Get Updates
Get notified of breaking news, exclusive insights, and must-see stories!

ನಿಗಮ ಮಂಡಳಿಗಳಿಗೆ ನೇಮಕ, ಅಧಿಕಾರ ಉಳಿಸಿಕೊಳ್ಳುವ ಸರ್ಕಸ್:ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 25: ಆತುರಾತುರದಲ್ಲಿ ನಿಗಮ ಮಂಡಳಿಗೆ ನೇಮಕ ಮಾಡಿದ್ದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವುದು ಖಚಿತವಾಗಿರಬೇಕು. ಹೀಗಾಗಿ ಅವರು ತರಾತುರಿಯಲ್ಲಿ ನಿಗಮ ಮಂಡಳಿಗಳಿಗೆ ನೇಮಕ ಮಾಡಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಆರ್ಥಿಕ ಸಂಕಷ್ಟದ ನಡುವೆಯೂ ನಿಗಮ-ಮಂಡಳಿ ನೇಮಕ ಮಾಡಿ ಕುರ್ಚಿ ಉಳಿಸಿಕೊಳ್ಳುವ ಕಸರತ್ತು ನಡೆಸಿದ್ದಾರೆ. ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವ ಆತಂಕವಿದೆ.

Siddaramaiah Reaction To Appointment Of Chiefs To Boards And Corporations

ಹೀಗಾಗಿ ಯಡಿಯೂರಪ್ಪ ತರಾತುರಿಯಲ್ಲಿ ನಿಗಮ ಮಂಡಳಿಗಳಿಗೆ ನೇಮಕ ಮಾಡಿದ್ದಾರೆ. ರಾಜ್ಯದಲ್ಲಿ ಹಣಕಾಸಿನ ಮುಗ್ಗಟ್ಟು ಇರುವಾಗ ನಿಗಮ ಮಂಡಳಿಗಳಿಗೆ ನೇಮಕ ಮಾಡಿರುವುದು ರಾಜ್ಯಕ್ಕೆ ಎಸಗಿರುವ ದ್ರೋಹ ಎಂದರು.

ಖಾಸಗಿ ಶಿಕ್ಷಣ ಸಂಸ್ಥೆಗಳು ಶುಲ್ಕ ನೀಡದೇ ಹೋದಲ್ಲಿ ಆನ್ಲೈನ್ ತರಗತಿ ಸೌಲಭ್ಯ ನೀಡದೇ ಇರುವುದು ಸರಿಯಲ್ಲ. ಸರ್ಕಾರ ಖಾಸಗಿ ಶಾಲೆಗಳ ಜೊತೆ ಶಾಮೀಲಾಗಿದ್ದು, ಹೀಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರ ರಕ್ಷಣೆಗಾಗಿ ಏನೂ ಮಾಡುತ್ತಿಲ್ಲ. ಇದು ಬರೀ ಲೂಟಿ ಸರ್ಕಾರ.

ಯಡಿಯೂರಪ್ಪ ಸರ್ಕಾರ ಲೂಟಿ ಸರ್ಕಾರ ಎಂದು ಸಿದ್ದರಾಮಯ್ಯ ಟೀಕಿಸಿದರು.ಕೊರೊನಾದಿಂದ ಜನ ಬದುಕು ಸಾಗಿಸುವುದೇ ಕಷ್ಟವೆನ್ನುವ ಪರಿಸ್ಥಿತಿ ಇರುವಾಗ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್‌ಲೈನ್ ಶಿಕ್ಷಣವನ್ನು ಕೈಬಿಡಲು ಹೊರಟಿರುವುದು ಅಮಾನವೀಯ. ಇದು ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ, ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆಯನ್ನು ಬಗೆಹರಿಸಬೇಕು.

ರಾಜ್ಯ ಸರ್ಕಾರ ದಿವಾಳಿಯಾಗಿದೆ. ವೃದ್ಧಾಪ್ಯ ವೇತನ, ವಿಧವಾ ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲ. ಇಂತಹ ಆರ್ಥಿಕ ಸಂಕಷ್ಟದ ನಡುವೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ ಸರ್ಕಾರ ಇನ್ನಷ್ಟು ದುಂದುವೆಚ್ಚಕ್ಕೆ ಎಡೆಮಾಡಿಕೊಟ್ಟಿದೆ. ಇದು ಅಧಿಕಾರ ಉಳಿಸಿಕೊಳ್ಳುವ ಸರ್ಕಸ್ಸಲ್ಲದೆ ಬೇರೇನಲ್ಲ ಎಂದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+