ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಪರಿಹಾರ ನಿಧಿಗೆ ತಲಾ 1 ಲಕ್ಷ ದೇಣಿಗೆಗೆ ಸಿದ್ದರಾಮಯ್ಯ ಮನವಿ

|
Google Oneindia Kannada News

ಬೆಂಗಳೂರು, ಏಪ್ರಿಲ್ 1: ಕೆಪಿಸಿಸಿ ಆರಂಭಿಸಿರುವ ಕೊರೊನ ಪರಿಹಾರ ನಿಧಿಗೆ ವೈಯಕ್ತಿಕವಾಗಿ ತಲಾ ಕನಿಷ್ಟ ಒಂದು ಲಕ್ಷ ರೂ.ಗಳನ್ನು ದೇಣಿಗೆಯಾಗಿ ನೀಡುವಂತೆ ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರಿಗೆ ವಿಧಾನಸಭೆಯ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.

ಕೊರೊನ ವೈರಸ್ ರಾಜ್ಯದ ಜನತೆಯನ್ನು ತೀವ್ರ ಸಂಕಷ್ಟಕ್ಕೀಡು ಮಾಡಿದೆ. ಇದರಿಂದಾಗಿ ದುಡಿಯುವ ವರ್ಗಕ್ಕೆ ಉದ್ಯೋಗಗಳಿಲ್ಲದೆ ಆಹಾರ, ನೀರು, ಔಷಧಿಗಳಿಗೆ ಪರದಾಡಬೇಕಾದ ಪರಿಸ್ಥಿತಿ ಉಂಟಾಗಿದೆ. ಮೊದಲೇ ಪ್ರವಾಹದಿಂದ ನಲುಗಿದ್ದ ನಾಡಿನ ರೈತ, ಕೂಲಿ ಕಾರ್ಮಿಕರನ್ನೂ ಸಹ ಈ ವೈರಸ್ ಕಂಗೆಡುವಂತೆ ಮಾಡಿದೆ.

ಕ್ವಾರಂಟೈನ್ನಲ್ಲಿರೋರನ್ನು ಪೊಲೀಸ್ರು ನೋಡಿಕೊಳ್ತಾರಾ?: ಸಿದ್ದರಾಮಯ್ಯ ಪ್ರಶ್ನೆಕ್ವಾರಂಟೈನ್ನಲ್ಲಿರೋರನ್ನು ಪೊಲೀಸ್ರು ನೋಡಿಕೊಳ್ತಾರಾ?: ಸಿದ್ದರಾಮಯ್ಯ ಪ್ರಶ್ನೆ

ಈ ಸಂದರ್ಭದಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳೆರಡೂ ಸನ್ನಿವೇಶವನ್ನು ಸಮರ್ಪಕವಾಗಿ ನಿಭಾಯಿಸಬೇಕಾಗಿತ್ತು. ಆದರೆ ಎರಡೂ ಸರ್ಕಾರಗಳಿಂದ ಪರಿಹಾರ ಕಾರ್ಯ ಸೂಕ್ತವಾಗಿ ನಡೆಯುತ್ತಿಲ್ಲ. ಈ ಸಂದರ್ಭದಲ್ಲಿ ನಾವೆಲ್ಲರೂ ಜನ ಕಂಗೆಡದಂತೆ ಅವರ ಜೊತೆ ನಿಂತು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾಗಿದೆ.

Siddaramaiah Request To Congress MLA And MP To Donate 1 Lakh

"ಕಾಂಗ್ರೆಸ್ ಕಾರ್ಯಕರ್ತರು ಕೊರೊನಾ ವೈರಸ್‌ಗೆ ಜನರಿಂದ ದೇಣಿಗೆ ಸಂಗ್ರಹಿಸುವಂತಿಲ್ಲ'

ಆದ್ದರಿಂದ ನಮ್ಮ ಪಕ್ಷದ ಶಾಸಕರು, ಸಂಸದರು ವೈಯಕ್ತಕವಾಗಿ ತಲಾ ಕನಿಷ್ಟ ಒಂದು ಲಕ್ಷ ರೂ. ಗಳ ದೇಣಿಗೆ ನೀಡಬೇಕೆಂದು ಕೋರುತ್ತೇನೆ. ಹಾಗೂ ತಮ್ಮ ತಮ್ಮ ಕ್ಷೇತ್ರಗಳಲ್ಲಿದ್ದುಕೊಂಡು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕೆಂದು ಶಾಸಕರಿಗೆ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.

English summary
Ex chief minister siddaramaiah request to congress mla and mp's to donate minimum 1 lakh to Corona Relief Fund.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X