ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಸಿಎಂಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು, ಜುಲೈ 18: ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆ ಸ್ಥಗಿತಗೊಳಿಸಿ ಗೌರವ ಧನ ಹೆಚ್ಚಳ ಹಾಗೂ ಇನ್ನಿತರ ಕೆಲವು ಬೇಡಿಕೆಗಳನ್ನಿಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಈವರೆಗೂ ಸರ್ಕಾರದ ಯಾವ ಸಚಿವ ಹಾಗೂ ಅಧಿಕಾರಿಯೂ ಮಾತುಕತೆಗೆ ಮುಂದಾಗಿಲ್ಲ.

Recommended Video

      BBMP commissioner Anil Kumar transferred | Oneindia Kannada

      ಇದೀಗ, ವಿಪಕ್ಷ ನಾಯಕ ಸಿದ್ದರಾಮಯ್ಯ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

      ಜುಲೈ 10 ರಿಂದ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆ ನಿಲ್ಲಿಸಿ ಮುಷ್ಕರ ಮಾಡುತ್ತಿದ್ದಾರೆ. ಕೊವಿಡ್ ಹೋರಾಟ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ ಎಂದು ಕರೆಯಲಾಯಿತು. ಆಶಾ ಕಾರ್ಯಕರ್ತೆಯರ ಕೆಲಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು. ಆದರೆ, ಅವರಿಗೆ ಸಿಗಬೇಕಾದ ಗೌರವ ಧನ ಮಾತ್ರ ಸರ್ಕಾರ ನೀಡುತ್ತಿಲ್ಲ ಎಂದು ಸಿದ್ದರಾಮಯ್ಯ ಸಿಎಂಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

      Siddaramaiah Request To Govt To Resolve The Problem Of Asha Worker

      ಆಶಾ ಕಾರ್ಯಕರ್ತೆಯರು ಮಾಸಿಕ ವೇತನ ಕೇವಲ 4000 ರಿಂದ 6000 ಸಾವಿರ ರೂಪಾಯಿಗಳು ಮಾತ್ರ, ಸರ್ಕಾರ ಅದನ್ನು 8000 ರಿಂದ 9000 ಸಾವಿರಕ್ಕೆ ಹೆಚ್ಚಿಸುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಿತ್ತು. ಆದರೆ, ಈವರೆಗೂ ಒಂದು ರೂಪಾಯಿ ಹೆಚ್ಚಳವಾಗಿಲ್ಲ ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

      ಕೊವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಏಪ್ರಿಲ್‌ನಲ್ಲಿ ಸರ್ಕಾರ ಘೋಷಣೆ ಮಾಡಿದ ವಿಶೇಷ ಆರ್ಥಿಕ ಪ್ಯಾಕೇಜ್‌ನಲ್ಲಿ ಸಹಕಾರ ಇಲಾಖೆಯಿಂದ 3000 ಸಾವಿರ ನೀಡುವುದಾಗಿ ಹೇಳಿತ್ತು. ಶೇಕಡಾ 50ರಷ್ಟು ಆಶಾ ಕಾರ್ಯಕರ್ತೆಯರಿಗೆ ಈ ಹಣ ಸಿಗಲೇ ಇಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

      ಕೊರೊನಾ ವೈರಸ್ ಬಿಕ್ಕಟ್ಟಿನಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವ ಧನ 12000 ರೂಪಾಯಿಗೆ ಹೆಚ್ಚಿಸಬೇಕು. ಹಾಗೂ ಕೊವಿಡ್ ಹೋರಾಟದ ಸಂದರ್ಭದಲ್ಲಿ ಅವರಿಗೆ ಸುರಕ್ಷಿತ ಸಾಮಾಗ್ರಿಗಳನ್ನು ನೀಡಬೇಕು. ಇದೆರೆಡು ಬಹಳ ಸರಳವಾದ ಬೇಡಿಕೆಗಳು. ಈ ಬೇಡಿಕೆಗಳನ್ನು ಸರ್ಕಾರ ಈಡೇರಿಸಿ ಆಶಾ ಕಾರ್ಯಕರ್ತೆಯರು ಸೇವೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ಸರ್ಕಾರಕ್ಕೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+