ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking:ಕೋಮು ಹಿಂಸಾಚಾರ; ಬಿಜೆಪಿಗರಿಂದ ಸುಳ್ಳು ಮಾಹಿತಿ ಆರೋಪ

|
Google Oneindia Kannada News

ಬೆಂಗಳೂರು, ಜುಲೈ 29: 'ರಾಜ್ಯದ ಯಾವ ಮೂಲೆಯಲ್ಲಿ ಕೋಮುಘರ್ಷಣೆ, ಹತ್ಯೆಗಳು ನಡೆದರೂ ನಮ್ಮ ಸರ್ಕಾರದ ಅವಧಿಯನ್ನು ಉಲ್ಲೇಖಿಸಿ ಸುಳ್ಳು ಮಾಹಿತಿ ನೀಡುವುದು ಬಿಜೆಪಿ ನಾಯಕರಿಗೆ ಚಟವಾಗಿ ಬಿಟ್ಟಿದೆ' ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅಕ್ರೋಶ ಹೊರಹಾಕಿದ್ದಾರೆ.

ಮಂಗಳೂರಿನಲ್ಲಿ ನಡೆದ ಮೂರು ಹತ್ಯೆಗಳ ಬೆನ್ನಲ್ಲೇ ವಿಜೆಪಿ ನಾಯಕರು ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಹತ್ಯೆಗಳಾಗಿದ್ದವು ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಇದಕ್ಕೆ ತಮ್ಮ ಅವಧಿಯಲ್ಲಿನ ಕೋಮುಹಿಂಸಾಚಾರ ಮತ್ತು ಕೈಗೊಂಡ ಕ್ರಮಗಳ ಕುರಿತ ಪುಸ್ತಕದ ಪುಟಗಳನ್ನು ಹಂಚಿಕೊಂಡು ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಚಾಟಿ ಬೀಸಿದ್ದಾರೆ.

ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದಿದ್ದರೆ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು: ಸಿದ್ದರಾಮಯ್ಯ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದಿದ್ದರೆ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು: ಸಿದ್ದರಾಮಯ್ಯ

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, 'ರಾಜ್ಯದ ಯಾವ ಮೂಲೆಯಲ್ಲಿ ಕೋಮುಘರ್ಷಣೆ, ಹತ್ಯೆಗಳು ನಡೆದರೂ ನಮ್ಮ ಸರ್ಕಾರದ ಅವಧಿಯನ್ನು ಉಲ್ಲೇಖಿಸಿ ಸುಳ್ಳು ಮಾಹಿತಿ ನೀಡುವುದು ಕರ್ನಾಟಕ ಬಿಜೆಪಿ ನಾಯಕರಿಗೆ ಚಟವಾಗಿಬಿಟ್ಟಿದೆ. ನಮ್ಮ ಸರ್ಕಾರದ ಕಾಲದಲ್ಲಿ ನಡೆದ ಕೋಮುಹಿಂಸಾಚಾರ ಮತ್ತು ಕೈಗೊಂಡ ಕ್ರಮಗಳ ಪುಸ್ತಕವನ್ನೇ ಪ್ರಕಟಿಸಿದ್ದೇವೆ, ಓದಿಕೊಳ್ಳಿ' ಎಂದಿದ್ದಾರೆ.

Siddaramaiah Says BJP Spreading False Information on Communal Violence

'ನಮ್ಮ ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ರಾಜಕೀಯ ಘರ್ಷಣೆ ಇಲ್ಲವೆ ಕೋಮುಗಲಭೆಗಳಿಗೆ ಸಂಬಂಧ ಪಟ್ಟಂತೆ ಒಟ್ಟು 23 ಹತ್ಯೆಗಳಾಗಿವೆ. ಇವುಗಳಲ್ಲಿ ಹನ್ನೆರಡು ಮೃತ ವ್ಯಕ್ತಿಗಳು ಹಿಂದೂಗಳು, ಉಳಿದ ಹನ್ನೊಂದು ಮಂದಿ ಮುಸ್ಲಿಮರು.' ಎಂದು ಮಾಹಿತಿ ನೀಡಿದ್ದಾರೆ.

'ಹನ್ನೆರಡು ಹಿಂದೂಗಳ ಹತ್ಯೆಯ ಎಂಟು ಪ್ರಕರಣಗಳಲ್ಲಿ ಪಿ.ಎಫ್.ಐ/ಎಸ್.ಡಿ.ಪಿ.ಐ ಸಂಘಟನೆಯ ಕಾರ್ಯಕರ್ತರು ಆರೋಪಿಗಳಾಗಿದ್ದಾರೆ. ಒಂದು ಪ್ರಕರಣದಲ್ಲಿ ಮಾತ್ರ ಕಾಂಗ್ರೆಸ್ ಕಾರ್ಯಕರ್ತ ಆರೋಪಿಯಾಗಿದ್ದಾನೆ. ಇವರಲ್ಲಿ 99 ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆ ನಡೆಯುತ್ತಿದೆ' ಎಂದಿದ್ದಾರೆ.

