ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಡಿ ಲೇಡಿ ಬರೆದಿರುವ ಪತ್ರ ಗಾಬರಿ ಹುಟ್ಟಿಸುವಂತಿದೆ: ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಮಾರ್ಚ್ 29: ಸಿಡಿ ಲೇಡಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಬರೆದಿರುವ ಪತ್ರ ಭಯ ಹುಟ್ಟಿಸುವಂತಿದೆ ಎಂದು ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Recommended Video

ಯಡಿಯೂರಪ್ಪನನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ | Oneindia Kannada

ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಇ-ಮೇಲ್ ಕಳುಹಿಸಿದ್ದಾರೆ. ತಮ್ಮ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಯಲಿ, ನನ್ನ ತಂದೆ ತಾಯಿಗೆ ರಕ್ಷಣೆ ಕೊಡಿ ಎಂದು ಇ-ಮೇಲ್‌ನಲ್ಲಿ ಮನವಿ ಮಾಡಿದ್ದಾರೆ. ಇಂದು ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ.

ಸಿಡಿ ಲೇಡಿಯಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಇ-ಮೇಲ್ ರವಾನೆಸಿಡಿ ಲೇಡಿಯಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಇ-ಮೇಲ್ ರವಾನೆ

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಯುವತಿ ಬರೆದಿರುವ ಪತ್ರ ಭಯಹುಟ್ಟಿಸುವಂತಿದೆ ಎಂದು ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ, ನನ್ನ ಪೋಷಕರಿಗೆ ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿದ್ದಾರೆ. ಪ್ರಕರಣದಲ್ಲಿ ನನಗೆ ಮತ್ತು ನನ್ನ ಪೋಷಕರಿಗೆ ರಕ್ಷಣೆ ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಯುವತಿ ಪತ್ರ ಭಯ ಹುಟ್ಟಿಸುವಂತಿದೆ

ಯುವತಿ ಪತ್ರ ಭಯ ಹುಟ್ಟಿಸುವಂತಿದೆ

ಸಿಡಿ ಹಗರಣದ ಯುವತಿ ತನಗೆ ಪ್ರಾಣ ಭಯ ಇದೆ ಎಂದು ರಾಜ್ಯದ ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಬರೆದಿದ್ದಾರೆನ್ನಲಾದ ಪತ್ರ ಗಾಬರಿ ಹುಟ್ಟಿಸುವಂತಿದೆ. ರಾಜ್ಯದಲ್ಲಿ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪ್ರಶ್ನಿಸಿದ್ದಾರೆ.

ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಳು

ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಳು

ಸಂತ್ರಸ್ತ ಯುವತಿ ಪ್ರಾರಂಭದ ಆಡಿಯೋದಲ್ಲಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದೆ ಎಂದು ಹೇಳಿದ್ದಳು, ಈಗ ತನಗೆ ಪ್ರಾಣಭಯ ಇದೆ ಎಂದು ಪತ್ರ ಬರೆದಿದ್ದಾಳೆ. ಆ ಯುವತಿಯ ಪ್ರಾಣಕ್ಕೇನಾದರೂ ಅಪಾಯ ಎದುರಾದರೆ ರಾಜ್ಯದ ಮುಖ್ಯಮಂತ್ರಿ ಯಡುಯೂರಪ್ಪ, ಗೃಹ ಸಚಿವ ಬೊಮ್ಮಾಯಿ ಹಾಗೂ ಇಡೀ ಸರ್ಕಾರವೇ ಹೊಣೆ ಎಂದಿದ್ದಾರೆ.

