ಯಡಿಯೂರಪ್ಪ ಜತೆಗೆ ಬಿಜೆಪಿ ಪಕ್ಷವೇ ಅಧಿಕಾರ ಬಿಟ್ಟು ತೊಲಗಬೇಕು: ಸಿದ್ದರಾಮಯ್ಯ
ಬೆಂಗಳೂರು, ಜುಲೈ 26: ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿ ಮಾಡಿದರೆ ಸಾಮಾನ್ಯ ಜನರಿಗೇನು ಲಾಭ? ಅದರ ಬದಲು ಅಧಿಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿರುವ ಬಿಜೆಪಿ ಪಕ್ಷವೇ ಅಧಿಕಾರ ಬಿಟ್ಟು ತೊಲಗಿದರೆ ಜನ ನೆಮ್ಮದಿಯ ಬದುಕು ನಡೆಸುವಂತಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಜನ ಕಷ್ಟದಲ್ಲಿರುವಾಗ ಮುಖ್ಯಮಂತ್ರಿ ಬದಲಾವಣೆ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ.
ಯಡಿಯೂರಪ್ಪ ಅವರ ಬಗ್ಗೆ ನನಗೆ ಅನುಕಂಪವಿದೆ. ಅವರಿಗೆ ವಯಸ್ಸಾಯಿತೆಂದು ಅವರ ಪಕ್ಷದ ದೆಹಲಿ ನಾಯಕರೇ ಹೇಳುತ್ತಿದ್ದಾರೆ. ಅವರ ಮುಂದಿನ ಜೀವನ ಸುಖಕರವಾಗಿರಲಿ, ಅವರಿಗೆ ನೆಮ್ಮದಿ ಸಿಗಲಿ ಎಂದಷ್ಟೇ ನಾನು ಆಶಿಸುತ್ತೇನೆ.

ಪ್ರವಾಹದಿಂದ ನಷ್ಟ
ಪ್ರವಾಹದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳೆ ನಾಶವಾಗಿದೆ, ಈ ವರೆಗೆ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಜಾನುವಾರುಗಳು ಸಾವಿಗೀಡಾಗಿವೆ. ಜನರ ಕಷ್ಟ ಅರಿತು ಅವರ ನೆರವಿಗೆ ಧಾವಿಸಬೇಕಿದ್ದ ರಾಜ್ಯ ಬಿಜೆಪಿ ನಾಯಕರು ನಾಯಕರು ಮುಖ್ಯಮಂತ್ರಿ ಬದಲಾವಣೆ, ಮಂತ್ರಿ ಪದವಿ ಉಳಿಸಿಕೊಳ್ಳುವುದರಲ್ಲಿ ಮಗ್ನರಾಗಿದ್ದಾರೆ.

ಮತ್ತೊಬ್ಬ ಭ್ರಷ್ಟನನ್ನು ಸಿಎಂ ಮಾಡಿದರೆ ಏನು ಲಾಭ
ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿ ಮಾಡಿದರೆ ಸಾಮಾನ್ಯ ಜನರಿಗೇನು ಲಾಭ? ಅದರ ಬದಲು ಅಧಿಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿರುವ ಬಿಜೆಪಿ ಪಕ್ಷ ಅಧಿಕಾರ ಬಿಟ್ಟು ತೊಲಗಿದರೆ ಜನ ನೆಮ್ಮದಿಯ ಬದುಕು ನಡೆಸುವಂತಾಗುತ್ತದೆ.

ಹೆತ್ತವರಿಗೆ ಹೆಗ್ಗಣ ಮುದ್ದು
ಎಷ್ಟಾದರೂ ಹೆತ್ತವರಿಗೆ ಹೆಗ್ಗಣ ಮುದ್ದು ಎಂಬ ಗಾದೆ ಮಾತಿನಂತೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರಿಗೆ ಬಿಎಸ್ವೈ ಅವರೇ ಉತ್ತಮ ಮುಖ್ಯಮಂತ್ರಿಯಾಗಿ ಕಂಡಿದ್ದಾರೆ ಎಂದು ಟೀಕಿಸಿದ್ದಾರೆ.
Recommended Video

ಯಡಿಯೂರಪ್ಪ ರಾಜೀನಾಮೆ
ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದ ದಿನವೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇದೀಗ ಮುಂದಿನ ಮುಖ್ಯಮಂತ್ರಿ ಯಾರಾಗಬಹುದು ಎಂಬ ಕುತೂಹಲ ಎದುರಾಗಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications