಿದ್ದಾರೆ.

ಅಮಿತ್ ಶಾಗೆ ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಳೆ
ಹಿಂದಿ ಎನ್ನುವುದು ರಾಷ್ಟ್ರಭಾಷೆ ಎನ್ನುವ ಸುಳ್ಳನ್ನು ಮತ್ತೆ ಮತ್ತೆ ಹೇಳಲಾಗುತ್ತದೆ. ಹಿಂದಿ ರಾಷ್ಟ್ರಭಾಷೆ ಎನ್ನುವುದನ್ನು ಸಂವಿಧಾನ ಹೇಳಿದೆಯೇ? ಹೇಳಿದ್ದರೆ ಸಂವಿಧಾನದ ಯಾವ ಪರಿಚ್ಚೇದಲ್ಲಿ ಹೇಳಲಾಗಿದೆ? ದಯವಿಟ್ಟು ಅದನ್ನು ಕನ್ನಡಿಗರ ಮುಂದೆ ತೆರೆದಿಡಿ ಎಂದು ಅವರು ಅಮಿತ್ ಶಾ ಅವರನ್ನು ಪ್ರಶ್ನಿಸಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅವರೇ ಕರ್ನಾಟಕದಲ್ಲಿ ಮತಕೇಳುವ ಮೊದಲು ಕನ್ನಡಿಗ ಮತದಾರರ ಈ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿ. ಜಗತ್ತಿನ ಯಾವ ಭಾಷೆಗೂ ನಮ್ಮ ವಿರೋಧ ಇಲ್ಲ. ಆದರೆ ಕನ್ನಡದ ನೆಲದಲ್ಲಿ ಕನ್ನಡ ಭಾಷೆಗೆ ಮೊದಲ ಪೂಜೆ ಸಲ್ಲಬೇಕೆನ್ನುವುದು ಮಾತ್ರ ಕನ್ನಡಿಗರ ನಿಲುವು. ಕನ್ನಡ ಧ್ವಜವನ್ನು ರೂಪಿಸಿ ಅಂಗೀಕಾರಕ್ಕಾಗಿ ಕೇಂದ್ರ ಬಿಜೆಪಿ ಸರ್ಕಾರ ಯಾಕೆ ಇದುವರೆಗೂ ಅನುಮೋದನೆ ನೀಡಿಲ್ಲ ಆಕ್ರೋಶ ಹೊರ ಹಾಕಿದರು
ಹಿಂದಿ ಎನ್ನುವುದು ರಾಷ್ಟ್ರಭಾಷೆ ಎನ್ನುವ ಸುಳ್ಳನ್ನು ಮತ್ತೆ ಮತ್ತೆ ಹೇಳಿ ಆ ಭಾಷೆಯನ್ನು ಕನ್ನಡಿಗರ ಮೇಲೆ ಹೇರುತ್ತಿರುವುದು ಯಾಕೆ? ಹಿಂದಿ ರಾಷ್ಟ್ರಭಾಷೆ ಎನ್ನುವುದನ್ನು ಸಂವಿಧಾನ ಹೇಳಿದೆಯೇ @AmitShah ಅವರೇ? ಹೇಳಿದ್ದರೆ ಸಂವಿಧಾನದ ಯಾವ ಪರಿಚ್ಚೇದಲ್ಲಿ ಹೇಳಲಾಗಿದೆ? ದಯವಿಟ್ಟು ಅದನ್ನು ಕನ್ನಡಿಗರ ಮುಂದೆ ತೆರೆದಿಡಿ. 5/7…
— Siddaramaiah (@siddaramaiah) April 2, 2024
ದೇವೇಗೌಡರ ಬಗ್ಗೆ ವೈಯುಕ್ತಿಕ ವಿರೋಧ ಇಲ್ಲ
ಎಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಕರ್ನಾಟಕ ಬಿಜೆಪಿ ಬೀಳಿಸಿದೆ. ಹಾಗಂತ ಇದೇ ಎಚ್‌ಡಿ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ಎಚ್‌ಡಿ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಬಿಜೆಪಿ ಪಕ್ಷದ ಜತೆ ಮೈತ್ರಿ ಮಾಡಿಕೊಂಡಿದ್ದಾರೆ. ಆದ್ದರಿಂದ ಇವರು ತಮ್ಮ ಪಕ್ಷದ ಹೆಸರಿನಲ್ಲಿರುವ ಸೆಕ್ಯುಲರ್ ಪದವನ್ನು ಕಿತ್ತಾಕೋದು ಉತ್ತಮ ಎಂದೆ. ಇಷ್ಟು ಹೇಳಿದ್ದಕ್ಕೇ ದೇವೇಗೌಡರು ಸಿದ್ದರಾಮಯ್ಯರಿಗೆ ಗರ್ವ ಇದೆ ಎನ್ನುತ್ತಿದ್ದಾರೆ.

ಎಚ್‌ಡಿ ದೇವೇಗೌಡರ ಕುರಿತು ನಮಗಿರುವುದು ರಾಜಕೀಯ ವಿರೋಧ ಮಾತ್ರ. ನಿಮ್ಮ ರಾಜಕೀಯ ನಿಲುವುಗಳಿಗೆ ಮಾಡುವ ವಿರೋಧ. ಯಾವುದೇ ಕಾರಣಕ್ಕೂ ದೇವೇಗೌಡರ ಬಗ್ಗೆ ವೈಯುಕ್ತಿಕ ವಿರೋಧ ಇಲ್ಲವೇ ಇಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಚುನಾವಣೆ ಬಗ್ಗೆ ಆತಂಕ ಇಲ್ಲ: ಕಾಂಗ್ರೆಸ್ ಗೆಲ್ಲಿಸಿ
ಮುಂದಿನ ಬಾರಿಯೂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂದು ವರುಣಾ ಕ್ಷೇತ್ರದ ಜನರು ಆಪೇಕ್ಷೆಯಾಗಿದೆ. ಈ ಬಾರಿಯ ನನ್ನ ಸರ್ಕಾರದ ಅವಧಿಯೇ ನಾಲ್ಕು ವರ್ಷವಿದೆ. ನನ್ನ 82ನೇ ವಯಸ್ಸಿಗೆ ನನ್ನ ರಾಜಕೀಯ ಜೀವನಕ್ಕೆ 50 ವರ್ಷವಾಗುತ್ತದೆ. ಚುನಾವಣೆಯ ಬಗ್ಗೆ ಯಾವುದೇ ರೀತಿಯ ಆತಂಕವಿಲ್ಲ ಎಂದು ಅವರು ಹೇಳಿದರು.
ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ, ಇವರು ನಮ್ಮ-ನಿಮ್ಮಲ್ಲರ ಧ್ವನಿಯಾಗಿ ಸಂಸತ್ತಿಗೆ ಹೋಗ್ತಾರೆ. ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸಿ ಕಳಿಸೋಣ ಎಂದು ಅವರು ಕಾರ್ಯಕರ್ತರಿಗೆ ಇದೇ ವೇಳೆ ಕರೆ ನೀಡಿದ್ದಾರೆ.












Click it and Unblock the Notifications