'2013 ರಿಂದ 2017ರ ವರೆಗಿನ ಅವಧಿಯಲ್ಲಿ ನಡೆದ ಹನ್ನೊಂದು ಮುಸ್ಲಿಮರ ಹತ್ಯೆಗಳ ಎಂಟು ಪ್ರಕರಣಗಳಲ್ಲಿ ಬಜರಂಗದಳ, ತಲಾ ಒಂದು ಪ್ರಕರಣಗಳಲ್ಲಿ ಹಿಂದೂ ಜಾಗರಣಾ ವೇದಿಕೆ, ಶ್ರೀರಾಮಸೇನೆ ಮತ್ತು ವಿಶ್ವ ಹಿಂದೂ ಪರಿಷತ್‌ ನ ಕಾರ್ಯಕರ್ತರು ಆರೋಪಿಗಳಾಗಿದ್ದಾರೆ. 115 ಆರೋಪಿಗಳ ವಿರುದ್ಧ ಕಾನೂನುಕ್ರಮ ಕೈಗೊಳ್ಳಲಾಗಿದೆ' ಎಂದು ಮಾಹಿತಿ ನೀಡಿದ್ದಾರೆ.

Siddaramaiah Says BJP Spreading False Information on Communal Violence

'ವೈಯಕ್ತಿಕ ಕಾರಣಗಳಿಗಾಗಿ ಹತ್ತು ಹತ್ಯೆಗಳಾಗಿದ್ದು 61 ವ್ಯಕ್ತಿಗಳನ್ನು ಬಂಧಿಸಲಾಗಿದೆ. ಪೊಲೀಸರು ಹತ್ಯೆಯ ಕಾರಣದ ತನಿಖೆ ನಡೆಸುತ್ತಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ತನಿಖೆ ಪೂರ್ಣಗೊಂಡಿರಲಿಲ್ಲ. ಈ ಎಲ್ಲ ಪ್ರಕರಣಗಳ ಮೊಕದ್ದಮೆಗಳ ಸಂಖ್ಯೆ ಸಮೇತ ಪುಸ್ತಕದಲ್ಲಿ ಪ್ರಕಟಿಸಲಾಗಿದೆ. ಈ ಹತ್ಯೆ ಪ್ರಕರಣಗಳ ತನಿಖೆಗೆ ಪೊಲೀಸರು ಸಮರ್ಥರಾಗಿದ್ದರೂ ವಿರೋಧ ಪಕ್ಷಗಳ ಒತ್ತಾಯಕ್ಕಾಗಿ ಕೆಲವು ಪ್ರಕರಣಗಳನ್ನು ಸಿಬಿಐ ಮತ್ತು ಎನ್ಐಎ ಗೆ ವಹಿಸಲಾಗಿತ್ತು. ಹೊನ್ನಾವರದ ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ಸಿಬಿಐಗೆ ಮತ್ತು ಬೆಂಗಳೂರಿನ ರುದ್ರೇಶ್ ಕೊಲೆ ಪ್ರಕರಣವನ್ನು ಎನ್ಐಎ ಗೆ ವಹಿಸಲಾಗಿದೆ' ಎಂದು ವಿವರಣೆ ನೀಡಿದ್ದಾರೆ.

'ಸಿದ್ದರಾಮಯ್ಯ ಅವರ ಕಾಲದಲ್ಲಿ 32 ಸರಣಿ ಕೊಲೆಗಳಾಗಿದ್ದವು. ಆಗ ಅವರು ಏನು ಮಾಡುತ್ತಿದ್ದರು. ಎಲ್ಲಾ ವಿಷಯಗಳಲ್ಲಿ ರಾಜಕಾರಣವನ್ನು ಮಾಡಬಾರದು. ಅವರ ಹೇಳಿಕೆಗೆ ಹೆಚ್ಚಿನ ಮಹತ್ವವಿಲ್ಲ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದರು.

Recommended Video

ರಾಜ್ಯದಲ್ಲಿರೋದು ನಿರ್ವೀರ್ಯ ಸರ್ಕಾರ: ರಾಜ್ಯ ಬಿಜೆಪಿ ಸರ್ಕಾರಕ್ಕೆ ಚಕ್ರವರ್ತಿ ಸೂಲಿಬೆಲೆ ತರಾಟೆ | OneIndia Kannada

English summary
Opposition leader Siddaramaiah has alleged that BJP is spreading false information regarding communal incidents. He quoted a book that show facts on these incidents. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X