ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಡಿಯೂರಪ್ಪ ಜತೆಗೆ ಬಿಜೆಪಿ ಪಕ್ಷವೇ ಅಧಿಕಾರ ಬಿಟ್ಟು ತೊಲಗಬೇಕು: ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಜುಲೈ 26: ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿ ಮಾಡಿದರೆ ಸಾಮಾನ್ಯ ಜನರಿಗೇನು ಲಾಭ? ಅದರ ಬದಲು ಅಧಿಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿರುವ ಬಿಜೆಪಿ ಪಕ್ಷವೇ ಅಧಿಕಾರ ಬಿಟ್ಟು ತೊಲಗಿದರೆ ಜನ ನೆಮ್ಮದಿಯ ಬದುಕು ನಡೆಸುವಂತಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಜುಲೈ 27ರಂದು ಬಿಜೆಪಿ ಸಂಸದೀಯ ಮಂಡಳಿ ಸಭೆ, ಮುಂದಿನ ಸಿಎಂ ಆಯ್ಕೆ?ಜುಲೈ 27ರಂದು ಬಿಜೆಪಿ ಸಂಸದೀಯ ಮಂಡಳಿ ಸಭೆ, ಮುಂದಿನ ಸಿಎಂ ಆಯ್ಕೆ?

ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ರಾಜೀನಾಮೆ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಜನ ಕಷ್ಟದಲ್ಲಿರುವಾಗ ಮುಖ್ಯಮಂತ್ರಿ ಬದಲಾವಣೆ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಅವರ ಬಗ್ಗೆ ನನಗೆ ಅನುಕಂಪವಿದೆ. ಅವರಿಗೆ ವಯಸ್ಸಾಯಿತೆಂದು ಅವರ ಪಕ್ಷದ ದೆಹಲಿ ನಾಯಕರೇ ಹೇಳುತ್ತಿದ್ದಾರೆ. ಅವರ ಮುಂದಿನ ಜೀವನ ಸುಖಕರವಾಗಿರಲಿ, ಅವರಿಗೆ ನೆಮ್ಮದಿ ಸಿಗಲಿ ಎಂದಷ್ಟೇ ನಾನು ಆಶಿಸುತ್ತೇನೆ.

 ಪ್ರವಾಹದಿಂದ ನಷ್ಟ

ಪ್ರವಾಹದಿಂದ ನಷ್ಟ

ಪ್ರವಾಹದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳೆ ನಾಶವಾಗಿದೆ, ಈ ವರೆಗೆ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಜಾನುವಾರುಗಳು ಸಾವಿಗೀಡಾಗಿವೆ. ಜನರ ಕಷ್ಟ ಅರಿತು ಅವರ ನೆರವಿಗೆ ಧಾವಿಸಬೇಕಿದ್ದ ರಾಜ್ಯ ಬಿಜೆಪಿ ನಾಯಕರು ನಾಯಕರು ಮುಖ್ಯಮಂತ್ರಿ ಬದಲಾವಣೆ, ಮಂತ್ರಿ ಪದವಿ ಉಳಿಸಿಕೊಳ್ಳುವುದರಲ್ಲಿ ಮಗ್ನರಾಗಿದ್ದಾರೆ.

 ಮತ್ತೊಬ್ಬ ಭ್ರಷ್ಟನನ್ನು ಸಿಎಂ ಮಾಡಿದರೆ ಏನು ಲಾಭ

ಮತ್ತೊಬ್ಬ ಭ್ರಷ್ಟನನ್ನು ಸಿಎಂ ಮಾಡಿದರೆ ಏನು ಲಾಭ

ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿ ಮಾಡಿದರೆ ಸಾಮಾನ್ಯ ಜನರಿಗೇನು ಲಾಭ? ಅದರ ಬದಲು ಅಧಿಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿರುವ ಬಿಜೆಪಿ ಪಕ್ಷ ಅಧಿಕಾರ ಬಿಟ್ಟು ತೊಲಗಿದರೆ ಜನ ನೆಮ್ಮದಿಯ ಬದುಕು ನಡೆಸುವಂತಾಗುತ್ತದೆ.

ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಘೋಷಿಸಿದ ಯಡಿಯೂರಪ್ಪಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಘೋಷಿಸಿದ ಯಡಿಯೂರಪ್ಪ

 ಹೆತ್ತವರಿಗೆ ಹೆಗ್ಗಣ ಮುದ್ದು

ಹೆತ್ತವರಿಗೆ ಹೆಗ್ಗಣ ಮುದ್ದು

ಎಷ್ಟಾದರೂ ಹೆತ್ತವರಿಗೆ ಹೆಗ್ಗಣ ಮುದ್ದು ಎಂಬ ಗಾದೆ ಮಾತಿನಂತೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರಿಗೆ ಬಿಎಸ್​ವೈ ಅವರೇ ಉತ್ತಮ ಮುಖ್ಯಮಂತ್ರಿಯಾಗಿ ಕಂಡಿದ್ದಾರೆ ಎಂದು ಟೀಕಿಸಿದ್ದಾರೆ.

Recommended Video

Hardik Pandya ಅವರ ಈ ನಡೆಗೆ ಖುಷಿಯಾದ ಸಮಾಜಿಕ ಜಾಲತಾಣ | Oneindia Kannada
 ಯಡಿಯೂರಪ್ಪ ರಾಜೀನಾಮೆ

ಯಡಿಯೂರಪ್ಪ ರಾಜೀನಾಮೆ

ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದ ದಿನವೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇದೀಗ ಮುಂದಿನ ಮುಖ್ಯಮಂತ್ರಿ ಯಾರಾಗಬಹುದು ಎಂಬ ಕುತೂಹಲ ಎದುರಾಗಿದೆ.

English summary
Former Chief Minister Siddaramaiah Reaction To BS Yediyurappa Resigned As CM Of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X