ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೆಹಲಿಯ ಕೆಂಪುಕೋಟೆಯ ಮೇಲೆ ಧ್ವಜ ಹಾರಿಸಿದ್ದು ಬಿಜೆಪಿ ಕಾರ್ಯಕರ್ತ: ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು,ಜನವರಿ 27:ದೆಹಲಿಯ ಕೆಂಪುಕೋಟೆಯ ಮೇಲೆ ಧ್ವಜ ಹಾರಿಸಿದ್ದು ಬಿಜೆಪಿ ಕಾರ್ಯಕರ್ತ ಎಂದು ಹೇಳುವ ಮೂಲಕ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.

Recommended Video

ರೈತರ ಸಮಸ್ಯೆಗೆ ಸ್ಪಂದಿಸುವಲ್ಲಿ ಕೇಂದ್ರ ಸರ್ಕಾರ ಸೋತಿದೆ- ಮಾಜಿ CM Siddaramaiah | Oneindia Kannada

ರೈತರ ಪ್ರತಿಭಟನೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದವನು ಬಿಜೆಪಿ ಕಾರ್ಯಕರ್ತ‌ ಎಂಬುದು ಪುರಾವೆಸಹಿತ ಸಾಬೀತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರೈತ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ಮಾಡಿದರೆ ದೊಡ್ಡ ಬೆಲೆ ತೆರಬೇಕಾಗುತ್ತದೆ:ಸಿದ್ದರಾಮಯ್ಯ ರೈತ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ಮಾಡಿದರೆ ದೊಡ್ಡ ಬೆಲೆ ತೆರಬೇಕಾಗುತ್ತದೆ:ಸಿದ್ದರಾಮಯ್ಯ

ಇಂತಹ ಬಿಜೆಪಿ ರೈತರಿಗೆ ಭಯೋತ್ಪಾದಕರ ಬೆಂಬಲ ಇದೆಯೆಂದು ಹೇಳುತ್ತಿರುವುದು ನಾಚಿಕೆಗೇಡು. ರೈತ ಚಳವಳಿಯಲ್ಲಿ ಭಯೋತ್ಪಾದಕರು ಭಾಗಿಯಾಗಿದ್ದಾರೆ ಎನ್ನುವ ಮಾಹಿತಿ ಸರ್ಕಾರದ ಬಳಿ ಇದ್ದರೆ ಅವರನ್ನು ಬಂಧಿಸಬೇಕಿತ್ತಲ್ಲವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Siddaramaiah Says Reports Suggest That The Person Who Hoisted The Flag At Red Fort Is BJP Worker

ದೆಹಲಿಯಲ್ಲಿ ಟ್ರ್ಯಾಕ್ಟರ್ ಪರೇಡ್ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ. ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಳೆದ ಎರಡು ತಿಂಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯಲ್ಲಿ ನೂರಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡರೂ ರೈತ ವಿರೋಧಿ‌ ಕಾನೂನುಗಳನ್ನು ವಾಪಸು‌ ಪಡೆಯಲು ನಿರಾಕರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಅವರಿಗೆ ತನ್ನ ಪ್ರತಿಷ್ಠೆಯೇ ಮುಖ್ಯವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೆ, ಅವರ 56 ಇಂಚಿನ ಎದೆಯೊಳಗೆ ಬಡವರಿಗಾಗಿ ಮಿಡಿಯುವ ಹೃದಯವೇ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ರೈತರ ಪ್ರತಿಭಟನೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದವನು ಬಿಜೆಪಿ ಕಾರ್ಯಕರ್ತ‌ ಎಂಬುದು ಪುರಾವೆಸಹಿತ ಸಾಬೀತಾಗಿದೆ.

ಇಂತಹ ಬಿಜೆಪಿ ರೈತರಿಗೆ ಭಯೋತ್ಪಾದಕರ ಬೆಂಬಲ ಇದೆಯೆಂದು ಹೇಳುತ್ತಿರುವುದು ನಾಚಿಕೆಗೇಡು. ರೈತ ಚಳವಳಿಯಲ್ಲಿ ಭಯೋತ್ಪಾದಕರು ಭಾಗಿಯಾಗಿದ್ದಾರೆ ಎನ್ನುವ ಮಾಹಿತಿ ಸರ್ಕಾರದ ಬಳಿ ಇದ್ದರೆ ಅವರನ್ನು ಬಂಧಿಸಬೇಕಿತ್ತಲ್ಲವೇ?

English summary
Former Chief Minister Siddaramaiah Said that Reports suggest that the person who hoisted the flag at Red fort is BJP Worker But, the farmers are being branded as terrorists &BJP leaders should be ashamed to this
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X