ಮಾನ-ಮರ್ಯಾದೆ ಇದ್ದರೆ ಮೊದಲು ರಾಜೀನಾಮೆ ಪಡೆದುಕೊಳ್ಳಿ: ಸಿದ್ದರಾಮಯ್ಯ

ಬೆಂಗಳೂರು, ಫೆ. 03: ಮಾನ-ಮರ್ಯಾದೆ ಇದ್ದರೆ ತಕ್ಷಣ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಯನ್ನು ಪಡೆದುಕೊಳ್ಳಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಕೆಪಿಸಿಸಿ ಆಯೋಜಿರುವ ಜನ-ಧ್ವನಿ ಜಾಥಾ ಕಾರ್ಯಕ್ರಮದ ಉದ್ಘಾಟನೆಗೆ ಮೊದಲು ಸಿದ್ದರಾಮಯ್ಯ ಅವರು ಮಾತನಾಡಿ ರಾಜೀನಾಮೆಗೆ ಆಗ್ರಹಿಸಿದರು.

ತಕ್ಷಣ ರಾಜೀನಾಮೆ ಪಡೆಯುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಗ್ರಹಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಮಾನ-ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಮ ಅವರನ್ನು ಆಗ್ರಹಿಸಿದ್ದಾರೆ. ಇಡೀ ದೇಶಕ್ಕೆ ರಮೇಶ್ ರಾಸಲೀಲೆ ಗೊತ್ತಾಗಿದೆ. ಹೀಗಾಗಿ ತಕ್ಷಣ ಪ್ರಕರಣದ ಕುರಿತು ಎಫ್‌ಐಆರ್ ದಾಖಲಾಗಬೇಕು. ಸೂಕ್ತ ತನಿಖೆ ನಡೆಯಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

 Siddaramaiah Reaction to Ramesh Jarakiholi CD Row in Bengaluru

Recommended Video

      'ರಾಸಲೀಲೆಗೆ' ಕರ್ನಾಟಕ ಭವನ ಉಪಯೋಗಿಸಿಕೊಂಡಿದ್ದು ತಪ್ಪು- ಶಾಸಕ ಯತೀಂದ್ರ ಸಿದ್ದರಾಮಯ್ಯ | Oneindia Kannada

      ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯೊಬ್ಬಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆಂದು ನಿನ್ನೆ (ಮಾರ್ಚ್ 02) ಕಬ್ಬನ್ ಪಾರ್ಕ್‌ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವರು ದೂರು ಸಲ್ಲಿಸಿದ್ದಾರೆ. ದೂರಿಗೆ ಸಂಬಂಧಿಸಿದಂತೆ ಇನ್ನೂ ಎಫ್‌ಐಆರ್ ಆಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರತಿಕ್ರಿಯೆ ಕೊಟ್ಟಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು, ದಿನೇಶ್ ಕಲ್ಲಹಳ್ಳಿ ಯಾರು ಅಂತಾ ನನಗೇ ಗೊತ್ತಿಲ್ಲ. ಜೊತೆಗೆ ಅದು ನಕಲಿ ವಿಡಿಯೋ. ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+