ಜಾಗತಿಕ ನಗರಕ್ಕೆ ₹1.15 ಲಕ್ಷ ಕೋಟಿ, ರಾಜ್ಯದ ಎರಡು ಭಾಗಗಳಿಗೆ ವಿಶೇಷ ಅನುದಾನ ಕೊಡಿ: Siddaramaiah

ದೆಹಲಿ/ಬೆಂಗಳೂರು, ಜೂನ್ 25: ಸರ್ಕಾರಿ ಉದ್ದೇಶಕ್ಕಾಗಿ ದೆಹಲಿಗೆ ಭೇಟಿ ನೀಡಿದ್ದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಮಹತ್ವದ ವಿಚಾರ ಚರ್ಚೆ ಮಾಡಿದ್ದಾರೆ. ಈ ವೇಳೆ ಅವರು ಹಣಕಾಸು ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಅಗತ್ಯ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಕರ್ನಾಟಕದ ಎರಡು ಭಾಗಗಳ ಅಭಿವೃದ್ಧಿಗೆ ವಿಶೇಷ ಆರ್ಥಿಕ ಶಕ್ತಿ ಒದಗಿಸುವಂತೆ ಕೋರಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರು ಜಾಗತಿಕ ನಗರವಾಗಿದೆ. ನಗರದ ಬಂಡವಾಳ ಕಾರ್ಯಗಳಿಗೆ ₹1.15 ಲಕ್ಷ ಕೋಟಿ ಬೇಕಾಗಿದೆ. ಅದಕ್ಕಾಗಿ ವಿಶೇಷ ಅನುದಾನ ನೀಡುವಂತೆ ಅವರು ಕೇಳಿದರು.

Siddaramaiah Seeks Rs 1 15 Lakh Crore for Bengaluru Special Grants for Two Karnataka Regions

ರಾಜ್ಯದ ಮಲೆನಾಡು ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಪ್ರವಾಹದಿಂದಾಗುವ ಅನಾಹುತಗಳನ್ನು ನಿಭಾಯಿಸಲು ವಿಶೇಷ ಅನುದಾನ, ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಅನುದಾನ ನೀಡಬೇಕು ಎಂದರು. ಅಲ್ಲದೇ ಕೆಲವು ಬಿಲ್‌ಗಳನ್ನು ಜಾರಿಗೆ ತರಲು ಕೇಂದ್ರ ಅನುಮೋದನೆ ನೀಡಬೇಕು ಎಂದು ಅವರು ವಿವರಿಸಿದ್ದಾರೆ.

ಒಂದು ವಾರದ ಹಿಂದೆ 16ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಭೇಟಿ ಮಾಡಿದ್ದು, ಎರಡನೇ ಹೆಚ್ಚುವರಿ ಮನವಿಯನ್ನು ನೀಡಲಾಗಿದೆ. 14ನೇ ಹಣಕಾಸು ಆಯೋಗದಲ್ಲಿ 4.7% ತೆರಿಗೆ ಹಂಚಿಕೆಯಾಗಿದೆ. 15ನೇ ಹಣಕಾಸು ಆಯೋಗದಲ್ಲಿ 3.6% ಆಗಿದೆ. ಶೇಕಡಾ 1.1% ಕಡಿಮೆ, ಇದು ಒಟ್ಟಾರೆ ಅನುದಾನ ಹಂಚಿಕೆಯಲ್ಲಿ ಶೇ. 23% ಕಡಿಮೆಯಾಗಿದೆ. 5 ವರ್ಷಗಳಲ್ಲಿ ಒಟ್ಟು ₹80,000 ಕೋಟಿ ನಷ್ಟವಾಗಿದೆ ಎಂದು ಅವರು ತಿಳಿಸಿದರು.

₹80,000 ಕೋಟಿ ಅನುದಾನ ಕಡಿಮೆ

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ₹63 ಸಾವಿರ ಕೋಟಿ ಅನ್ಯಾಯವಾಗಿದೆ. ರಾಜ್ಯಕ್ಕೆ ವಿಶೇಷ ಅನುದಾನ ₹5,495 ಕೋಟಿ ಮೀಸಲಿಡಲಾಗಿದೆ. ಪೆರಿಫೆರಲ್ ರಿಂಗ್ ರೋಡ್ ಗೆ ₹3,000 ಕೋಟಿ, ಬೆಂಗಳೂರಿನ ಕೆರೆಗಳ ಅಭಿವೃದ್ಧಿಗಾಗಿ ₹3,000 ಕೋಟಿ ಸೇರಿ ಒಟ್ಟು ₹11,495 ಕೋಟಿ ಅನುದಾನ ಘೋಷಣೆ ಮಾಡಿದೆ. ಒಟ್ಟಾರೆಯಾಗಿ ₹80,000 ಕೋಟಿ ಕಡಿಮೆಯಾಗಿದೆ.

ಕರ್ನಾಟಕ ಜಿಡಿಪಿಯಲ್ಲಿ ಮೂರನೇ ಸ್ಥಾನ

ದೇಶದ ಜನಸಂಖ್ಯೆಯಲ್ಲಿ ಕರ್ನಾಟಕದ ಜನಸಂಖ್ಯೆ 5% ರಷ್ಟಿದೆ. ಕರ್ನಾಟಕ ಶೇ.8.7 ಜಿಡಿಪಿಗೆ ಕೊಡುಗೆ ನೀಡುತ್ತಿದೆ. 2011-12ರಲ್ಲಿ 7.6% ಇದ್ದದ್ದು, ಈಗ 8.7% ಕೊಡುಗೆ ನೀಡುತ್ತಿದೆ. ದೇಶಕ್ಕೆ ಜಿಎಸ್‌ಟಿ ಕೊಡುಗೆ ನೀಡುವುದರಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಜಿ.ಡಿ.ಪಿ ನಲ್ಲಿ ನಮ್ಮ ರಾಜ್ಯ ದೇಶದ ಮೂರನೇ ಸ್ಥಾನದಲ್ಲಿದೆ. ಯಾವ ರಾಜ್ಯವು ಹೆಚ್ಚು ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡುತ್ತಿದೆ ಎನ್ನುವುದನ್ನು ಗಮನದಲ್ಲಿಟ್ಟುಕೊಂಡು ಅನದಾನ ಒದಗಿಸುವಂತೆ ಅವರು ಮನವಿ ಮಾಡಿದ್ದಾರೆ. ಇದಕ್ಕೆ ವಿತ್ತ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+