ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚೀನಾ-ಭಾರತ ಘರ್ಷಣೆ: 'ಆಳುವವರ ಮೌನ ಜನದ್ರೋಹ, ದೇಶದ್ರೋಹ'- ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಜೂನ್ 17: ಭಾರತ ಮತ್ತು ಚೀನಾ ಸೈನಿಕರ ಘರ್ಷಣೆ ಕುರಿತು ಕರ್ನಾಟಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಯೋಧರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

Recommended Video

BSY today green signal to Caravan tourism in Bengaluru | Tourism | Oneindia Kannada

ಚೀನಾ ವಿಚಾರದಲ್ಲಿ ಕೇಂದ್ರ ಸರ್ಕಾರ ಮೌನವಾಗಿರುವುದರನ್ನು ಖಂಡಿಸಿರುವ ಸಿದ್ದರಾಮಯ್ಯ ''ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು'' ಎಂದು ಟೀಕಿಸಿದ್ದಾರೆ.

'ನಿಮ್ಮ ತ್ಯಾಗವನ್ನು ದೇಶ ಎಂದಿಗೂ ಮರೆಯುವುದಿಲ್ಲ'- ರಾಜನಾಥ್ ಸಿಂಗ್'ನಿಮ್ಮ ತ್ಯಾಗವನ್ನು ದೇಶ ಎಂದಿಗೂ ಮರೆಯುವುದಿಲ್ಲ'- ರಾಜನಾಥ್ ಸಿಂಗ್

ಲಡಾಖ್‌ನ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಸೋಮವಾರ ನಡೆದ ಚೀನಾ ಮತ್ತು ಭಾರತ ಸೈನಿಕರ ಘರ್ಷಣೆಯಲ್ಲಿ 20 ಜನ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಈ ಘಟನೆ ಹಿನ್ನೆಲೆ ಸಿದ್ದರಾಮಯ್ಯ ಮೂರು ಟ್ವೀಟ್ ಮಾಡಿದ್ದು, ಅದರಲ್ಲಿ ಏನು ಹೇಳಿದ್ದಾರೆ? ಮುಂದೆ ಓದಿ....

ವೀರ ಸೈನಿಕರ ಬಲಿದಾನ ವ್ಯರ್ಥವಾಗಬಾರದು

ವೀರ ಸೈನಿಕರ ಬಲಿದಾನ ವ್ಯರ್ಥವಾಗಬಾರದು

''ದೇಶಕ್ಕಾಗಿ ಬೆವರು-ರಕ್ತ ಹರಿಸಿದ ನಾಯಕರ ಪಕ್ಷವಾದ ಕಾಂಗ್ರೆಸ್ ಪಕ್ಷ. ಭಾರತದ ಏಕತೆ, ಅಖಂಡತೆ ಮತ್ತು ಸಾರ್ವಭೌಮತೆಗೆ ಸದಾ ಬದ್ಧವಾಗಿದೆ. ವೀರ ಸೈನಿಕರ ಬಲಿದಾನ ವ್ಯರ್ಥವಾಗಬಾರದು. ಹುತಾತ್ಮರ ಕುಟುಂಬಕ್ಕೆ ಗೌರವದ ಶ್ರದ್ಧಾಂಜಲಿ ಸಲ್ಲಿಸೋಣ. ಚೀನಾದ ದುಷ್ಕೃತ್ಯವನ್ನು ಒಕ್ಕೊರಲಿನಿಂದ ಖಂಡಿಸೋಣ'' - ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

ಇದಕ್ಕೆ ಕೇಂದ್ರ ಸರ್ಕಾರ ಹೊಣೆ

ಇದಕ್ಕೆ ಕೇಂದ್ರ ಸರ್ಕಾರ ಹೊಣೆ

''ಶತ್ರು ದೇಶದ ವಿರುದ್ಧ ಹೋರಾಡುವುದು ಸರ್ಕಾರ ಅಲ್ಲ, ದೇಶ. ಸರ್ಕಾರ ದೇಶಕ್ಕೆ, ದೇಶದ ಜನತೆಗೆ ಉತ್ತರದಾಯಿ. ದೇಶದ ಪ್ರತಿಯೊಬ್ಬ ಪ್ರಜೆಯೂ ಕೇಂದ್ರ ಸರ್ಕಾರವನ್ನು ನಂಬಿದೆ, ಜನರನ್ನು ವಿಶ್ವಾಸಕ್ಕೆ‌ ತೆಗೆದುಕೊಂಡು ನಂಬಿಕೆಯನ್ನು ಉಳಿಸಿಕೊಳ್ಳುವ ಹೊಣೆಯೂ ಕೇಂದ್ರ ಸರ್ಕಾರದ್ದು'' - ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

ಭಾರತ-ಚೀನಾ ಘರ್ಷಣೆ: ಚೈನೀಸ್ ಸೈನಿಕರ ಸಾವಿನ ಲೆಕ್ಕ ನೀಡಿದ ಯುಎಸ್ಭಾರತ-ಚೀನಾ ಘರ್ಷಣೆ: ಚೈನೀಸ್ ಸೈನಿಕರ ಸಾವಿನ ಲೆಕ್ಕ ನೀಡಿದ ಯುಎಸ್

ಆಳುವವರ ಮೌನ ದೇಶದ್ರೋಹ

''ಚೀನಾ ದೇಶ ಗಡಿತಂಟೆ ಶುರುಹಚ್ಚಿ ಏಳು ವಾರಗಳಾಗುತ್ತಾ ಬಂತು. ಅಲ್ಲಿನ ಬೆಳವಣಿಗೆಗಳ ನಿಜಸಂಗತಿಯ ಬಗ್ಗೆ ನರೇಂದ್ರ ಮೋದಿ, ರಾಜನಾಥ್ ಸಿಂಗ್ ಇಲ್ಲಿಯ ವರೆಗೆ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು.'' - ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

ರಾಹುಲ್ ಗಾಂಧಿ ಟೀಕೆ

ಚೀನಾ ಮತ್ತು ಭಾರತ ಘರ್ಷಣೆ ಕುರಿತು ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಟ್ವೀಟ್ ಮಾಡಿದ್ದು ಪಿಎಂ ಮೋದಿ ಅವರ ಮೌನವನ್ನು ಪ್ರಶ್ನಿಸಿದ್ದರು. ''ಮೋದಿ ಏಕೆ ಮೌನವಾಗಿದ್ದಾರೆ? ಅವರು ಏಕೆ ಅಡಗಿಕೊಂಡಿದ್ದಾರೆ? ಸಾಕಾಗಿದೆ, ಚೀನಾ ವಿಚಾರದಲ್ಲಿ ಏನಾಗುತ್ತಿದೆ ಎಂಬುದು ನಮಗೆ ಗೊತ್ತಾಗಬೇಕಿದೆ.....

ನಮ್ಮ ಯೋಧರನ್ನು ಕೊಲ್ಲಲು ಚೀನಾ ಎಷ್ಟು ಧೈರ್ಯ?

ನಮ್ಮ ಭೂಮಿಯನ್ನು ವಶಪಡಿಸಿಕೊಳ್ಳಲು ಎಷ್ಟು ಧೈರ್ಯ?'' ಎಂದು ರಾಹುಲ್ ಗಾಂಧಿ ಆಕ್ರೋಶ ಹೊರಹಾಕಿದ್ದಾರೆ.

English summary
Karnataka Ex chief minister Siddaramaiah has react on india and china fight.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X