Breaking: ಸಿಡಿ ಪ್ರಕರಣ: ಎಸ್‌ಐಟಿ ಮುಂದೆ ಹಾಜರಾದ ರಮೇಶ್ ಜಾರಕಿಹೊಳಿBreaking: ಸಿಡಿ ಪ್ರಕರಣ: ಎಸ್‌ಐಟಿ ಮುಂದೆ ಹಾಜರಾದ ರಮೇಶ್ ಜಾರಕಿಹೊಳಿ

ಎಸ್‌ಐಟಿ ಮೇಲೆ ಅಪನಂಬಿಕೆ ಹೊರಹಾಕಿರುವ ಯುವತಿ

ಎಸ್‌ಐಟಿ ಮೇಲೆ ಅಪನಂಬಿಕೆ ಹೊರಹಾಕಿರುವ ಯುವತಿ

ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಸಂತ್ರಸ್ತೆ ಯುವತಿ ಬರೆದ ಪತ್ರದಲ್ಲಿ ಎಸ್.ಐ.ಟಿ ಮೇಲೆಯೇ ಅಪನಂಬಿಕೆ ವ್ಯಕ್ತಪಡಿಸಿರುವುದು ಮಾತ್ರವಲ್ಲ, ಅವರು ಸಾಕ್ಷ್ಯನಾಶ ಮಾಡುತ್ತಿದ್ದಾರೆ, ತನ್ನ ವಿರೋಧಿಗಳ ಜೊತೆ ಷಾಮೀಲಾಗಿದ್ದಾರೆ ಎಂದೆಲ್ಲ ಆರೋಪಿಸಿರುವುದು ಗಂಭೀರವಾದ ವಿಷಯ.

ಸಂತ್ರಸ್ತ ಯುವತಿಯಿಂದ ನಿರಂತರ ವಿಡಿಯೋ ಬಿಡುಗಡೆ

ಸಂತ್ರಸ್ತ ಯುವತಿಯಿಂದ ನಿರಂತರ ವಿಡಿಯೋ ಬಿಡುಗಡೆ

ಸಂತ್ರಸ್ತ ಯುವತಿ ನಿರಂತರವಾಗಿ ವಿಡಿಯೋ, ಪತ್ರಗಳನ್ನು ಬಿಡುಗಡೆ ಮಾಡುತ್ತಿದ್ದರೆ, ರಾಜ್ಯದ ಮುಖ್ಯಮಂತ್ರಿಗಳು, ಮತ್ತು ಪೊಲೀಸರು ನಿರಂತರವಾಗಿ ಸಭೆ ನಡೆಸುತ್ತಿದ್ದಾರೆ. ಫಲಿತಾಂಶ ಏನು? ಎಂದು ಪ್ರಶ್ನಿಸಿದ್ದಾರೆ.

ಸಂತ್ರಸ್ತ ಯುವತಿ ವಿಚಾರಣೆ ನಡೆಸಲು ಸಾಧ್ಯವಾಗಿಲ್ಲ

ಸಂತ್ರಸ್ತ ಯುವತಿ ವಿಚಾರಣೆ ನಡೆಸಲು ಸಾಧ್ಯವಾಗಿಲ್ಲ

ಸಿಡಿ ಬಹಿರಂಗಗೊಂಡು 27 ದಿನಗಳು ಕಳೆದರೂ ಹಗರಣದ ಕೇಂದ್ರ ವ್ಯಕ್ತಿಯಾದ ಸಂತ್ರಸ್ತ ಯುವತಿಯ ವಿಚಾರಣೆ ನಡೆಸಲು ಸಾಧ್ಯವಾಗದ ಪೊಲೀಸರ ವೈಫಲ್ಯಕ್ಕೆ ಯಾರು ಹೊಣೆ ? ಅವರ ಮೇಲೆ ಪ್ರಭಾವ ಬೀರುತ್ತಿರುವವರು ಯಾರು?

ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕುಸಿದು ಬಿದ್ದಿರುವುದಕ್ಕೆ ಬೇರೆ ಸಾಕ್ಷಿ ಬೇಕೇ? ಎಂದು ಪ್ರಶ್ನಿಸಿದ್ದಾರೆ.

English summary
Opposition leader Reaction To CD Lady Letter To Karnataka Highcourt Chief Justice.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X